ಕೋವಿಡ್ ನಿಂದ ಚೇತರಿಸಿದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Aug 10, 2020, 5:08 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು.
ಕೋವಿಡ್ 19 ಸೋಂಕು ಕಾಣಿಸಿಕೊಂಡಿರುವ ಕಾರಣ ಬಿ ಎಸ್ ಯಡಿಯೂರಪ್ಪ ಅವರು ಆಗಸ್ಟ್ ಎರಡರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ಮುಖ್ಯಮಂತ್ರಿಗಳು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಬಿಗುಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಯಿತು.
ಸೋಂಕಿನ ಯಾವುದೇ ಲಕ್ಷಣವಿಲ್ಲದ ಹಿನ್ನೆಲೆ ಮುಖ್ಯಮಂತ್ರಿಗಳು ಆಸ್ಪತ್ರೆಯ ಕೊಠಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.
ಆಸ್ಪತ್ರೆಯಲ್ಲಿ ಪರಿಣಿತ ವೈದ್ಯರ ತಂಡವು ನಿಗಾವಹಿಸಿತ್ತು. ನಿಯಮಗಳಂತೆ ಸೋಂಕು ನಿವಾರಕ ಔಷಧ ಪದ್ಧತಿಯನ್ನು ಮತ್ರ ಅನುಸರಿಸಲಾಗುತ್ತಿತ್ತು. ಏಳು ದಿನಗಳ ನಿರಂತರ ಆರೈಕೆಯಿಂದ ಸೋಂಕು ವಾಸಿಯಾಗಿ ಸೋಮವಾರ ಆಸ್ಪತ್ರೆಯಿಂದ ಮುಖ್ಯಮಂತ್ರಿಗಳು ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ