ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ಆಹ್ವಾನವಿಲ್ಲವೆಂದು ಕೆರಳಿದ ‘ಕೈ’ ಶಾಸಕರು

ಕ್ಷಮೆ ಯಾಚಿಸಿ ದೊಡ್ಡತನ ಮೆರೆದು ಪರಿಸ್ಥಿತಿ ತಿಳಿಗೊಳಿಸಿದ ಉಸ್ತುವಾರಿ ಸಚಿವ ಸುರೇಶ್ ಕುಮಾರ್

Team Udayavani, Jul 15, 2020, 11:25 PM IST

ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ಆಹ್ವಾನವಿಲ್ಲವೆಂದು ಕೆರಳಿದ ‘ಕೈ’ ಶಾಸಕರು

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಮಿಸಿ ಇಂದು ನಡೆಸಿರುವ ನಾಲ್ಕು ಸಭೆಗಳಲ್ಲಿ ಮೂರು ಸಭೆಗಳಿಗೆ ನಮ್ಮನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್‌ನ ಇಬ್ಬರು ಶಾಸಕರು ಹಾಗೂ ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಆಕ್ಷೇಪಿಸಿ ವಾಗ್ವಾದ ನಡೆಸಿದ ಘಟನೆ ನಡೆಯಿತು.

ಶಿಕ್ಷಣ ಸಚಿವ ಹಾಗೂ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್ ಅವರು ಬುಧವಾರ ಜಿಲ್ಲೆಗೆ ಆಗಮಿಸಿ, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳೊಡನೆ ವಿವಿಧ ಸಭೆಗಳನ್ನು ನಡೆಸಿದರು. ಕೊನೆಯ ಸಭೆ ಆರಂಭವಾದಾಗ ಕಾಂಗ್ರೆಸ್ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಜಿ.ಪಂ. ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ ಮತ್ತು ಜಿ.ಪಂ.ನ ಕೆಲವು ಸದಸ್ಯರು ಕೆಡಿಪಿ ಸಭಾಂಗಣಕ್ಕೆ ಧಾವಿಸಿ ಬಂದರು.

ಶಾಸಕ ಆರ್. ನರೇಂದ್ರ ಮಾತನಾಡಿ, ಸಚಿವರೇ ಕಾರ್ಯಕ್ರಮದ ಪಟ್ಟಿ ನೋಡಿ. ಇಂದು 10ಕ್ಕೆ ನೀರಾವರಿ ನಿಗಮ, ಸೆಸ್ಕ್ ಅಧಿಕಾರಿಗಳ ಸಭೆ, 10.40ಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ, 11ಕ್ಕೆ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನಾ ಸಭೆ ನಡೆದಿದೆ.  ಈ ಸಭೆಗಳು ಸಚಿವರು ಮತ್ತು ಅಧಿಕಾರಿಗಳಿಗೆ ಸೀಮಿತವಾಗಿದೆ. 12ಕ್ಕೆ ಕೋವಿಡ್ ಸೋಂಕು ನಿಯಂತ್ರಿಸುವ ಬಗ್ಗೆ ಸಭೆ ಇದೆ. ಈ ಒಂದ ಸಭೆಗೆ ಮಾತ್ರ ನಮ್ಮನ್ನು ಆಹ್ವಾನಿಸಲಾಗಿದೆ. ಉಳಿದ ಮೂರು ಸಭೆಗಳಿಗೇಕೆ ಆಹ್ವಾನ ನೀಡಿಲ್ಲ. ಈ ಥರ ಮಾಡುವುದು ಸರಿಯಲ್ಲ. ಶಾಸಕರ ಅಗತ್ಯವಿಲ್ಲ ಎಂದು ಹೇಳಿ ಬಿಡಿ. ನಾವು ಬರುವುದೇ ಇಲ್ಲ. ಎಂದು ಏರು ದನಿಯಲ್ಲಿ ಪ್ರಶ್ನಿಸಿದರು. ಹಿರಿಯ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಹ ಇದಕ್ಕೆ ದನಿಗೂಡಿಸಿದರು.

ಆಗ ಜಿ.ಪಂ. ಸದಸ್ಯರೊಬ್ಬರು ಧಿಕ್ಕಾರ ಕೂಗಿದ ಪ್ರಸಂಗವೂ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಸಿ.ಎಸ್. ನಿರಂಜನಕುಮಾರ್ ಸಹ ಏರುದನಿಯಲ್ಲಿ ಸಭೆಗೆ ಆಹ್ವಾನ ನೀಡುವವರು ಜಿಲ್ಲಾಧಿಕಾರಿಯವರು, ಇದರಲ್ಲಿ ಸಚಿವರ ಪಾತ್ರವಿಲ್ಲ ಎಂದು ಹೇಳಿದರು.

ಆಗ ಎದ್ದು ನಿಂತ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್ ಅವರು, ನಾನು 35 ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಪ್ರತಿ ಬಾರಿ ಕೊಳ್ಳೇಗಾಲದಿಂದ ಶಾಸಕ ನರೇಂದ್ರ ಅವರ ಜೊತೆಯೇ ಬರುತ್ತಿದ್ದೆ. ಈ ಬಾರಿ ಈ ರೀತಿ ಆಗಿರುವುದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ಇದು ಪ್ರಮುಖವಾದ ಸಭೆ, ನೀವೆಲ್ಲ ಭಾಗವಹಿಸಿ ಎಂದರು.

ಇದರಿಂದ ಸಮಾಧಾನಗೊಂಡ ನರೇಂದ್ರ ಮತ್ತು ಪುಟ್ಟರಂಗಶೆಟ್ಟಿ, ಸಚಿವರು ಕ್ಷಮೆ ಯಾಚಿಸಿರುವುದು ದೊಡ್ಡ ವಿಚಾರ ಹಾಗಾಗಿ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ವೇದಿಕೆ ಹತ್ತಿ ಕುಳಿತರು.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.