ಮಹಾ ಮಳೆಗೆ ಬೆಳಗಾವಿ ಗಡಿಯ ಅನೇಕ ಸೇತುವೆಗಳು ಮುಳುಗಡೆ: ಪ್ರವಾಹದ ಆತಂಕ

Team Udayavani, Aug 6, 2020, 11:05 AM IST

ಮಹಾ ಮಳೆಗೆ ಬೆಳಗಾವಿ ಗಡಿಯ ಅನೇಕ ಸೇತುವೆಗಳು ಮುಳುಗಡೆ: ಪ್ರವಾಹದ ಆತಂಕ

ಬೆಳಗಾವಿ/ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಕೊಂಕಣ ಪ್ರದೇಶದಲ್ಲಿ ನಿರಂತರ ಮಳೆ‌ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಶುರುವಾಗಿದ್ದು, ಅನೇಕ‌‌ ಸೇತುವೆಗಳು ಜಲಾವೃತಗೊಂಡಿವೆ.‌

ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವು ಹೆಚ್ಚಳವಾಗಿ ಚಿಕ್ಕೋಡಿ ಉಪವಿಭಾಗದ ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ ಉಪವಿಭಾಗದ ಯಡೂರ-ಕಲ್ಲೋಳ, ಜತ್ರಾಟ-ಭೀವಶಿ, ಅಕ್ಕೋಳ-ಸಿದ್ದನಾಳ, ಭೋಜವಾಡಿ-ಕುನ್ನೂರ, ಕಾರದಗಾ-ಭೋಜ, ಹುನ್ನರಗಿ- ಭೋಜವಾಡಿ ನಡುವಿನ ಸಂಪರ್ಕ ಸೇತುವೆಗಳು ಮುಳುಗಿದ್ದು, ಮುಂಜಾಗ್ರತಾ ಕ್ರಮವಾಗಿ ಸೇತುವೆಗಳ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್​ ಮಾಡಲಾಗಿದೆ.

ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ನಿಂದ 1.2 ಲಕ್ಷ ಕ್ಯೂಸೆಕ್ ಹಾಗೂ ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 29 ಸಾವಿರ ಕ್ಯೂಸೆಕ್ ಒಟ್ಟು 1.31 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರಲಾರಂಭಿಸಿದೆ.

ನಿರಂತರ ಮಳೆ

ಚಿಕ್ಕೋಡಿ ಉಪವಿಭಾಗದ ಕೆಳಹಂತದ ಆರು ಸೇತುವೆಗಳು ಜಲಾವೃತ

ಚಿಕ್ಕೋಡಿ ಉಪವಿಭಾಗದ ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಪ್ರಯಾಣಿಕರು ಪರ್ಯಾಯ ರಸ್ತೆ ಮಾರ್ಗದಿಂದ ಸಂಚಾರ ನಡೆಸುತ್ತಿದ್ದಾರೆ. ಬುಧವಾರ ರಾತ್ರಿಯಿಂದ 7 ಅಡಿಗೂ ಹೆಚ್ಚು ನೀರು ಕೃಷ್ಣಾ ನದಿಗೆ ಹರಿದು ಬಂದಿದೆ.‌

ನದಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.‌ ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿದೆ. ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.‌ ಚಿಕ್ಕೋಡಿ ಉಪ ವಿಭಾಗದ ಅನೇಕ ಸೇತುವೆಗಳು ಮುಳುಗಡೆ ಆಗಿವೆ. ನಿಪ್ಪಾಣಿಯ ಸೇತುವೆ ಜಲಾವೃತ ಆಗಿದ್ದರಿಂದ ಸಂಚಾರ ಬಂದ್ ಮಾಡಲಾಗಿದೆ.‌

ಬೆಳಗಾವಿ

ನಿಪ್ಪಾಣಿ ತಾಲೂಕಿನ ಸದಲಗಾ-ಬೋರಗಾಂವ ಜಲಾವೃತಗೊಂಡ ರಸ್ತೆಯಲ್ಲಿ ಕೊಚ್ಚಿ ಹೊಗುತಿದ್ದ ಬೈಕ್ ಸವಾರರನ್ನು ಸ್ಥಳೀಯರಿಂದ ರಕ್ಷಣೆ ಮಾಡಲಾಗುತ್ತಿದೆ.

ನಿಪ್ಪಾಣಿ ತಾಲೂಕಿನ ಜತ್ರಾಟ ಗ್ರಾಮ ಬಳಿ ವೇದಗಂಗಾ ನದಿ ನೀರು ಹೊಲಗದ್ದೆಗಳಿಗೆ ನುಗ್ಗಿದ ಪರಿಣಾಮ ನೂರಾರು ಎಕರೆ ಬೆಳೆ ಹಾನಿಯಾಗಿದೆ.‌

ಮುಜಾಗ್ರತಾ ಕ್ರಮವಾಗಿ ಸೇತುವೆಗಳ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದೆ. ಕೃಷ್ಣಾ ನದಿಗೆ ನೀರು ಹೆಚ್ಚಳ ಹಿನ್ನಲೆ ರಾತೋರಾತ್ರಿ ನದಿ ತೀರಕ್ಕೆ ತಾಲೂಕಾಡಳಿತ ಭೇಟಿ ನೀಡಿದೆ.‌ ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಹಾಗೂ ತಾಲೂಕಾ ಅಧಿಕಾರಿಗಳು ಕೃಷ್ಣಾ ನದಿ ತೀರದ ಯಡೂರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಹ ಮುಂಜಾಗ್ರತ ಕ್ರಮವಾಗಿ ಆಗಮಿಸಿದ ಎನ್.ಡಿಆರ್.ಎಫ್ ತಂಡದ ಜೊತೆ ಚರ್ಚೆನಡೆಸಿ, ಪ್ರವಾಹ ಮುಂಜಾಗೃತ ಕ್ರಮಕ್ಕೆ ರೆಡಿಯಾಗುವಂತೆ ಎಸಿ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.