C.V. Raman ಆಸ್ಪತ್ರೆಯಲ್ಲಿ ಲೋಪ! ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಸುಧಾಕರ್
Team Udayavani, Jul 16, 2020, 6:10 PM IST
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಇಂದಿರಾನಗರದಲ್ಲಿರುವ ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದರು. ವೈದ್ಯರು, ಸಿಬ್ಬಂದಿ ಬಳಿ ಮಾಹಿತಿ ಪಡೆದು ಸಮಾಲೋಚನೆ ನಡೆಸಿ, ಸಲಹೆ ನೀಡಿದರು. ನಂತರ ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವರು ಮಾಹಿತಿ ಪಡೆದರು. ಲಘು ರೋಗ ಲಕ್ಷಣ ಇರುವವರನ್ನು ದಾಖಲು ಮಾಡಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹದಿನೈದು ಹೈ ಪ್ಲೋ ಆಕ್ಸಿಜನ್ ಬೆಡ್ ಪೈಕಿ ಎರಡರಲ್ಲಿ ಮಾತ್ರ ರೋಗಿಗಳನ್ನು ದಾಖಲಿಸಿದ್ದಕ್ಕೆ ಅಧಿಕಾರಿಗಳು ವಿರುದ್ಧ ಕೆಂಡಾಮಂಡಲವಾದರು. ಕೋವಿಡ್ ಕೇರ್ ಸೆಂಟರ್ ಗೆ ಹೋಗಬೇಕಿದ್ದವರಿಗೂ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಕ್ಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ