ಕೊಲ್ಲೂರು ಪರಿಸರದಲ್ಲಿ ಶಿಲಾಯುಗದ ಅವಶೇಷ ಪತ್ತೆ

ಮೂಕಾಸುರನ ಬೆಟ್ಟದ ಬುಡದಲ್ಲಿ ನಿಲ್ಸ್‌ಕಲ್‌ ಸ್ಮಾರಕ ಶಿಲೆ, ಬಾವಿ ಇನ್ನಿತರ ಕುರುಹು

Team Udayavani, Jul 20, 2020, 1:11 PM IST

ಕೊಲ್ಲೂರು ಪರಿಸರದಲ್ಲಿ ಶಿಲಾಯುಗದ ಅವಶೇಷ ಪತ್ತೆ

ಉಡುಪಿ: ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್‌ ಶಿಲಾಯುಗ ಕಾಲದ ನಿಲ್ಸ್‌ಕಲ್‌ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ ಅವಶೇಷಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯಲ್ಲಿ ಪತ್ತೆಯಾಗಿವೆ ಎಂದು ಶಿರ್ವ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ ಪೊ›| ಟಿ. ಮುರುಗೇಶಿ ತಿಳಿಸಿದ್ದಾರೆ.

ಕೊಲ್ಲೂರಿನ ಬೃಹತ್‌ ಶಿಲಾಯುಗ ನಿವೇಶನದ ಶೋಧ, ಕೊಲ್ಲೂರು ಮತ್ತು ಕೊಲ್ಲೂರಿನ ಮೂಕಾಂಬಿಕೆಯ ಪ್ರಾಚೀನತೆಯನ್ನು ಸುಮಾರು ಕ್ರಿ.ಪೂ. 1000 ವರ್ಷಗಳಷ್ಟು ಪ್ರಾಚೀನ ಪರಂಪರೆ ಎಂಬುದನ್ನು ದೃಡೀಕರಿಸಲಿದೆ. ದೇವಿ ಪುರಾಣದ ಪ್ರಕಾರ ಮೂಕಾಸುರನನ್ನು ದೇವಿ ಸಂಹರಿಸಿ ಮೂಕಾಂಬಿಕೆ ಎಂಬ ಅಭಿದಾನವನ್ನು ಪಡೆದುಕೊಂಡು ಕೊಲ್ಲೂರಿನಲ್ಲಿ ನೆಲೆಸಿದ್ದಾಳೆ. ಬಹುಶಃ ಮೂಕಾಸುರನ ಸಮಾಧಿಯ ಸಮೀಪ ಆತನ ಸ್ಮಾರಕವಾಗಿ ಈ ಶಿಲೆಯನ್ನು ನಿಲ್ಲಿಸಿರಬಹುದು.

ಕೊಲ್ಲೂರಿಗೆ ಸಮೀಪದಲ್ಲಿರುವ ಹೊಸನಗರ ತಾಲೂಕಿನ ಬೈಸೆ, ನಿಲ್ಸ್‌ಕಲ್‌ ಮತ್ತು ಹೆರಗಲ್‌ನಲ್ಲಿ ಸುಮಾರು 40 ನಿಲ್ಸ್‌ಕಲ್‌ ಮಾದರಿ ಸ್ಮಾರಕಶಿಲೆಗಳು ವಿಶೇಷವಾಗಿ ಕಂಡುಬಂದಿರುವುದನ್ನು ವಿದ್ವಾಂಸರು ಈಗಾಗಲೇ ವರದಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಸುಭಾಸ್‌ನಗರದ ಬಗ್ಗಡಿಕಲ್‌ ಸಮೀಪ 4, ನಿಟ್ಟೂರಿನ ಅಡ್ಕದಕಟ್ಟೆಯಲ್ಲಿ 1 ಹಾಗೂ ಬುದ್ಧನಜೆಡ್ಡುವಿನಲ್ಲಿ 1, ಕೊಡಗಿನ ಅರಸಿಣಗುಪ್ಪೆಯಲ್ಲಿ 1 ಹಾಗೂ ಹಾಸನದ ಅರಸೀಕೆರೆಯಲ್ಲಿ 3 ನಿಲ್ಸ್‌ಕಲ್‌ ಮಾದರಿ ಸ್ಮಾರಕಶಿಲೆಗಳನ್ನು ಸಂಶೋಧಿಸಿ ವರದಿ ಮಾಡಿದ್ದೇನೆ. ಉಡುಪಿ ಜಿಲ್ಲೆಯಲ್ಲಿ ಇದು 7ನೇ ಶೋಧವಾಗಿದೆ ಎಂದವರು ತಿಳಿಸಿದ್ದಾರೆ.

ನಿಲ್ಸ್‌ಕಲ್‌ ಎಂದರೆ ಏನು?
ಬೃಹತ್‌ ಶಿಲಾಯುಗ ಕಾಲದ ಸಮಾಧಿಗಳ ಸಮೀಪದಲ್ಲಿ ಮೃತ ವ್ಯಕ್ತಿಗಳ ನೆನಪಿಗಾಗಿ ನೆಟ್ಟಿರುವ ಸ್ಮಾರಕಶಿಲೆಗಳಿವು. ಸುಮಾರು 1.5 ಮೀ.ನಿಂದ 3 ಮೀ. ಎತ್ತರದವರೆಗಿನ ಕಲ್ಲುಗಳನ್ನು ಬಹುತೇಕ ಪೂರ್ವದ ದಿಕ್ಕಿಗೆ ಸ್ವಲ್ಪ ವಾಲಿದಂತೆ ನಿಲ್ಲಿಸಲಾಗಿದೆ. ನಿಲ್ಸ್‌ಕಲ್‌ ಹೆಸರೇ ಸೂಚಿಸುವಂತೆ ಇವು ನಿಲ್ಲಿಸಿದ ಕಲ್ಲು. ಇವು ಸುಮಾರು 2.10 ಮೀ. ಎತ್ತರವಾಗಿದ್ದು, ಬುಡದಲ್ಲಿ 0.65 ಮೀ., ತುದಿಯಲ್ಲಿ 0.55 ಮೀ. ಅಗಲವಾಗಿದೆ. ಗ್ರಾನೈಟ್‌ ಶಿಲೆಯನ್ನೇ ಈ ನಿಲ್ಸ್‌ಕಲ್‌ಗೆ ಬಳಸಲಾಗಿದೆ. ಬೃಹತ್‌ ಶಿಲಾಯುಗದ ಜನ ದಕ್ಷಿಣ ಭಾರತದಾದ್ಯಂತ ಗ್ರಾನೈಟ್‌ ಶಿಲೆಯನ್ನೇ ಸಮಾಧಿಗಳ ರಚನೆಗಾಗಿ ಬಳಸಿಕೊಂಡಿರುವುದು ಸಂಸ್ಕೃತಿಯ ವೈಶಿಷ್ಟ್ಯವಾಗಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.