ಕೋವಿಡ್ ನಿಯಂತ್ರಣಕ್ಕೆ ಆಯುರ್ವೇದ ಔಷಧಗಳ ಕ್ಲಿನಿಕಲ್ ಪ್ರಯೋಗಕ್ಕೆ ಭಾರತ – ಅಮೇರಿಕಾ ಯೋಜನೆ
ಕ್ಲಿನಿಕಲ್ ಪ್ರಯೋಗಕ್ಕೆ ಭಾರತ - ಅಮೇರಿಕಾ ತಜ್ಞರ ತಂಡ ಯೋಜನೆ
Team Udayavani, Jul 9, 2020, 9:23 PM IST
ವಾಷಿಂಗ್ಟನ್: ಕೋವಿಡ್ ಚಿಕಿತ್ಸೆಗೆ ಆಯುರ್ವೇದ ಮದ್ದಾಗಬಲ್ಲದು ಎಂಬ ಹೇಳಿಕೆಗಳ ನಡುವೆಯೇ ಆಯುರ್ವೇದ ಔಷಧಗಳನ್ನು ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕ್ಲಿನಿಕಲ್ ಪ್ರಯೋಗಕ್ಕೆ ಒಳಪಡಿಸಲು ಭಾರತ ಮತ್ತು ಅಮೆರಿಕದ ಆಯುರ್ವೇದ ವೈದ್ಯರು ಮತ್ತು ಸಂಶೋಧಕರು ಮುಂದಾಗಿದ್ದಾರೆ.
ಉಭಯ ರಾಷ್ಟ್ರಗಳ ಆಯುರ್ವೇದ ಪರಿಣಿತರ ತಂಡ ಜಂಟಿಯಾಗಿ ಆಯುರ್ವೇದ ಔಷಧಗಳನ್ನು ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕ್ಲಿನಿಕಲ್ ಪ್ರಯೋಗಕ್ಕೆ ಒಳಪಡಿಸಲು ಯೋಜಿಸಿದೆ ಎಂದು ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ತಿಳಿಸಿದ್ದಾರೆ. ಭಾರತೀಯ ಮೂಲದ ವಿಜ್ಞಾನಿಗಳು, ಶಿಕ್ಷಣ ತಜ್ಞರು ಹಾಗೂ ವೈದ್ಯರ ಜತೆ ನಡೆಸಿದ ಸಂವಾದದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದು. ಕೋವಿಡ್ ವಿರುದ್ಧದ ಹೋರಾಟದಲ್ಲಿ ಉಭಯ ರಾಷ್ಟ್ರಗಳ ಆಯುರ್ವೇದ ತಜ್ಞರು ಒಟ್ಟಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಜ್ಞಾನ ಮತ್ತು ಸಂಶೋಧನಾ ಸಂಪನ್ಮೂಲಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಭಾರತದ ಕನಿಷ್ಟ ಮೂರು ಲಸಿಕೆ ತಯಾರಿಕಾ ಕಂಪನಿಗಳು ಈ ನಿಟ್ಟಿನಲ್ಲಿ ಅಮೆರಿಕದ ಸಂಸ್ಥೆಗಳ ಜತೆ ಸಹಯೋಗ ಹೊಂದಿವೆ. ಭಾರತ-ಅಮೆರಿಕ ವಿಜ್ಞಾನ ತಂತ್ರಜ್ಞಾನ ವೇದಿಕೆ (ಐಯುಎಸ್‌ಎಸ್‌ಟಿಎಫ್) ಇದಕ್ಕೆ ಸಹಕಾರ ನೀಡುತ್ತಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ