ಸೋಂಕು ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ: ಡಿಸಿ


Team Udayavani, Aug 1, 2020, 12:30 PM IST

ಸೋಂಕು ನಿಯಂತ್ರಣಕ್ಕೆ  ಜಾಗೃತಿ ಮೂಡಿಸಿ: ಡಿಸಿ

ಗದಗ: ಕೋವಿಡ್‌-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಎಂ.ಸುಂದರೇಶ್‌ ಬಾಬು ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಪಂ ವಿಡಿಯೋ ಕಾನ್ಫೆರೆನ್ಸ್‌ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತ  ನಾಡಿದರು. ಸೋಂಕು ನಿಯಂತ್ರಣಕ್ಕೆ ಈಗಾಗಲೇ ರಚಿಸಲಾದ ವಾರ್ಡ್‌ವಾರು ಸಮಿತಿ ಸದಸ್ಯರಿಗೆ ಹಾಗೂ ಪೌರಕಾರ್ಮಿಕರಿಗೆ ನಿಯಮಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಪೂರೈಸಲು ತಿಳಿಸಿದರು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ರ್ಯಾಪಿಡ್‌ ಟೆಸ್ಟ್‌ ಮೂಲಕ ಪರೀಕ್ಷಿಸಬೇಕು. ಈ ಪರೀಕ್ಷೆಯಲ್ಲಿ ವರದಿಯು ನಕಾರಾತ್ಮಕವಾಗಿ ಬಂದು, ಸೋಂಕಿನ ಲಕ್ಷಣಗಳು ಕಂಡುಬಂದರೆ ಅಂತಹ ಪ್ರಕರಣಗಳನ್ನು ಕೂಡಲೇ ಜಿಲ್ಲೆಯ ಜಿಮ್ಸ್‌ ಆಸ್ಪತ್ರೆಗೆ ವರ್ಗಾಯಿಸಬೇಕು. ಜಿಲ್ಲೆಯಲ್ಲಿ ತೆರೆಯಲಾದ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಹೆಚ್ಚಿನ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕಂಟೈನ್ಮೆಂಟ್‌ ಪ್ರದೇಶಗಳಿಗೆ ನೇಮಿಸಲಾದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಇತ್ತೀಚಿಗೆ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಬೀತಿ ಎದುರಾಗುವ ಸಾಧ್ಯತೆಗಳಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಪತ್ತು ನಿರ್ವಹಣೆ ಕುರಿತಂತೆ ಪಂಚಾಯಿತಿ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಜರುಗಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಜಿಪಂ ಸಿಇಓ ಡಾ| ಆನಂದ ಕೆ. ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಗೃಹದಿಗ್ಬಂಧನದಲ್ಲಿರುವವರನ್ನು ಭೇಟಿ ಮಾಡಿ, ಸಂಬಂ ಧಿಸಿದವರಿಗೆ ವರದಿ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣ ಕುರಿತಂತೆ ಜಾಗೃತಿ ಜಾಥಾಗಳನ್ನು ಆಯೋಜಿಸುವಂತೆ ಸೂಚಿಸಿದರು. ಸೋಂಕು ನಿಯಂತ್ರಣಕ್ಕೆ ವಿವಿಧ ಕಾರ್ಯಗಳಿಗೆ ನಿಯೋಜಿಸಲಾದ ಅಧಿಕಾರಿ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದರು.

ಎಸ್‌ಪಿ ಯತೀಶ್‌ ಎನ್‌. ಮಾತನಾಡಿ, ಗೃಹ ದಿಗ್ಬಂಧನ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬಕ್ರೀದ್‌ ಹಬ್ಬದ ಪ್ರಯುಕ್ತ ಐವತ್ತಕ್ಕಿಂತಲೂ ಹೆಚ್ಚು ಜನ ಸೇರಿ ಪ್ರಾರ್ಥನೆ ಸಲ್ಲಿಸಿದಂತೆ ನಿಗಾವಹಿಸಲು ಸೂಚನೆ ನೀಡಿದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.