ಕ್ರಿಯಾಯೋಜನೆಯಂತೆ ಕೆಲಸ ಮಾಡಿ


Team Udayavani, Jul 29, 2020, 2:38 PM IST

vp-tdy-1

ವಿಜಯಪುರ: ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿ ತ್ತೈಮಾಸಿಕ ಅವಧಿಯಲ್ಲಿ ಕ್ರಿಯಾಯೋಜನೆ ಅನ್ವಯ ಕಾರ್ಯ ನಿರ್ವಹಿಸಬೇಕು. ವಿವಿಧ ಮಹಿಳೆಯರ ಮತ್ತು ಮಕ್ಕಳ ಅನುಕೂಲಕ್ಕಾಗಿ ಚಟುವಟಿಕೆ, ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರದ 2020-21 ನೇ ಸಾಲಿನ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂದಿನ 3 ತಿಂಗಳ ಅವ ಧಿಗೆ ರೂಪಿಸಿರುವ ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವ ಜೊತೆಗೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌ ಸೇರಿದಂತೆ ಸಾಂಕ್ರಾಮಿಕ ರೋಗ, ಕೋವಿಡ್‌ ನಿಯಂತ್ರಣಕ್ಕೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಯೋಗದಲ್ಲಿ ಜಿಲ್ಲೆಯ ಮಹಿಳೆಯರಲ್ಲಿ ಜಾಗೃತಿ, ಗ್ರಾಮ, ತಾಲೂಕು ಮಟ್ಟದ ಮಹಿಳೆಯರಲ್ಲಿ ಸರ್ಕಾರದ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಸಣ್ಣ ಹಣಕಾಸು ಉದ್ದಿಮೆ ಸ್ಥಾಪನೆ ಹಾಗೂ ವಿವಿಧ ಸಾಲ ಸೌಲಭ್ಯಗಳು, ಬಾಲ್ಯವಿವಾಹ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಮೌಡ್ಯಗಳ ನಿವಾರಣೆ ಸೇರಿದಂತೆ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಅಡಿಯಲ್ಲಿ ಪೋಷಣ ಅಭಿಯಾನ ಅಂಗವಾಗಿ ನಡೆಯುವ ಲಸಿಕಾ ಕಾರ್ಯಕ್ರಮ ಸಂದರ್ಭದಲ್ಲಿ ಕೋವಿಡ್‌ ಮುನ್ನೆಚ್ಚರಿಕೆ, ಮಕ್ಕಗಳಿಗೆ ಶಿಕ್ಷಣ ಮತ್ತು ರಕ್ಷಣೆ ಕುರಿತಂತೆ ಸೂಕ್ತ ಅರಿವು ಪಾಲಕರಲ್ಲಿ ಮೂಡಿಸಬೇಕು ಎಂದರು.

2020-21ನೇ ಸಾಲಿನ ಕ್ರಿಯಾಯೋಜನೆ ಅನ್ವಯ ಗ್ರಾಮೀಣ-ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವಾರ್ಡ್‌ವಾರು ಸಮೂಹ ಮಾಧ್ಯಮ, ಆಕಾಶವಾಣಿ, ಎಸ್‌ಎಂಎಸ್‌, ಬಸ್‌ ನಿಲ್ದಾಣಗಳಲ್ಲಿ ಜಿಂಗಲ್ಸ್‌ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಕುರಿತು ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಸಖೀ ಒನ್‌ ಸ್ಟಾಪ್‌ ಸೆಂಟರ್‌ ಯೋಜನೆ ಜಿಲ್ಲಾ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗೌರವಧನ ಆಧಾರದ ಮೇಲೆ ಈ ಕೇಂದ್ರಗಳ ಸಿಬ್ಬಂದಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಈ ಕೇಂದ್ರಗಳಲ್ಲಿ 2020ರ ಏಪ್ರೀಲ್‌ ತಿಂಗಳಿಂದ ಜುಲೈವರೆಗಿನ ದಾಖಲಾದ ಪ್ರಕರಣಗಳು ಸೇರಿದಂತೆ ಈವರೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರ ಸಮಗ್ರ ಮತ್ತು ಸಮರ್ಪಕ ವರದಿಯೊಂದಿಗೆ ಚರ್ಚಿಸಬೇಕು. ಅದರಂತೆ ಇಂತಹ ಪ್ರಕರಣಗಳಲ್ಲಿ ಶೀಘ್ರ ಪರಿಹಾರ ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲಾ ಸಮನ್ವಯ ಮತ್ತು ಪರಿಶೀಲನಾ ಸಭೆ ನಡೆಸಿದ ಅವರು, 2019-20 ಹಾಗೂ 2020-21ನೇ ಸಾಲಿನ ಪ್ರಕರಣ ದಾಖಲು ಇತ್ಯರ್ಥ ಸೇರಿದಂತೆ ಸೂಕ್ತ ಮಾಹಿತಿಗಳೊಂದಿಗೆ ವರದಿ ಸಿದ್ಧಪಡಿಸಿ ಮಂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾನೂನಿನ ಕುರಿತಂತೆ ಪ್ರತಿ ಗ್ರಾಮವಾರು ಗ್ರಾಮಸ್ಥರಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ತಿಳಿಹೇಳುವ ಜೊತೆಗೆ ಈವರೆಗೆ ಬಾಲ್ಯವಿವಾಹದಿಂದ ರಕ್ಷಿಸಿದ ಮಕ್ಕಳ ಬಗ್ಗೆಯೂ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.

ಜಿಪಂ ಸಿಇಒ ಗೋವಿಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆಲಗೂರ, ಸಿಡಿಪಿಒ ಚವ್ಹಾಣ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿ ಇದ್ದರು

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.