ಮಹಿಳೆಗೆ ಸೋಂಕು: ಕೆಇಬಿ ಮುಖ್ಯ ರಸ್ತೆ ಸೀಲ್‌ಡೌನ್‌

Team Udayavani, Jul 3, 2020, 11:52 AM IST

03-July-05

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇವದುರ್ಗ: ಪಟ್ಟಣದ ಕೆಇಬಿ ಮುಖ್ಯ ರಸ್ತೆ ಪಕ್ಕದಲ್ಲಿರುವ ಮನೆಯ ಮಹಿಳೆಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆ ತಾಲೂಕು ಆಡಳಿತ ಗುರುವಾರ ಈ ಪ್ರದೇಶವನ್ನು ಸೀಲ್‌ಡೌನ್‌ ಮಾಡಿದೆ.

ಸೋಂಕಿತ ಮಹಿಳೆಯ ಕುಟುಂಬ ಸದಸ್ಯರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಹೋಂ ಕ್ವಾರಂಟೈನ್‌ ನಲ್ಲಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ. ಮನೆ ಅಕ್ಕಪಕ್ಕದ ಅಂಗಡಿಗಳನ್ನು ಮುಚ್ಚಲಾಗಿದೆ. ಇನ್ನು ಆಶೋಕ ವಾರ್ಡ್‌ಗೆ ಇತ್ತೀಚೆಗೆ ಮುಂಬಯಿನಿಂದ ಆಗಮಿಸಿದ 8 ಜನರಲ್ಲಿ ನಾಲ್ವರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಇದರಲ್ಲಿ 10 ವರ್ಷದ ಮಗು, 80 ವರ್ಷ ವೃದ್ಧೆ ಸಹ ಸೇರಿದ್ದಾರೆ. ಇಬ್ಬರ ವರದಿ ನೆಗೆಟಿವ್‌ ಬಂದಿದ್ದು, ಮತ್ತೊಮ್ಮೆ ಪರೀಕ್ಷೆಗೆ ಕಳಿಸಲಾಗಿದೆ. ಇನ್ನುಳಿದ ಇಬ್ಬರ ವರದಿ ಬರಬೇಕಾಗಿದೆ. ಮುಂಬಯಿ ನಂಜು ಇದೀಗ ವಾರ್ಡ್‌ನಲ್ಲಿ ಆತಂಕ ಮೂಡಿಸಿದೆ.

ಸೀಲ್‌ ಕಡ್ಡಾಯ: ಪಟ್ಟಣ ಸೇರಿ ತಾಲೂಕಿನಾದ್ಯಂತ ಖಾಸಗಿ ಆಸ್ಪತ್ರೆಗೆ ಕೆಮ್ಮು, ಜ್ವರ, ಉಸಿರಾಟ, ನೆಗಡಿ ಸೇರಿ ಚಿಕಿತ್ಸೆಗೆಂದು ಬರುವವರ ಕೈಗೆ ಸೀಲ್‌ ಹಾಕುವಂತೆ ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಪ್ರತಿಯೊಂದು ಖಾಸಗಿ ಆಸ್ಪತ್ರೆಗೆ ಸೀಲ್‌ ಒದಗಿಸಲಾಗಿದೆ. ಕೋವಿಡ್ ಲಕ್ಷಣ ಕಂಡುಬಂದವರಿಗೆ ಸೀಲ್‌ ಹಾಕಿ ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಳೆಗೆ ಪಾಸಿಟಿವ್‌ ದೃಢಪಟ್ಟಿರುವ ಹಿನ್ನೆಲೆ ಮನೆಯವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳಿಸಲಾಗಿದೆ. ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೀಲ್‌ ನೀಡಲಾಗಿದೆ. ಕೆಮ್ಮು, ಜ್ವರ, ಉಸಿರಾಟ ಸೇರಿ ಇತರೆ ಸಮಸ್ಯೆ ಎಂದು ಬರುವವರಿಗೆ ಕೈಗೆ ಸೀಲ್‌ ಹಾಕಲು ಸೂಚಿಸಲಾಗಿದೆ.
ಡಾ| ಬನದೇಶ,
ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.