ಮೋದಿಯಲ್ಲಿ ಅರಸು ಕಾಣುತ್ತಿರುವೆ: ವಿಶ್ವನಾಥ್‌

Team Udayavani, Jul 5, 2020, 5:18 AM IST

asu modi

ಮೈಸೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರಿಗೂ ಗೌರವ ಕೊಡುವುದಿಲ್ಲ, ಕಾಂಗ್ರೆಸ್‌ ಪ್ರಧಾನಿಯಾದವರಿಗೂ ಗೌರವ ಕೊಟ್ಟಿಲ್ಲ. ನೀವು ಗೌರವ ಕೊಡುವುದನ್ನೇ ಕಲಿತಿಲ್ಲ ಎಂದು ಮಾಜಿ ಸಚಿವ  ಎಚ್‌.ವಿಶ್ವನಾಥ್‌ ಕುಟುಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರಿಯಾಗಿ ಮಾತನಾಡು ಎಂದು ಉತ್ತರ  ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಪತ್ರ ಬರೆದು ರಾಹುಲ್‌ ಗಾಂಧಿಗೆ ಬುದ್ಧಿ ಹೇಳಿದ್ದಾರೆ. ದೇಶದ ಸಮಗ್ರತೆ ವಿಚಾರ ಬಂದಾಗ ಸರಿಯಾಗಿ ಮಾತನಾಡಬೇಕು. ನೀವು ನಿಮ್ಮ ಪಕ್ಷದ ಪ್ರಧಾನಿಗಳಿಗೆ ಸರಿಯಾದ ಗೌರವ ಕೊಟ್ಟಿಲ್ಲ. ಮನಮೋಹನ್‌ ಸಿಂಗ್‌, ನರಸಿಂಹರಾವ್‌ ಅವರನ್ನು ನೀವು ಹೇಗೆ ನಡೆಸಿಕೊಂಡಿರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಪದ ಪ್ರಯೋಗ ಸಲ್ಲದು: ಪ್ರಧಾನಿ ನರೇಂದ್ರಮೋದಿ ಮೇಲೆ ವಿಪಕ್ಷ ನಾಯಕರ ಪದ ಪ್ರಯೋಗವನ್ನು ದೇಶದ ಜನರು ಮೆಚ್ಚುವುದಿಲ್ಲ. ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಕೂಡ ಮೋದಿಯನ್ನು  ಟೀಕಿಸಿದ್ದಾರೆ. ಪ್ರಧಾನಿ ಮೇಲೆ ವಿಪಕ್ಷಗಳು ಮಾಡಿರುವ ಪದ ಪ್ರಯೋಗ ದೇಶದ ಜನರು ಮೆಚ್ಚುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸಾಧನೆ ಏನು? ಮೋದಿ ಸಾಧನೆ ಏನು? ಮನಗಾಣಬೇಕು. ದೊಡ್ಡ ದೊಡ್ಡವರೆಲ್ಲಾ ಅಪ್ರಬುದಟಛಿರಾಗಿ ಮಾತಾಡುತ್ತಿದ್ದಾರೆ. ನಾನು ದೇವರಾಜ ಅರಸ್‌ ಅವರನ್ನು ಮೋದಿಯಲ್ಲಿ ಕಾಣುತ್ತಿದ್ದೇನೆ. ಅಹಿಂದ ಪ್ರಧಾನಿಯನ್ನು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಅನ್ನಭಾಗ್ಯ ನಿಮ್ಮ ಕಲ್ಪನೆಯಲ್ಲ: ಅನ್ನಭಾಗ್ಯದ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ, ಅದು ಕೂಡ ನಿಮ್ಮ ಸಾಧನೆಯಲ್ಲ. ಪ್ರಧಾನಿ ವಿರುದಟಛಿ ದಾಖಲೆ ಇದ್ದರೆ ಬಿಡುಗಡೆ ಮಾಡಿ, ಅದುಬಿಟ್ಟು, ಇಲ್ಲಸಲ್ಲದ ಹೇಳಿಕೆ ನೀಡಿ, ಹಿಟ್‌  ಅಂಡ್‌ ರನ್‌ ಮಾಡಬೇಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದಟಛಿ ಆರೋಪ ಇದ್ದರೆ ದಾಖಲೆ ಕೊಡಿ. ಸುಮ್ಮನೆ ಮಾತಾಡಬೇಡಿ ಎಂದು ವಿಶ್ವನಾಥ್‌ ಎಚ್ಚರಿಸಿದರು.

ಎಂಎಲ್ಸಿ ಮಾಡಲು ತೊಡಕಿಲ್ಲ: ರಾಜ್ಯದಲ್ಲಿ ಎರಡು ಪ್ರತಿರೋಧದ ಪಕ್ಷಗಳು ಸೇರಿಕೊಂಡು ಸರ್ಕಾರ ರಚಿಸಿದ್ದೇ ಬ್ಲಿಂಡರ್‌. ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರ ರಚನೆ ಮಾಡಿದ ಕ್ರಮವನ್ನು ಬ್ಲಿಂಡರ್‌ ಎಂದು ಟೀಕಿಸಿದ ವಿಶ್ವನಾಥ್‌, ನನಗೆ  ಎಂಎಲ್‌ಸಿ ಸ್ಥಾನ ಸಿಗದಿದ್ದರೆ ಆಕಾಶಕ್ಕೂ ಹೋಗುವುದಿಲ್ಲ, ಪಾತಾಳಕ್ಕೂ ಹೋಗುವುದಿಲ್ಲ. ವಿಶ್ವನಾಥ್‌ ವಿಶ್ವನಾಥನಾಗೆ ಇರುವೆ. ನನಗೆ ವಿಧಾನ ಪರಿಷತ್‌ ಸ್ಥಾನ ನೀಡಲು ಯಾವುದೇ ರೀತಿಯ ಕಾನೂನು ತೊಡಕಿಲ್ಲ ಎಂದು  ಹೇಳಿದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.