ತಂಪು ಪಾನೀಯ ಏಜೆನ್ಸಿ ಮಾಲೀಕನಿಗೆ ಸೋಂಕು

Team Udayavani, Jul 13, 2020, 12:46 PM IST

ತಂಪು ಪಾನೀಯ ಏಜೆನ್ಸಿ ಮಾಲೀಕನಿಗೆ ಸೋಂಕು

ಬಾಗಲಕೋಟೆ: ನಗರದ ಪ್ರಮುಖ ಪ್ರದೇಶದಲ್ಲಿರುವ ಕೊಕ್‌ಕೋಲಾ ತಂಪು ಪಾನೀಯ ಮಾರಾಟ ಮಾಡುವ ಅಂಗಡಿ ಮಾಲೀಕನಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರ ಅಂಗಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಸಹಿತ ಹಲವರನ್ನು ಕ್ವಾರಂಟೈನ್‌ ಮಾಡಲಾಗಿದೆ. ತಾಲೂಕಿನ ಸಿಮಿಕೇರಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟದ್ದ ವ್ಯಕ್ತಿಯ ಗಂಟಲು ದ್ರವ ಮಾದರಿಯನ್ನೂ ತಪಾಸಣೆಗೆ ಕಳುಹಿಸಿದ್ದು, ಅದರ ವರದಿ ರವಿವಾರ ಬಂದಿದೆ.  ಸಿಮೀಕೇರಿಯ 47 ವರ್ಷದ ಪುರುಷ ಪಿ-36430 ಮೃತ ವ್ಯಕ್ತಿಗೂ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ರವಿವಾರ ಏಳು ಜನರಿಗೆ ಕೋವಿಡ್ ದೃಢಪಟ್ಟಿವೆ. ಸೋಂಕಿತರ ಸಂಖ್ಯೆ 399ಗೆ ಏರಿಕೆಯಾಗಿದೆ. 183 ಜನ ಗುಣಮುಖರಾಗಿದ್ದು, 203 ಜನ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು, ನೆಗಡಿ, ಜ್ವರದ ಲಕ್ಷಣದಿಂದಾಗಿ ಬಾಗಲಕೋಟೆಯ ವಿನಾಯಕ ನಗರದ 65 ವರ್ಷದ ವೃದ್ಧ (ಪಿ-36422), ತೀವ್ರ ಉಸಿರಾಟದ ಲಕ್ಷಣದಿಂದಾಗಿ ಮೃತಪಟ್ಟ ಸಿಮಿಕೇರಿ ಗ್ರಾಮದ 47 ವರ್ಷದ ಪುರುಷ (ಪಿ-36430), ಕೆಮ್ಮು, ನೆಗಡಿ, ಜ್ವರದ ಲಕ್ಷಣದಿಂದಾಗಿ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ 70 ವರ್ಷದ ವೃದ್ದ (ಪಿ-36366), ನವನಗರದ ಸೆಕ್ಟರ್‌ ನಂ.54ರ ನಿವಾಸಿ 47 ವರ್ಷದ ಪುರುಷ (ಪಿ-36390), ತೀವ್ರ ಉಸಿರಾಟದ ಲಕ್ಷಣದಿಂದಾಗಿ ಬಾಗಲಕೋಟೆ ನಗರದ 50 ವರ್ಷದ ಪುರುಷ (ಪಿ-36399), ಕೆಮ್ಮು, ನೆಗಡಿ, ಜ್ವರದ ಲಕ್ಷಣದಿಂದಾಗಿ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನ ನಿವಾಸಿ 37 ವರ್ಷದ ಪುರುಷ (ಪಿ-36407) ಹಾಗೂ ಪಿ-28989 ವ್ಯಕ್ತಿಯ ಸಂಪರ್ಕ ಹೊಂದಿದ ಜಮಖಂಡಿಯ ನಗರದ 45 ವರ್ಷದ ಖಾಸಗಿ ವೈದ್ಯನಿಗೆ (ಪಿ-36414) ಕೋವಿಡ್‌ ಸೋಂಕು ದೃಢಪಟ್ಟಿದೆ.

2206 ಸ್ಯಾಂಪಲ್‌ಗ‌ಳ ನಿರೀಕ್ಷೆ: ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 2206 ಸ್ಯಾಂಪಲ್‌ಗ‌ಳ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 1997 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 17244 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 14537 ನೆಗೆಟಿವ್‌, 399ಜನರಿಗೆ ಪಾಸಿಟಿವ್‌ ಬಂದಿವೆ. 14 (ನಿನ್ನೆ ಮೃತಪಟ್ಟ ಕೊಲ್ಹಾರದ ವ್ಯಕ್ತಿ ಹಾಗೂ ಬೆಂಗಳೂರು, ವಿಜಯಪುರದಲ್ಲಿ ಮೃತಪಟ್ಟ ಇಬ್ಬರು ಹೊರತುಪಡಿಸಿ) ಜನ ಮೃತಪಟ್ಟಿದ್ದಾರೆ. ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 29 ಸ್ಯಾಂಪಲ್‌ಗ‌ಳು ಮಾತ್ರ ರಿಜೆಕ್ಟ್ ಆಗಿವೆ. ಕಂಟೇನ್ಮೆಂಟ್‌ ಝೋನ್‌ 34 ಇದ್ದು, ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 4553 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.

ಇಂದಿನಿಂದ ಸಲೂನ್‌ ಬಂದ್‌: ಗಲಗಲಿ ಗ್ರಾಮದಲ್ಲಿರುವ ಹಡಪದ ಅಪ್ಪಣ್ಣ ಸೇವಾ ಸಮಾಜದವರ ಎಲ್ಲಾ ಕ್ಷೌರಿಕ ಅಂಗಡಿಗಳನ್ನು ಸೋಮವಾರದಿಂದ ಜುಲೈ 31 ಶುಕ್ರವಾರದ ವರೆಗೆ ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಲಾಗುವುದೆಂದು ಸಮಾಜದ ಪ್ರಮುಖರು ತಿಳಿಸಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಬಂದ್‌ ಮಾಡುವುದು ಅನಿವಾರ್ಯವಾಗಿದ್ದು ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಸಲೂನ್‌ ಮಾಲೀಕರು ಮನವಿ ಮಾಡಿದ್ದಾರೆ.

ಗ್ರಾಮದ ಹಡಪದ ಅಪ್ಪಣ್ಣ ಸೇವಾ ಸಮಾಜದ ಕ್ಷೌರಿಕ ಅಂಗಡಿಯ ಮಾಲೀಕರು ಇಂದು ಸಭೆ ಸೇರಿ ಈ ಬಗ್ಗೆ ಚರ್ಚಿಸಿ ಅಂಗಡಿಗಳನ್ನು ತೆರೆಯದಿರಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶಂಕರಪ್ಪ ನಾವಿ ಕಾರ್ಯದರ್ಶಿ ಮಲ್ಲಪ್ಪ ನಾವಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.