ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ನಾಲ್ಕು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢ
Team Udayavani, Jul 15, 2020, 5:28 PM IST
ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರು ಮತ್ತು ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರಿಗೆ ಸೋಂಕು ದೃಢವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಲಕ್ಷಣವಿಲ್ಲದ ಸೋಂಕಿತರ ಸಂಪರ್ಕದಿಂದ ಇವರಿಗೆ ಸೋಂಕು ತಾಗಿರಬಹುದು ಎಂದು ಅಂದಾಜಿಸಲಾಗಿದೆ. ಒಬ್ಬರು ವೈದ್ಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಬ್ಬರು ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ.
ನಾಲ್ವರು ಸಿಬ್ಬಂದಿಗಳಿಗೆ ದೃಢ: ಜಿಲ್ಲಾಸ್ಪತ್ರೆಯಲ್ಲಿ ಕೆಲಸದಲ್ಲಿದ್ದ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಇವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಇವರ ಸಂಪರ್ಕಕ್ಕೆ ಬಂದ ಇತರ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡಲು ಮಾದರಿ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಓರ್ವ ರೋಗಿಗೆ ಸೋಂಕು: ಅನ್ಯ ರೋಗದ ಕಾರಣದಿಂದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ರೋಗಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಹೀಗಾಗಿ ಇವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್