ಅಕ್ರಮ ನೀರು ಬಳಕೆದಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಡಿಸಿ

Team Udayavani, Jul 5, 2020, 9:05 AM IST

ಅಕ್ರಮ ನೀರು ಬಳಕೆದಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಡಿಸಿ

ಸಿಂಧನೂರು: ರಾಯಚೂರು ಹಾಗೂ ಕೊಪ್ಪಳ ಅವಳಿ ಜಿಲ್ಲೆಗಳ ಜೀವನಾಡಿಯಾದ ತುಂಗಭದ್ರಾ ಜಲಾಶಯದ ಎಡದಂಡೆ ನಾಲೆ ನೀರನ್ನು ಅಕ್ರಮವಾಗಿ ಬಳಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ನಗರದ ಕಮ್ಮವಾರಿ ಭವನದಲ್ಲಿ ಕೊಪ್ಪಳ ಹಾಗೂ ರಾಯಚೂರು ಅವಳಿ ಜಿಲ್ಲೆಗಳ ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಬಿಡುವ ವಿಚಾರವಾಗಿ ಶನಿವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಕಳೆದ ವರ್ಷದಿಂದ ಎಡದಂಡೆ ನಾಲೆಯ ನೀರನ್ನು ಅನಧಿಕೃತವಾಗಿ ಬಳಕೆ ಕುರಿತಂತೆ ಮುಖ್ಯಮಂತ್ರಿಗಳ ಆದೇಶ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಆದೇಶದಂತೆ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಡದಂಡೆ ನಾಲೆಯಿಂದ ಯಾರಾದರೂ ಅಕ್ರಮವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆದರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಪ್ರತಿ ಗ್ರಾಮ ಮಟ್ಟದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಎಲ್ಲೆಲ್ಲಿ ನಾಲೆಗೆ ಅಕ್ರಮವಾಗಿ ಪಂಪ್‌ ಸೆಟ್‌ ಅಳವಡಿಕೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಅಧಿಕಾರಿಗಳಿಗೆರ ಮಾಹಿತಿ ಒದಗಿಸಬೇಕು ಎಂದರು.

ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್‌ ವಿಕಾಸ ಕಿಶೋರ್‌ ಮಾತನಾಡಿ, ರೈತರು ಭತ್ತದ ಬದಲಿಗೆ ಇತರೆ ಬೆಳೆ ಬೆಳೆಯಲು ಮುಂದಾಗಬೇಕು. ಕೊಪ್ಪಳ ಜಿಲ್ಲೆಯಲ್ಲಿ ಅತೀ ಹೆಚ್ಚು ರೈಸ್‌ ಮಿಲ್‌ ಗಳಿವೆ. ಈ ರೈಸ್‌ ಮಿಲ್‌ಗ‌ಳ ತ್ಯಾಜ್ಯವನ್ನು ಯಾವುದೇ ಕಾರಣಕ್ಕೂ ನದಿ ಹಾಗೂ ಕಾಲುವೆಗಳಿಗೆ ಬಿಡಬಾರದು. ಅಕ್ರಮವಾಗಿ ನೀರು ಬಳಸುವವರ ಬಗ್ಗೆ ಮಾಹಿತಿ ಇದ್ದರೆ ಜನತೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಮಾತನಾಡಿ, ರೈತರು ಯಾವುದೇ ಕಾರಣಕ್ಕೂ ನೀರಿನ ವಿಚಾರದಲ್ಲಿ ಗುಂಪುಗಾರಿಕೆ ಮಾಡಬಾರದು. ಅಕ್ರಮ ನೀರು ಬಳಕೆದಾರರ ಮೇಲೆ ಸೂಕ್ತ ಕ್ರಮಜರುಗಿಸಲಾಗುವುದು ಎಂದರು. ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೇಣುಕಾ ಕೆ. ಸೇರಿದಂತೆ ಅವಳಿ ಜಿಲ್ಲೆಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಕಾಲುವೆಗೆ ಅನಧಿಕೃತವಾಗಿ ಪಂಪ್‌ಸೆಟ್‌ ಅಳವಡಿಸಿ 2 ಲಕ್ಷಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ನೀರಾವರಿ ಮಾಡಲಾಗುತ್ತಿದೆ. ಇದರಿಂದ ಸಿರವಾರ ಹಾಗೂ ಯರಮರಸ್‌ ಕೆಳಭಾಗದ ರೈತರ ಜಮೀನುಗಳಿಗೆ ಸರಿಯಾಗಿ ನೀರು ದೊರಕುತ್ತಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಡಿವಾಣ ಹಾಕಿ ಕೆಳಭಾಗದ ರೈತರ ಜಮೀನುಗಳಿಗೆ ನೀರು ಒದಗಿಸುವ ವ್ಯವಸ್ಥೆ ಮಾಡಬೇಕು. –ಚಾಮರಸ ಪಾಟೀಲ, ರೈತ ಮುಖಂಡ

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.