ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಇಲ್ಲ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ: ಸವದಿ
Team Udayavani, Jul 29, 2020, 2:51 PM IST
ಬೆಂಗಳೂರು: ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ನಮಗಂತೂ ಯಾವುದೇ ಅಸಮಾಧಾನ ಇಲ್ಲ ಪಕ್ಷದ ಕಾರ್ಯಕರ್ತನಾಗಿ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆ ಎಂದು ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ಕ್ಷೇತ್ರದ ಕೆಲಸಗಳ ಕಾರಣದಿಂದ ಸಿಎಂ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷ ತುಂಬಿದ ಸಂಭ್ರಮದಲ್ಲಿ ಶಾಸಕರಿಗೆ ನಿಗಮ ಮಂಡಳಿ ಭಾಗ್ಯ ನೀಡಿದ್ದಾರೆ. ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಪ್ರೀತಿಯಿಂದ ನನ್ನನ್ನು ನೇಮಕ ಮಾಡಿದ್ದಾರೆ. ಆದರೆ, ಆ ಸ್ಥಾನವನ್ನು ನೇಕಾರ ಸಮುದಾಯದ ಕಾರ್ಯಕರ್ತರಿಗೆ, ಮುಖಂಡರಿಗೆ ನೀಡಿ ಎಂದು ಮುಖ್ಯ ಮಂತ್ರಿಯವರಿಗೆ ಮನವರಿಕೆ ಮಾಡುತ್ತೇನೆ ಎಂದು ಹೇಳಿದರು.
ತಮ್ಮ ಕ್ಷೇತ್ರದಲ್ಲಿ ಕೋವಿಡ್ ಹಾವಳಿಯ ಕುರಿತು ಮಾತನಾಡಿ, ಮಹಾರಾಷ್ಟ್ರದ ಸಂಪರ್ಕದಿಂದ ಕೋವಿಡ್ ಕಾಣಿಸಿಕೊಂಡಿತ್ತು, ಇವಾಗ ಕೋವಿಡ್ ನಿಯಂತ್ರಣದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ