100 ಗಂಟೆಗಳಲ್ಲಿ 10 ಲಕ್ಷ ಸೋಂಕಿತರು
Team Udayavani, Jul 19, 2020, 10:12 AM IST
ನ್ಯೂಯಾರ್ಕ್: ದಿನೇ ದಿನೆ ಕೋವಿಡ್ ಸಂಖ್ಯೆ ಏರಿಕೆ ಯಾಗುತ್ತಿದ್ದು, ವಿಶ್ವದಲ್ಲಿ ಇದೇ ಮೊದಲ ಬಾರಿಗೆ 100 ಗಂಟೆಗಳ ಅವಧಿಯಲ್ಲಿ 10 ಲಕ್ಷ ಮಂದಿ ಸೋಂಕಿತ ರಾಗಿದ್ದಾರೆ. ಚೀನದಲ್ಲಿ ಜನವರಿ ಆರಂಭದಲ್ಲಿ ಮೊದಲ ಬಾರಿಗೆ ಕೋವಿಡ್ ವೈರಸ್ ಕಾಣಿಸಿ ಕೊಂಡಿತ್ತು. ಪ್ರಾರಂಭದಲ್ಲಿ ಜಾಗತಿಕವಾಗಿ 10 ಲಕ್ಷ ಪ್ರಕರಣಗಳು ತಲುಪಲು ಮೂರು ತಿಂಗಳು ಸಮಯ ತೆಗೆದುಕೊಳ್ಳಲಾಗಿತ್ತು. ಆದರೆ ಇದೀಗ ಕೇವಲ ನಾಲ್ಕು ದಿನಗಳಲ್ಲಿ 10 ಲಕ್ಷ ಪ್ರಕರಣಗಳು ಕಂಡು ಬಂದಿವೆ. ಇದು ದಾಖಲೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1.4 ಕೋಟಿ ದಾಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಅಮೆರಿಕವೊಂದರಲ್ಲೇ ಕಳೆದ 24 ಗಂಟೆಗಳ ಅವಧಿಯಲ್ಲಿ 77,638 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ