ಆಸ್ತಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಲು ಸೂಚನೆ

Team Udayavani, Aug 14, 2020, 9:16 AM IST

ಆಸ್ತಿ ತೆರಿಗೆ ಸಂಗ್ರಹಕ್ಕೆ ಒತ್ತು  ನೀಡಲು ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡುವುದಕ್ಕೆ ಹೆಚ್ಚು ಒತ್ತು ನೀಡುವಂತೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರು ಕಂದಾಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಬಗ್ಗೆ ಬಿಬಿಎಂಪಿಯ ಎಲ್ಲ ವಲಯದ ಕಂದಾಯ ಅಧಿಕಾರಿಗಳೊಂದಿಗೆ ಆಯುಕ್ತರು ಗುರುವಾರ ಸಭೆ ನಡೆಸಿ, ಕೋವಿಡ್ ಸೋಂಕು ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಕೇವಲ 68 ಕೋಟಿ ರೂ. ಮಾತ್ರ ಪಾಲಿಕೆಯ ಖಜಾನೆಯಲ್ಲಿದೆ. ಹೀಗಾಗಿ, ಪಾಲಿಕೆಯ ಆರ್ಥಿಕ ಪರಿಸ್ಥಿತಿ ಸುಧಾರಿಸುವುದಕ್ಕೆ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರನ್ನು ಪತ್ತೆ ಮಾಡಿ ಆಸ್ತಿ ತೆರಿಗೆ ವಸೂಲಿ ಮಾಡುವಂತೆ ಸೂಚನೆ ನೀಡಿದರು.

ಈ ವರ್ಷ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಹೇಗಿದ್ದರೂ 2021ರ ಮಾರ್ಚ್‌ನ ವರೆಗೆ ಅವಕಾಶ ಇದೆ.ಆದರೆ, ಈಗಾಗಲೇ ಆಸ್ತಿತೆರಿಗೆ ಉಳಿಸಿಕೊಂಡಿರುವವರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡುವಂತೆ ಆಯುಕ್ತರು ಕಂದಾಯ ವಿಭಾಗದ ಅಧಿಕಾರಿಗಳಿಗೆ ತಿಳಿಸಿದರು.

ವಲಯವಾರು ಪಟ್ಟಿಗೆ ಸೂಚನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಪಟ್ಟಿ ಮಾಡಿ ಅತೀ ಹೆಚ್ಚು ಬಾಕಿ ಉಳಿಸಿಕೊಂಡವರ ಸರದಿಯಾಗಿ ನೋಟಿಸ್‌ ಜಾರಿ ಮಾಡುವಂತೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಯಾರೂ ಪಾಲಿಕೆಯ ನೋಟಿಸ್‌ಗೂ ಉತ್ತರ ನೀಡುವುದಿಲ್ಲವೂ ಅವರ ವಾಣಿಜ್ಯ ಕಟ್ಟಡ ಅಥವಾ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಮನೆಯವಸ್ತುಗಳನ್ನು ಜಪ್ತಿ ಮಾಡಲು ಕ್ರಮ ವಹಿಸಿ ಇದಕ್ಕೂ ಮೊದಲು ನೋಟಿಸ್‌ ಜಾರಿ ಮಾಡಿ. ಇದಕ್ಕೆ ನೀಡುವ ಉತ್ತರದ ಮೇಲೆ ಕ್ರಮವಹಿಸಿ ಎಂದು ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೀವದ ಜೊತೆ ಜೀವನವೂ ಮುಖ್ಯ!: ಜೀವದ ಜೊತೆ ಜೀವನವೂ ಮುಖ್ಯ ಎಂದು ಆಯುಕ್ತರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕೋವಿಡ್ ತುರ್ತು ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಅದೇ ಸಂದರ್ಭದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುವುದೂ ಅತೀ ಮುಖ್ಯ ಹೀಗಾಗಿ, ಆಸ್ತಿತೆರಿಗೆ ಸಂಗ್ರಹದ ಕಡೆಯೂ ಗಮನಹರಿಸಿ, ಕೋವಿಡ್ ಕೆಲಸವನ್ನೂ ನಿಭಾಯಿಸಿ ಇದು ಸಂಕಷ್ಟದ ಸಮಯವಾಗಿದ್ದು, ದಕ್ಷತೆಯಿಂದ ಎದುರಿಸಿ ಎಂದು ಆಯುಕ್ತರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ವಿಶೇಷ ಆಯುಕ್ತ (ಕಂದಾಯ)ರಾದ ಬಸವರಾಜು, ಜಂಟಿ ಆಯುಕ್ತ ವೆಂಕಟಾಚಲಪತಿ ಹಾಗೂ ಸಭೆಯಲ್ಲಿ ವಿವಿಧ ವಲಯದ ಕಂದಾಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.