ಸರ್ಕಾರದ ಜನ ವಿರೋಧಿ ನೀತಿಗೆ ಆಕ್ರೋಶ


Team Udayavani, Jul 24, 2020, 12:17 PM IST

ಸರ್ಕಾರದ ಜನ ವಿರೋಧಿ ನೀತಿಗೆ ಆಕ್ರೋಶ

ದಾವಣಗೆರೆ: ಭೂ ಸುಧಾರಣಾ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುರುವಾರ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಂಟಿ ಕ್ರಿಯಾ ಸಮಿತಿ ಸದಸ್ಯರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ದೇಶ ಒಂದು ಕಡೆ ಆರ್ಥಿಕ ಬಿಕ್ಕಟ್ಟು, ಇನ್ನೊಂದೆಡೆ ಕೋವಿಡ್‌-19 ಸಂಕಷ್ಟ ಎದುರಿಸುತ್ತಿದೆ. ಸರ್ಕಾರ ಜನರ ಜೊತೆ ನಿಂತು ಜನತೆಯ ಹಾಗೂ ದೇಶದ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ರಕ್ಷಣೆಗೆ ತೊಡಗಬೇಕಾದ ಸಂದರ್ಭದಲ್ಲಿ ಎಪಿಎಂಸಿ, ಭೂ ಸುಧಾರಣೆ, ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ತರುವಂತಹ ಜನ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಅನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರಿಕರುಗಳಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಆದರೆ, ಅದನ್ನು ಮರೆತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದೇಶಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವಂತೆ  ಹಲವಾರು ಕಾಯ್ದೆ ಗಳಿಗೆ ತಿದ್ದುಪಡಿ ತಂದಿರುವುದು ಪ್ರಜಾತಂತ್ರ ವಿರೋಧಿ ನಡೆ. ಕೂಡಲೇ ಸರ್ಕಾರ ಎಲ್ಲಾ ಕಾಯ್ದೆಗಳ ತಿದ್ದುಪಡಿ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಭೂ ಹಾಗೂ ವ್ಯವಸಾಯ ಸಂಬಂಧಿ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ-2020 ನ್ನು ವಾಪಾಸು ಪಡೆಯಬೇಕು. ಕೋವಿಡ್ ದಿಂದ ಜನಜೀವನ ದಿನದಿಂದ ದಿನಕ್ಕೆ ಅಸ್ತವ್ಯಸ್ತವಾಗುತ್ತಿದೆ. ಕೊರೊನಾದಿಂದ ಜನರ ರಕ್ಷಣೆ ಮತ್ತು ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ. 3 ರಷ್ಠು ಅಂಶವನ್ನು ವೆಚ್ಚ ಮಾಡಲು ಕ್ರಮ ವಹಿಸಬೇಕು.ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂ. ನೆರವು ಘೋಷಿಸಬೇಕು. ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10ಕಿಲೋ ಆಹಾರ ಸಾಮಗ್ರಿ, ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ ಒದಗಿಸಬೇಕು. ಉದ್ಯೋಗ ಖಾತರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು 600 ರೂಪಾಯಿಗೆ ಹೆಚ್ಚಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಸಂಚಾಲಕ ಕೆ.ಎಚ್‌. ಆನಂದರಾಜು ,ಇ. ಶ್ರೀನಿವಾಸ್‌, ಕೆ. ಗುಡ್ಡಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.