ತುಮಕೂರಿನಲ್ಲೇ ಕೋವಿಡ್‌ 19 ಆರ್ಭಟ


Team Udayavani, Jul 10, 2020, 7:21 AM IST

rbhata

ತುಮಕೂರು: ಶೈಕ್ಷಣಿಕ ನಗರ ತುಮಕೂರಿನಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ದಿನ ದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ಕಳೆದ ಎರಡು ವಾರದಲ್ಲಿ ಹೆಚ್ಚು ಸೋಂಕಿತರು ತುಮಕೂರು ತಾಲೂಕಿನವರೇ ಆಗುತ್ತಿರುವುದು ಜನರಲ್ಲಿ  ಆತಂಕ ಮೂಡುತ್ತಿದೆ. ಜಿಲ್ಲೆಯಲ್ಲಿ ಸೋಂಕು ಕಡಿಮೆಯಾಯಿತು ಎಂದುಕೊಂಡಿದ್ದಾಗ, ಇಡೀ ಜಿಲ್ಲೆಯ ಜನ ಭಯ ಪಡುವಂತೆ ಕಳೆದ ಒಂದು ತಿಂಗಳಿ ನಿಂದ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ.

11 ಮಂದಿ  ಸಾವು: ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ತ್ರಿಶತಕ ಮೀರಿ ಮುಂದೆ ಮುಂದೆ ಸಾಗುತ್ತಿದೆ, ಈ ವರೆಗೆ 333 ಜನ ಕೋವಿಡ್‌ 19 ಸೋಂಕು ಇರುವುದು ದೃಢವಾಗಿದೆ. ಈ ಸೋಂಕಿತರಲ್ಲಿ ತುಮಕೂರು ತಾಲೂಕಿನವರೇ ಅತೀ ಹೆಚ್ಚು 84 ಜನ  ಸೋಂಕಿತರು ಇದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 11 ಜನ ಕೋವಿಡ್‌ 19 ಮಹಾಮಾರಿಗೆ ಮೃತಪಟ್ಟಿದ್ದಾರೆ. ಅದರಲ್ಲಿ ತುಮಕೂರು ತಾಲೂಕಿನವರೇ 8 ಜನರು ಈ ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ.

ಎಲ್ಲಾ ತಾಲೂಕಿನಲ್ಲೂ ಸೋಂಕು: ದೇಶಾದ್ಯಂತ ಲಾಕ್‌ಡೌನ್‌ ಇದ್ದ ವೇಳೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿ ತರು ಅತೀ ಕಡಿಮೆ ಇದ್ದರು, ಎರಡು ಮೂರು ಜನರಿಗೆ ಮಾತ್ರ ಸೋಂಕು ಇರುವುದು ಕಂಡು ಬಂದಿತ್ತು. ಆದರೆ ಲಾಕ್‌ ಡೌನ್‌ ಸಡಿಲಿಕೆಯಾಗಿ ಹೊರ  ರಾಜ್ಯದಿಂದ, ಹೊರ ಜಿಲ್ಲೆಯಿಂದ ಜನರು ಜಿಲ್ಲೆಗೆ ಬರುತ್ತಲೇ ಜಿಲ್ಲೆಯ ಎಲ್ಲಾ ಕಡೆ ಸೋಂಕು ವ್ಯಾಪಿಸಿ ಈಗ ಎಲ್ಲಾ ತಾಲೂಕಿನಲ್ಲಿಯೂ ಸೋಂಕಿತರು ಇರುವಂತ್ತಾಗಿದೆ.

ತೀವ್ರ ಆತಂಕ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ನಗರದಲ್ಲಿ ಬಹು ತೇಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ, ಮುಖಕ್ಕೆ ಮಾಸ್ಕ್ ಕೂಡಾ ಧರಿಸದೇ ಸಂಚಾರ ಮಾಡುತ್ತಿದ್ದಾರೆ.  ಇದನ್ನು ಗಮನಿಸು ತ್ತಿರುವ ಜನ ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದಕ್ಕ ತೀವ್ರ ಆತಂಕ ಪಡುತ್ತಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲಿ ಆರಂಭದಲ್ಲಿ ಶಿರಾ ನಗರದಲ್ಲಿ ಮೊದಲು ಸೋಂಕು ಕಾಣಿಸಿ ಕೊಂಡಿತು. ಅಲ್ಲಿಯ ವೃದನೊಬ್ಬ ಮೃತ ಪಟ್ಟಿದ್ದ, ಆನಂತರ ತುಮಕೂರು ನಗರದಲ್ಲಿ ಸೋಂಕು ಕಾಣಿಸಿಕೊಂಡಿತ್ತು, ಇನ್ನೂ  ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಸೋಂಕಿತರು ಇರಲಿಲ್ಲ. ಆದರೆ ಈಗ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಸೋಂಕಿತರ ಪ್ರಮಾಣ ದಿನೇ ದಿನೆ ಹೆಚ್ಚುತ್ತಲೇ ಇದೆ, ತುಮಕೂರು ಬಿಟ್ಟರೆ ಪಾವಗಡ ತಾಲೂಕಿನಲ್ಲಿ ಹೆಚ್ಚು ಸೋಂಕಿತರು  ಕಂಡು ಬರುತ್ತಿದ್ದು ಮಧುಗಿರಿ ಸೇರಿದಂತೆ ಇತರೆ ತಾಲೂಕಿನಲ್ಲಿಯೂ ಪೈಪೋಟಿಯಂತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಎಲ್ಲರಲ್ಲಿ ಆತಂಕ ಉಂಟಾಗುತ್ತಿದೆ.

ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಜನರು ಸಾಮಾಜಿಕ ಅಂತರ ಕಾಯ್ದು ಕೊಂಡು ಇರಬೇಕು ಮುಖಕ್ಕೆ ಮಾಸ್ಕ್ ಧರಿಸಬೇಕು, ಬೇರೆ ಊರುಗಳಿಂದ ಯಾರಾದರೂ ಬಂದರೆ ಪರೀಕ್ಷಿಸಿ ಕೊಳ್ಳಬೇಕು, ಜ್ವರ, ನೆಗಡಿ, ತಲೆ  ನೋವು ಕಾಣಿಸಿ ಕೊಂಡರೆ ತಕ್ಷಣ ಆಸ್ಪತ್ರೆಗೆ ತೋರಿಸಬೇಕು ನಿರ್ಲಕ್ಷ ವಹಿಸಿ ಕಾಯಿಲೆ ಹೆಚ್ಚಾದ ಮೇಲೆ ಬಂದರೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ.
-ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.