ಮಳೆಯ ನಡುವೆ ಸಲಗ ರೊಮ್ಯಾನ್ಸ್‌!


Team Udayavani, Aug 14, 2020, 4:21 PM IST

ಮಳೆಯ ನಡುವೆ ಸಲಗ ರೊಮ್ಯಾನ್ಸ್‌!

ಕೋವಿಡ್ ಲಾಕ್‌ಡೌನ್‌ನಿಂದಾಗಿ ಚಿತ್ರೀಕರಣದಲ್ಲಿ ಅರ್ಧಕ್ಕೆ ನಿಂತಿದ್ದ ಚಿತ್ರಗಳು, ಈಗ ನಿಧಾನವಾಗಿ ಮತ್ತೆ ತಮ್ಮ ಚಿತ್ರೀಕರಣವನ್ನು ಪ್ರಾರಂಭಿಸುತ್ತಿವೆ. ಇನ್ನು ಹೀಗೆ ಅರ್ಧಕ್ಕೆ ನಿಂತಿದ್ದ “ಸಲಗ’ ಚಿತ್ರ ಕೂಡ ತನ್ನ ಚಿತ್ರೀಕರಣವನ್ನು ಪುನಾರಂಭಿಸಿದೆ.

ಹೌದು, ಈಗಾಗಲೇ “ಸಲಗ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಕೆಲವು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿತ್ತು. ಆದರೆ ಅಷ್ಟರಲ್ಲಾಗಲೇ ಕೊರೊನಾ ಕಂಟಕ ಎದುರಾಗಿದ್ದರಿಂದ, ಅನಿರೀಕ್ಷಿತವಾಗಿ ಚಿತ್ರೀಕರಣಕ್ಕೆ ಬ್ರೇಕ್‌ ಬಿದ್ದಿತು. ಈಗ ಮತ್ತೆ ಚಿತ್ರೀಕರಣವನ್ನು ಆರಂಭಿಸಿರುವ “ಸಲಗ’ ಚಿತ್ರತಂಡ ತನ್ನ ರೊಮ್ಯಾಂಟಿಕ್‌ ಹಾಡಿನ ಚಿತ್ರೀಕರಣಕ್ಕೆ ಮುಂದಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ನಾಯಕ – ನಾಯಕಿ ಸೇರಿದಂತೆ ಕೇವಲ 12 ಮಂದಿ ತಂತ್ರಜ್ಞರೊಂದಿಗೆ “ಸಲಗ’ದ ಈ ಹಾಡನ್ನು ಚಿತ್ರೀಕರಿಸಲಾಗುತ್ತಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಹಸಿರಿನ ಸುಂದರ ತಾಣಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಈ ಹಾಡನ್ನು ಸೆರೆಹಿಡಿಯಲಾಗುತ್ತಿದೆ. “ಮಳೆಯೇ ಮಳೆಯೇ ಅಂಬೆಗಾಲಿಡುತ್ತಾ ಸುರಿಯೇ…’ ಎಂದು ಶುರುವಾಗುವ ಈ ರೊಮ್ಯಾಂಟಿಕ್‌ ಹಾಡಿಗೆ ಚರಣ್‌ ರಾಜ್‌ ಸಂಗೀತ ಸಂಯೋಜನೆ ಮಾಡಿದ್ದು, ನಾಯಕ ದುನಿಯಾ ವಿಜಯ್‌ ಮತ್ತು ನಾಯಕಿ ಸಂಜನಾ ಆನಂದ್‌ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ. ಅಲ್ಲದೆ ಇಡೀ ಹಾಡನ್ನು ನೈಜ ಮಳೆಯಲ್ಲೇ ಚಿತ್ರೀಕರಿಸಲಾಗುತ್ತಿದೆ. ದುನಿಯಾ ವಿಜಯ್‌ ನಟಿಸಿ, ನಿರ್ದೇಶಿಸುತ್ತಿರುವ “ಸಲಗ’ ಚಿತ್ರದಲ್ಲಿ ಡಾಲಿ ಧನಂಜಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಟಗರು’ ಖ್ಯಾತಿಯ ಕೆ.ಪಿ ಶ್ರೀಕಾಂತ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.­

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.