ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

Team Udayavani, Jul 6, 2020, 2:35 PM IST

huballi-tdy-1

ಹುಬ್ಬಳ್ಳಿ: ಕೋವಿಡ್ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರಕಾರ ಘೋಷಿಸಿರುವ ರವಿವಾರದ ಲಾಕ್‌ ಡೌನ್‌ಗೆ ನಗರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಅಗತ್ಯ ವಸ್ತುಗಳ ವ್ಯಾಪಾರ ಹೊರತುಪಡಿಸಿ ಉಳಿದೆಲ್ಲವೂ ಬಹುತೇಕ ಸ್ಥಗಿತಗೊಂಡಿದ್ದವು.

ನಗರದ ಪ್ರಮುಖ ರಸ್ತೆ, ಮಾರುಕಟ್ಟೆ, ಆಟೋ ರಿಕ್ಷಾ, ಬಸ್‌ಗಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಗಳನ್ನು ಹಾಕಿ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಿದ್ದರು. ಪಾರ್ಸಲ್‌ ನೀಡುವಂತಹ ದೊಡ್ಡ ಹೋಟೆಲ್‌ಗ‌ಳನ್ನು ಹೊರತುಪಡಿಸಿ ಸಣ್ಣಪುಟ್ಟ ಹೋಟೆಲ್‌ ಗಳು ಮುಚ್ಚಿದ್ದವು. ತುರ್ತು ಕೆಲಸ ನಿಮಿತ್ತ ಹೊರಬಂದವರನ್ನು ಹೊರತುಪಡಿಸಿ ವಾಹನ ಹಾಗೂ ಜನರ ಸಂಚಾರ ಇರಲಿಲ್ಲ. ಅಲ್ಲೊಂದು ಇಲ್ಲೊಂದು ದ್ವಿಚಕ್ರ ವಾಹನ ಓಡಾಟ ಹಾಗೂ ವಾಹನಗಳಷ್ಟೇ ರಸ್ತೆಗಿಳಿದಿದ್ದವು.

ಸಾರ್ವಜನಿಕರ ಬೆಂಬಲ: ಸೋಂಕು ತಡೆಗೆ ಲಾಕ್‌ಡೌನ್‌ ಪರಿಣಾಮಕಾರಿ ಔಷಧಿ ಎನ್ನುವುದು ಸಾರ್ವಜನಿಕರ ಅರಿವಿಗೆ ಬಂದಂತಿದ್ದು, ರವಿವಾರದ ಲಾಕ್‌ಡೌನ್‌ ಗೆ ಬಹುತೇಕ ಸ್ಪಂದನೆ ವ್ಯಕ್ತವಾಗಿದೆ. ಹಳೇ ಹುಬ್ಬಳ್ಳಿ ಕೆಲ ಭಾಗದಲ್ಲಿ ಒಂದಿಷ್ಟು ಜನರ ಓಡಾಟ ಹೊರತುಪಡಿಸಿದರೆ ನಗರದ ಬಹುತೇಕ ಪ್ರದೇಶಗಳಲ್ಲಿ ಜನ ಸಂಚಾರ ಇರಲಿಲ್ಲ. ಆಯಾ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ರಸ್ತೆಗಳಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡಲಾಯಿತು. ಕೆಲವೆಡೆ ಅನಗತ್ಯವಾಗಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರೆ, ಇನ್ನು ಕೆಲವೆಡೆ ಎಚ್ಚರಿಕೆ ನೀಡಿ ವಾಪಸ್‌ ಕಳುಹಿಸಿದರು. ಪೊಲೀಸರು ಕೂಡ ಸೋಂಕಿನ ಭಯದಿಂದ ಮೊದಲಿನಂತೆ ಸವಾರರನ್ನು ತಡೆದು ವಿಚಾರಣೆ ಮಾಡುವ ಬದಲು ಮುನ್ನೆಚ್ಚರಿಕಾ ಕ್ರಮವಾಗಿ ದೂರದಿಂದಲೇ ಲಾಠಿ ತೋರಿಸಿ ಓಡಿಸುತ್ತಿದ್ದುದು ಕಂಡು ಬಂತು.

ಕೆಲವೆಡೆ ಕಿರಾಣಿ ಅಂಗಡಿ, ಮಾಂಸದಂಗಡಿ ಕಾರ್ಯನಿರ್ವಹಿಸಿದರೆ ಬಹುತೇಕ ಕಡೆಗಳಲ್ಲಿ ಮಾಲೀಕರು ಸ್ವಯಂಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದರು. ಇನ್ನೂ ಕೆಲವರು ಬೆಳಗ್ಗೆ ಒಂದೆರಡು ಗಂಟೆ ಮಾತ್ರ ಕಾರ್ಯನಿರ್ವಹಿಸಿ ಬಾಗಿಲು ಹಾಕಿದರು. ಕೆಲವೆಡೆ ಪೊಲೀಸರು ಮಾಂಸದ ಅಂಗಡಿಗಳನ್ನು ಮುಚ್ಚಿಸಿರುವ ಘಟನೆಗಳು ಕೂಡ ನಡೆದವು. ಡಿಸಿ ನಿತೇಶ ಪಾಟೀಲ, ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ನಗರದ ವಿವಿಧೆಡೆ ಆಗಮಿಸಿ ಲಾಕ್‌ಡೌನ್‌ ಪರಿಸ್ಥಿತಿ ಪರಿಶೀಲಿಸಿದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.