ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ ಅಶ್ವತ್ಥನಾರಾಯಣ

Team Udayavani, Jul 29, 2020, 8:05 PM IST

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ನವ ಭಾರತವನ್ನು ನಿರ್ಮಾಣ ಮಾಡುವ ಪ್ರಬಲ ಶಕ್ತಿ ಹೊಂದಿದ್ದು, ಆಧುನಿಕ ದೃಷ್ಟಿಕೋನ, ದೇಶದ ಅಗತ್ಯಗಳು, ಜಾಗತಿಕ ಸವಾಲು.. ಹೀಗೆ ಎಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ರೂಪಿಸಲಾಗಿರುವ ಪರಿಪೂರ್ಣ ಶಿಕ್ಷಣ ನೀತಿ ಇದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೇಂದ್ರ ಸರಕಾರ ಬುಧವಾರ ಪ್ರಕಟಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾಗತಿಸಿರುವ ಅವರು, ಹಲವು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯೇ ಬದಲಾಗಿಲ್ಲ ಅಂದರೆ ಅಚ್ಚರಿ ಆಗುತ್ತದೆ. ನಮಗೆಲ್ಲರಿಗೂ ಗೊತ್ತಿರುವಂತೆ ಶಿಕ್ಷಣ ಎನ್ನವುದು ಮನುಕುಲವನ್ನು ಮುನ್ನಡೆಸುವ ಚಾಲಕ ಶಕ್ತಿ. ಸಶಕ್ತ ಸಮಾಜದ ಆತ್ಮ. ಯಾವುದೇ ದೇಶವನ್ನು ಬಲಿಷ್ಠವಾಗಿ, ಭವ್ಯವಾಗಿ ನಿರ್ಮಾಣ ಮಾಡಬಲ್ಲ ಶಕ್ತಿ ಅದಕ್ಕೆ ಮಾತ್ರ ಇದೆ. ನರೇಂದ್ರ ಮೋದಿ ಅವರು ಮತ್ತೊಂದು ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದಾರೆ ಎಂದಿದ್ದಾರೆ.

ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿ:

ಈಗಾಗಲೇ ರಾಜ್ಯ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು, ಆ ಬಗ್ಗೆ ಸೂಕ್ತ ಸಲಹೆ-ಸಹಕಾರ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ್ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ. ಕೇಂದ್ರ ಸರಕಾರವು ಜಾರಿ ಮಾಡಿದ ಕೂಡಲೇ ರಾಜ್ಯದಲ್ಲಿಯೂ ನೀತಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಋಷಿ-ಮುನಿಗಳ ಪಾಠ, ಗುರುಕುಲಗಳು, ಆ ನಂತರ ನಿರಂತರವಾಗಿ ನಮ್ಮ ಶಿಕ್ಷಣ ಪದ್ಧತಿ ಬದಲಾಗುತ್ತಾ ಬಂದಿದೆ. ಕಾಲಕ್ಕೆ ತಕ್ಕಂತೆ ಅದು ರೂಪಾಂತರಾಗುತ್ತಿದೆ. ಈಗಲೂ ಅಂಥದ್ದೇ ಪ್ರಕ್ರಿಯೆ ನಡೆದಿದ್ದು, ಅದಕ್ಕೊಂದು ಸಮಗ್ರತೆಯ ಸ್ವರೂಪ ಬಂದಿದೆ.1986ರಲ್ಲಿ ಮೊದಲಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು. ಬಳಿಕ 1992ರಲ್ಲಿ ಆ ನೀತಿಯನ್ನು ಪರಿಷ್ಕರಿಸಲಾಯಿತು. ಭಾರತವು ಎಲ್ಲ ರಂಗಗಳಲ್ಲೂ ಶರವೇಗದಲ್ಲಿ ಮುನ್ನಡೆಯುತ್ತಿದೆ. ತಾಂತ್ರಿಕವಾಗಿ, ವೈಜ್ಞಾನಿಕವಾಗಿ ನಾಗಾಲೋಟದಲ್ಲಿ ಸಾಗುತ್ತಿದೆ. ಇಂಥ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ಪದ್ಧತಿ ಇರಲೇಬೇಕು. ಶ್ರೀ ನರೇಂದ್ರ ಮೋದಿ ಅವರ ಸರಕಾರ ಈ ಅಗತ್ಯವನ್ನು ಅರ್ಥ ಮಾಡಿಕೊಂಡಿದೆ ಅಲ್ಲದೆ,’ಮಾನವ ಸಂಪನ್ಮೂಲ ಸಚಿವಾಲಯ’ವನ್ನು ’ಶಿಕ್ಷಣ ಸಚಿವಾಲಯ’ ಎಂದು ಮರು ನಾಮಕರಣ ಮಾಡಿರುವುದು ಅರ್ಥಪೂರ್ಣ, ಒಂದು ಕ್ರಾಂತಿಕಾರಕ ಹೆಜ್ಜೆ ಎಂದು ಡಿಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಪದ್ಧತಿಯಲ್ಲಿ ಏಕರೂಪತೆ ತರುವುದು, ಸರ್ವರಿಗೂ ಶಿಕ್ಷಣ ಎನ್ನುವ ಮಾತಿನಂತೆ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವುದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಹಂತದಿಂದಲೇ ಅತ್ಯುತ್ತಮ ಶಿಕ್ಷಣ ಸಿಗಲಿ ಎಂಬುದು ನೀತಿಯ ಆಶಯವಾಗಿದೆ. ಜತೆಗೆ, ಬಹುಭಾಷೆಗಳನ್ನು ಗೌರವಿಸುವ ಅಂಶಗಳಿರುವುದು ನಾವೆಲ್ಲರೂ ಗಮನಿಸಬೇಕಾದ ಅಂಶ. ಒಟ್ಟಾರೆಯಾಗಿ ಪ್ರತಿಯೊಬ್ಬರೂ ಹೊಸ ಶಿಕ್ಷಣ ನೀತಿಯನ್ನು ಸ್ವಾಗತಿಸಬೇಕಾಗಿದೆ. ಮತ್ತೊಮ್ಮೆ ನಾನು ಕೇಂದ್ರ ಸರಕಾರ ಮತ್ತು ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರನ್ನು ಹೃತ್ಪೂರ್ವವಾಗಿ ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.