ಮತ್ಸ್ಯ ಸಂಪದ ಯೋಜನೆ ಸಕಾಲಕ್ಕೆ ಜಾರಿಯಾಗಲಿ: ಡಿಸಿ

Team Udayavani, Jul 8, 2020, 10:15 AM IST

ಮತ್ಸ್ಯ ಸಂಪದ ಯೋಜನೆ ಸಕಾಲಕ್ಕೆ  ಜಾರಿಯಾಗಲಿ: ಡಿಸಿ

ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಲಾಭ ಸಾರ್ವಜನಿಕರಿಗೆ ಸಕಾಲದಲ್ಲಿ ದೊರೆಯುವಂತಾಗಬೇಕು. ಇದಕ್ಕಾಗಿ ಅಧಿಕಾರಿಗಳು ಜಿಲ್ಲಾಮಟ್ಟದ ಸಮಿತಿ ರಚಿಸಿ ಹಾಗೂ ವ್ಯವಸ್ಥಿತ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾ ಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಮತ್ಸ್ಯ ಯೋಜನೆ ಜಿಲ್ಲಾ ಸಮಿತಿ ಕ್ರಿಯಾ ಯೋಜನೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಎರಡು ಬೃಹತ್‌ ಜಲಾಶಯ ಹಾಗೂ 189 ಕೆರೆಗಳು ಮತ್ತು ಕೃಷಿ ಹೊಂಡಗಳಿವೆ. ಈ ಕೊಳಗಳ ಜಲ ಸಂಪನ್ಮೂಲ ಸದ್ಬಳಕೆಗಾಗಿ ಮೀನುಗಾರಿಕೆಗೆ ಮತ್ತಷ್ಟು ಅವಕಾಶಗಳು ದೊರೆಯುವಂತೆ ಕ್ರಿಯಾ ಯೋಜನೆ ರೂಪಿಸಿ ಎಂದರು.

ಮತ್ಸ್ಯ ಸಂಪದ ಯೋಜನೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ವಿಫುಲ ಅವಕಾಶಗಳಿದ್ದು, ಮೀನುಗಾರಿಕೆಗೆ ಸಹಾಯವಾಗಲು ವಾಹನಗಳ ಖರೀದಿಗೆ ಶೇ.60 ರಿಯಾಯತಿ ಹಾಗೂ ಸಾಮಾನ್ಯ ವರ್ಗದವರಿಗೆ ಶೇ.40ರಷ್ಟು ರಿಯಾಯತಿ ಸಿಗಲಿದೆ. ಅನೇಕ ರೈತ ಮೀನುಗಾರರು ದ್ವಿಚಕ್ರ ವಾಹನ ಮೂಲಕವೇ ಮೀನು ಮಾರಾಟ ಮಾಡುತ್ತಿದ್ದು, ಈ ಯೋಜನೆಯಿಂದ ಅನೇಕ ಲಾಭ ಪಡೆದುಕೊಳ್ಳಬಹುದಾಗಿದೆ. ಮೀನುಗಾರರ ಬೇಡಿಕೆಯಂತೆ ಕ್ರಿಯಾ ಯೋಜನೆ ಸಿದ್ಧಪಡಿಸುವುದು ಹಾಗೂ ಅನಿರ್ವಾಯತೆ ಗಮನದಲ್ಲಿಟ್ಟುಕೊಂಡು ಸಿದ್ಧಪಡಿಸಬೇಕು ಎಂದರು.

ಮೀನುಗಾರಿಕೆ ಸಂಘಗಳನ್ನು ನಿರ್ಮಾಣ ಮಾಡಿ ಮೀನು ಸಂಗ್ರಹ ಮತ್ತು ಮಾರಾಟ ಮಾಡುವ ಸಂಘಗಳು ಹಾಗೂ ವೈಯಕ್ತಿಕವಾಗಿ ಮಾರಾಟ ಮಾಡುವವರಿಗೆ ಮತ್ತು ಸಾಂಪ್ರದಾಯಿಕವಾಗಿ ಕೈಗೊಳ್ಳುತ್ತಿರುವ ಮೀನುಗಾರರಿಗೂ ಅವಕಾಶಗಳಿವೆ. ಇವುಗಳ ಸರಿಯಾದ ಉಪಯೋಗವನ್ನು ಸಾರ್ವಜನಿಕರಿಗೆ ಮುಟ್ಟುವಂತಾಗಬೇಕು ಎಂದು ಹೇಳಿದರು.

ಜಿಪಂ ಸಿಇಒ ಗೋವಿಂದರೆಡ್ಡಿ, ಶ್ರೀಶೈಲ ಗಂಗನಹಳ್ಳಿ, ವಿಜಯಕುಮಾರ ಸೇರಿದಂತೆ ಮೀನುಗಾರರು ಇದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.