ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
Team Udayavani, Jul 18, 2020, 8:01 AM IST
ಬೆಂಗಳೂರು: ಬೆಡ್ಗಳ ಕೊರತೆ, ವೈದ್ಯರ ನಿರ್ಲಕ್ಷ್ಯದಿಂದ ಸಾವುಗಳು ಸಂಭವಿಸುತ್ತಿವೆ ಎಂಬ ಅಪವಾದದ ನಡುವೆಯೂ ವೈದ್ಯರು 100 ಮಂದಿ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.
“ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೋರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ ‘ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿ. ಯರಿಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ