ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆಗೆ ಆಗ್ರಹ

Team Udayavani, Jul 24, 2020, 7:57 AM IST

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆಗೆ ಆಗ್ರಹ

ಮಂಡ್ಯ: ಕೋವಿಡ್ ಸೋಂಕಿತ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಸಿಐಟಿಯು, ಕರ್ನಾಟಕ ಪ್ರಾಂತ ರೈತಸಂಘ, ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್‌-19 ಸಂಕಷ್ಟದಲ್ಲಿ ಜನರ ಜೊತೆ ನಿಂತು ಆರ್ಥಿಕ ಸಂಕಷ್ಟ ಹಾಗೂ ಆರೋಗ್ಯ ರಕ್ಷಣೆಗೆ ಸರ್ಕಾರ ತೊಡಗಿಸಿ ಕೊಳ್ಳಬೇಕು. ಸೋಂಕನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆಗೆ ಕ್ರಮ ವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ.3ರಷ್ಟು ವೆಚ್ಚ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಮಾಸಿಕ 7,500 ರೂ. ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.

ಆಹಾರ, ಆರೋಗ್ಯ ಕಿಟ್‌ ಕಲ್ಪಿಸಿ: ಎಲ್ಲ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರ ಸಾಮಗ್ರಿ, ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ ಕಲ್ಪಿಸಬೇಕು. ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಲು ಜಿಡಿಪಿಯ ಶೇ.5ನ್ನು ಸಾರ್ವಜನಿಕ ಆರೋಗ್ಯ ವಲಯಕ್ಕೆ ಮೀಸಲಿಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಖಾಸಗೀ ಕರಣವನ್ನು ನಿಲ್ಲಿಸಿ, ಎಲ್ಲರಿಗೂ ಉಚಿತ ಸಾರ್ವತ್ರಿಕ ಆರೋಗ್ಯ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಎಲ್ಲರಿಗೂ ಉದ್ಯೋಗ ನೀಡಿ: ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕುಟುಂಬಕ್ಕೆ ತಲಾ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ 600 ರೂ. ಹೆಚ್ಚಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10 ಸಾವಿರ ರೂ. ನೀಡಬೇಕು. ಎಲ್ಲ ರೀತಿಯ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ವೇತನ ನೀಡುವಂತೆ ಕ್ರಮ ವಹಿಸಬೇಕು. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಯಿಸಿದರು.

ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಬಿಸಿಯೂಟ ನೌಕರರಿಗೆ ಏಪ್ರಿಲ್‌, ಮೇ ,ಜೂನ್‌ ತಿಂಗಳ ವೇತನವನ್ನು ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಬಾಕಿ ಇರುವ 18 ತಿಂಗಳ ವೇತನ ನೀಡಬೇಕು. ಬೀಡಿ ಕಾರ್ಮಿ ಕರು, ಬೀದಿಬದಿ ವ್ಯಾಪಾರಿಗಳು ಮತ್ತು ಮನೆ ಕೆಲಸದ ಕಾರ್ಮಿಕರು, ಇತರೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ, ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಂ.ಪುಟ್ಟಮಾಧು, ಎಲ್‌.ಕೃಷ್ಣೇಗೌಡ, ಟಿ.ಯಶವಂತ, ಸಿ.ಕುಮಾರಿ, ಎಂ.ಎಂ. ಶಿವಕುಮಾರ್‌, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.