ಕಾಪು ತಾಲೂಕಿನಲ್ಲಿ ಕೋವಿಡ್ ಸ್ಪೋಟ! 30ಕ್ಕೂ ಅಧಿಕ ಪಾಸಿಟಿವ್ ಪ್ರಕರಣ ಪತ್ತೆ
Team Udayavani, Jul 11, 2020, 7:40 PM IST
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಶನಿವಾರ ಕೋವಿಡ್-19 ಸೋಂಕಿತರ ಸಂಖ್ಯೆ ಸ್ಪೋಟಗೊಂಡಿದೆ. ಕಾಪು ಪೊಲೀಸ್ ಠಾಣೆಯ ಎಎಸ್ಐ ಸೇರಿದಂತೆ 30ಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಕಾಪು ಪೊಲೀಸ್ ಠಾಣೆಯ 56 ವರ್ಷ ಪ್ರಾಯದ ಎಎಸ್ಐ ಗೆ ಸೋಂಕು ದೃಢಪಟ್ಟಿದ್ದು, ಅವರು ಈಗಾಗಲೇ ಕೋಟದ ತನ್ನ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿ ಇರುವುದರಿಂದ ಇತರ ಪೊಲೀಸರ ಭೀತಿ ಕಡಿಮೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಾಪು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದ್ದು, ಅಗತ್ಯದ ದಾಖಲೆಗಳ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸೀಲ್ ಡೌನ್ ನಡೆಸಲಾಗುವುದು ಎಂದು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಉದಯವಾಣಿಗೆ ತಿಳಿಸಿದ್ದಾರೆ.