ಬಾಲಿವುಡ್ನ ಕೊರಿಯೋಗ್ರಾಫರ್ ಸರೋಜ್ ಖಾನ್ ನಿಧನ
Team Udayavani, Jul 3, 2020, 8:09 AM IST
ಮುಂಬೈ: ಬಾಲಿವುಡ್ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಸರೋಜ್ ಖಾನ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಜೂನ್ 20ರಂದು ಮುಂಬೈನ ಬಾಂದ್ರಾದಲ್ಲಿರುವ ಗುರು ನಾನಕ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಅವರಿಗೆ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.
1974ರಲ್ಲಿ ಬಿಡುಗಡೆಯಾದ ಹಿಂದಿ ಚಿತ್ರ “ನಾಮ್’ ಮೂಲಕ ನೃತ್ಯ ಸಂಯೋಜಕಿಯಾಗಿ ಬೆಳಕಿಗೆ ಬಂದ ಸರೋಜ್ ಖಾನ್, ಬಾಲಿವುಡ್ನ ಅನೇಕ ಹಿಟ್ ಚಿತ್ರಗಳಲ್ಲಿ ನೃತ್ಯ ಸಂಯೋಜಕಿಯಾಗಿ ಗುರುತಿಸಿಕೊಂಡಿದ್ದು, ಸುಮಾರು 2 ಸಾವಿರಕ್ಕೂ ಅಧಿಕ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಇನ್ನು ಸರೋಜ್ ಕೊನೆಯಾದಾಗಿ 2019ರಲ್ಲಿ ತೆರೆಕಂಡ “ಕಳಂಕ್’ ಚಿತ್ರದ ತಬಾ ಹೊಗಾಯೆ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದರು.
ಒಟ್ಟು ಮೂರು ಬಾರಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾಗಿರುವ ಸರೋಜ್ ಖಾನ್, ಪತಿ ಸೋಹನ್ಲಾಲ್, ಪುತ್ರ ಹಮೀದ್ ಖಾನ್ ಹಾಗೂ ಪುತ್ರಿ ಹೀನಾ ಖಾನ್ ಅವರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?