ಕೆಬಿಎನ್‌-ಬಸವೇಶ್ವರ ಆಸ್ಪತ್ರೆಯಲ್ಲಿ ಶೀಘ್ರ ಲ್ಯಾಬ್‌

Team Udayavani, Jul 25, 2020, 4:14 PM IST

ಕೆಬಿಎನ್‌-ಬಸವೇಶ್ವರ ಆಸ್ಪತ್ರೆಯಲ್ಲಿ ಶೀಘ್ರ ಲ್ಯಾಬ್‌

ಕಲಬುರಗಿ: ಕೋವಿಡ್‌-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಎಸ್‌ಐ ಮೆಡಿಕಲ್‌ ಕಾಲೇಜು, ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪುರೆ ಮೆಡಿಕಲ್‌ ಕಾಲೇಜು (ಎಂಆರ್‌ಎಂಸಿ) ಅಥವಾ ಬಸವೇಶ್ವರ ಆಸ್ಪತ್ರೆ ಹಾಗೂ ಕೆಬಿಎನ್‌ ಆಸ್ಪತ್ರೆಗಳಲ್ಲಿ ಶೀಘ್ರ ಸೋಂಕು ಮತ್ತೆ ಲ್ಯಾಬ್‌ ಆರಂಭಿಸಲಾಗುವುದು ಎಂದು ಸಂಸದ ಉಮೇಶ್‌ ಜಾಧವ್‌ ಹೇಳಿದರು.

ಡಿಸಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರದ (ಐಸಿಎಂಆರ್‌) ಮಹಾ ನಿರ್ದೇಶಕ ಭಾರ್ಗವ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಂಸದರು, ಜಿಲ್ಲೆಯಲ್ಲಿ ಕೋವಿಡ್ ಪತ್ತೆಗಾಗಿ ಲ್ಯಾಬ್‌ಗಳ ಅವಶ್ಯಕತೆಯಿದೆ ಎಂದರು.

ಇಎಸ್‌ಐ ಮೆಡಿಕಲ್‌ ಆಸ್ಪತ್ರೆಯಲ್ಲಿ ಅವಶ್ಯಕತೆಯಿರುವ ಹುದ್ದೆಗಳಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಕರೆದು, ಸ್ಥಳೀಯ ಜನರಿಗೆ ಉದ್ಯೋಗಾವಕಾಶ ನೀಡಲಾಗುವುದು. ಕೋವಿಡ್ ದಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಆತ್ಮವಿಶ್ವಾಸ ಮೂಡಿಸುವಲ್ಲಿ ವೈದ್ಯರು ಪ್ರಮುಖ ಪಾತ್ರವಹಿಸಬೇಕು ಎಂದು ಸಲಹೆ ನೀಡಿದರು. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಅಂತಿಮ ಸಂಸ್ಕಾರ ಸಂದರ್ಭದಲ್ಲಿ ಕೋವಿಡ್ ಸ್ವಯಂ ಸೇವಕರಿಗೆ ಅಗತ್ಯ ಸಹಕಾರ ನೀಡುವುದರ ಮೂಲಕ ಅಂತ್ಯಸಂಸ್ಕಾರದಲ್ಲಿ ಯಾವುದೇ ಅಡೆ ತಡೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಮ್ಸ್‌ಗೆ ಭೇಟಿ: ಇದೇ ಸಂದರ್ಭದಲ್ಲಿ ಜಿಮ್ಸ್‌ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ಕೊರೊನಾ ಸೋಂಕಿತ ವ್ಯಕ್ತಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು. ಜಿಮ್ಸ್‌ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸವಲತ್ತುಗಳಿದ್ದು, ರೋಗಿಗಳು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೇ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಧೈರ್ಯ ತುಂಬಿದರು.

ಡಾ| ಕವಿತಾ ಪಾಟೀಲ, ಡಾ| ಶಫಿಯೋದ್ದಿನ್‌, ಡಾ| ಎಸ್‌. ಎಂ. ಅವಂತಿ, ಡಾ| ಮಹಮ್ಮದ್‌ ಫಾರೂಕ್‌, ಡಾ| ಎಂ.ಅಲಿ ಪಟೇಲ್‌, ಡಾ| ಪಾಕಂಡೆಕರ್‌, ಪ್ರಶಾಂತ್‌ ಕೆ., ಇದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.