ಶಾಸ್ತ್ರಿ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್‌ ನೀರು ನದಿಗೆ

Team Udayavani, Aug 8, 2020, 3:36 PM IST

ಶಾಸ್ತ್ರಿ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್‌ ನೀರು ನದಿಗೆ

ಆಲಮಟ್ಟಿ: ಕೃಷ್ಣೆ ಉಗಮ ಸ್ಥಾನ ಮತ್ತು ಕೃಷ್ಣೆ ಉಪ ನದಿಗಳಾಗಿರುವ ವೇದಗಂಗಾ, ದೂದಗಂಗಾ ಸೇರಿದಂತೆ ಪಂಚಗಂಗಾ ನದಿಗಳು ಹಾಗೂ ಘಟಪ್ರಭಾ ನದಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 1,41,389 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಜಲಾಶಯದ 26 ಗೇಟುಗಳನ್ನು 1.4 ಮೀ. ಎತ್ತರಿಸಿ 1.41ಲಕ್ಷ ಕ್ಯೂಸೆಕ್‌ಹಾಗೂ ಶಾಸ್ತ್ರಿ ಜಲಾಶಯದ ಬಲ ಬದಿಯಲ್ಲಿರುವ ಕರ್ನಾಟಕ ವಿದ್ಯುತ್‌ ಉತ್ಪಾದನಾ ಘಟಕದ ಆಲಮಟ್ಟಿ ಜಲ ವಿದ್ಯುದಗಾರದ ಎಲ್ಲ ಆರು ಘಟಕಗಳಿಂದ 39 ಸಾವಿರ ಕ್ಯೂಸೆಕ್‌ ನೀರು ಸೇರಿ ಒಟ್ಟು 1.80 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಬುಧವಾರ ಕನಿಷ್ಠ ಒಳ ಹರಿವಿದ್ದ ನದಿಯಲ್ಲಿ ಗುರುವಾರದಿಂದ ಜಲಾಶಯ ಒಳ ಹರಿವಿನಲ್ಲಿ ಏರಿಕೆಯಾಗುತ್ತಾ ಸಾಗಿದೆ. ರಾಜಾಪುರ ಬ್ಯಾರೇಜು ಹಾಗೂ ಕಲ್ಲೋಳ ಬ್ಯಾರೇಜಿನ ಮಾಹಿತಿಯಂತೆ ಶುಕ್ರವಾರ ರಾತ್ರಿ ವೇಳೆಗೆ 2.01 ಲಕ್ಷ ಕ್ಯೂಸೆಕ್‌ ನೀರು ಆಲಮಟ್ಟಿ ಜಲಾಶಯ ತಲುಪುವ ನಿರೀಕ್ಷೆಯಿದೆ ಎಂದು ಕೃಷ್ಣಾಭಾಗ್ಯಜಲ ನಿಗಮದ ಮೂಲಗಳು ತಿಳಿಸಿವೆ.

519.60 ಮೀ. ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶುಕ್ರವಾರ ಸಾಯಂಕಾಲ 517.91ಮೀ. ಎತ್ತರವಾಗಿ 1.41 ಲಕ್ಷ ಕ್ಯೂಸೆಕ್‌ ನೀರು ಒಳಹರಿವಾಗಿ, 1.80 ಲಕ್ಷ ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಆ. 7ರಂದು 3,30,790 ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿತ್ತು. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಗೇಟ್‌ ಗಳಿಂದ 3,48,072 ಕ್ಯೂಸೆಕ್‌ ಹಾಗೂ ಆಲಮಟ್ಟಿ ಜಲ ವಿದ್ಯುದಗಾರದಿಂದ 42 ಸಾವಿರ ಕ್ಯೂಸೆಕ್‌ ನೀರು ಸೇರಿ ಒಟ್ಟು 3,90,072 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿತ್ತು.

ವಿದ್ಯುತ್‌ ಉತ್ಪಾದನೆ :  ಆಲಮಟ್ಟಿ ಜಲ ವಿದ್ಯುದಗಾರದಲ್ಲಿ 55 ಮೆ.ವ್ಯಾ.ನ 5 ಘಟಕ ಹಾಗೂ 15 ಮೆ.ವ್ಯಾ.1 ಘಟಕ ಸೇರಿ ಒಟ್ಟು 6 ಘಟಕಗಳಿಂದ 290 ಮೆ.ವ್ಯಾ. ವಿದ್ಯುತ್‌ ಉತ್ಪಾದನೆಯಾಗುತ್ತದೆ. ಶುಕ್ರವಾರ 39 ಸಾವಿರ ಕ್ಯೂಸೆಕ್‌ ನೀರನ್ನು ಬಳಸಿಕೊಂಡು 250 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ ಎಂದು ಕೆಪಿಸಿಎಲ್‌ನ ಅಧೀಕ್ಷಕ ಅಭಿಯಂತರರು ತಿಳಿಸಿದರು.

-ಶಂಕರ ಜಲ್ಲಿ

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.