ಕಡ್ಡಾಯವಾಗಿ ಸುರಕ್ಷತಾ ಕ್ರಮ ಅನುಸರಿಸಿ: ಮೇಟಿ

Team Udayavani, Aug 17, 2020, 2:08 PM IST

ಕಡ್ಡಾಯವಾಗಿ ಸುರಕ್ಷತಾ ಕ್ರಮ ಅನುಸರಿಸಿ: ಮೇಟಿ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಜನರು ಕಡ್ಡಾಯವಾಗಿ ಕೆಲವೊಂದು ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಮಾಜಿ ಸಚಿವ ಎಚ್‌.ವೈ. ಮೇಟಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಆರೋಗ್ಯವಂತರಾಗಿರಬೇಕು. ಸಾಮಾಜಿಕ ಬದುಕಿನಲ್ಲಿ ಆರೋಗ್ಯವಂತ ಬದುಕು ಸಾಗಿಸಬೇಕು. ಅದಕ್ಕಾಗಿ ಕೋವಿಡ್ ದಂತಹ ವೈರಸ್‌ ತಡೆಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಒಬ್ಬರಿಂದ ಒಬ್ಬರಿಗೆ ಅತಿಬೇಗ ಹರಡುವ ಸೋಂಕು ಇದಾಗಿದ್ದು, ಪ್ರತಿಯೊಬ್ಬರು ನಿತ್ಯದ ಬದುಕಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕೆಮ್ಮು-ನೆಗಡಿ, ಜ್ವರ ಕಂಡು ಬಂದಲ್ಲಿ ಕೂಡಲೇ ವೈದ್ಯರ ಬಳಿಗೆ ಹೋಗಿ ತಪಾಸಣೆಗೆ ಒಳ ಪಡಬೇಕು, ಅಂಗನವಾಡಿ, ಆಶಾ ಕಾರ್ಯ ಕರ್ತೆಯರೊಂದಿಗೆ ಜನರು ಸಹಕಾರ ನೀಡಬೇಕು. ಕಾಯಿಲೆ ಕಂಡು ಬಂದಲ್ಲಿ ಸರ್ಕಾರಿ ವೈದ್ಯರನ್ನು ಸಂಪರ್ಕಿಸಬೇಕು. ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣ ಕ್ಕೆ ಪ್ರತಿಯೊಬ್ಬರ ಕಾರ್ಯ ಮಹತ್ವದ್ದಾಗಿದೆ. ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಸಹಕಾರ ನೀಡಬೇಕು. ಜನರು ಅವಶ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸುರಕ್ಷತೆಗಾಗಿ ಪರಸ್ಪರರು ನಡೆದಾಡುವ, ಮನೆಯಿಂದ ಹೊರಗೆ ಬಂದಾಗ ಕನಿಷ್ಠ 2 ಮೀಟರ್‌ ಅಂತರ ಕಾಯ್ದುಕೊಳ್ಳಬೇಕು. ಚಿಕ್ಕ ಮಕ್ಕಳು, ಗರ್ಭಾವಸ್ಥೆಯಲ್ಲಿರುವ ತಾಯಂದಿರು, 50 ವರ್ಷ ಮೇಲ್ಪಟ್ಟ ವಯೋವೃದ್ಧರು, ಈ ಸೋಂಕಿನ ಕುರಿತು ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಅಗತ್ಯವಿಲ್ಲದಿದ್ದರೆ ಯಾರೂ ಮನೆಯಿಂದ ಹೊರಗೆ ಬರಬಾರದು. ಮನೆಯಲ್ಲೇ ಸುರಕ್ಷಿತವಾಗಿರಬೇಕು. ಸ್ಯಾನಿ ಟೈಸರ್‌, ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ತುರ್ತು ಅಗತ್ಯವಿದ್ದಲ್ಲಿ ಆರೋಗ್ಯ ಸಹಾಯವಾಣಿ 104 ಇಲ್ಲಿಗೆ ಸಂಪರ್ಕಿಸಬೇಕು. ಜನರು ತಮ್ಮ ಹಾಗೂ ತಮ್ಮವರ ಆರೋಗ್ಯಕ್ಕಾಗಿ ಸುರಕ್ಷತೆ ಕ್ರಮ ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.