ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಿಸಿ

Team Udayavani, Aug 19, 2020, 5:35 PM IST

ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಿಸಿ

ಬೀದರ: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್‌-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭರ್ಕಿ ಪೂರ್ವಕವಾಗಿ ಆಚರಿಸಬೇಕು. ಎಂದು ಜನರಲ್ಲಿ ಮನವಿ ಮಾಡಿದರು.

ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರ ಕಲ್ಪಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ ಗಣೇಶೋತ್ಸವ ಆಚರಣೆ ವೇಳೆ ಸುರಕ್ಷತೆಗೆ ಸಾಕಷ್ಟು ಒತ್ತು ಕೊಡಬೇಕು ಎಂದು ತಿಳಿಸಿದ ಡಿಸಿ, ಇದಕ್ಕೆ ಸಂಬಂಧಿಸಿದಂತೆ ಜೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳಿಗೆ ಮಾರ್ಗಸೂಚಿ ಪಾಲನೆಗೆ ಸೂಚಿಸಲಾಗುವುದು ಎಂದರು. ಹಬ್ಬ ಆಚರಣೆ ವೇಳೆ ಗುಂಪು ಸೇರಿದರೆ ಒಬ್ಬರಿಂದ ಎಲ್ಲರಿಗೂ ಈ ಮಹಾಮಾರಿ ಕೋರೊನಾ ವೈರಸ್‌ ಹರಡುತ್ತದೆ ಎಂಬುದನ್ನು ಎಲ್ಲರೂ ಅರಿಯಬೇಕು. ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸೂಚಿಸಿದರು.

ಎಸ್‌ಪಿ ನಾಗೇಶ ಡಿ.ಎಲ್‌. ಮಾತನಾಡಿ, ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ, ಸರಳ ಆಚರಣೆ ನಡೆಸಿ ಸಹಕರಿಸಲು ಮನವಿ ಮಾಡಿದರು. ಮಾರ್ಗಸೂಚಿ ಅನುಸಾರ ಗಣೇಶೋತ್ಸವ ಆಚರಣೆಗೆ ಸಹಕರಿಸುವುದಾಗಿ ಗಣೇಶ ಮಹಾಮಂಡಳದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಪ್ರಧಾನ ಕಾರ್ಯದರ್ಶಿ ಬಾಬು ವಾಲಿ, ಪದಾಧಿಕಾರಿಗಳಾದ ಸೂರ್ಯಕಾಂತ ಶೆಟಕಾರ, ರಜನೀಶ ವಾಲಿ, ವೀರಶೆಟ್ಟಿ, ವೆಂಕಟೇಶ ಮೋರ್ಕಂಡಿ ತಿಳಿಸಿದರು.

ದೊಡ್ಡ ದೊಡ್ಡ ಗಾತ್ರದ ಗಣೇಶ ಮೂರ್ತಿಗಳು ಹೈದ್ರಾಬಾದ್‌ ಮತ್ತು ಇನ್ನಿತರ ಕಡೆಗಳಿಂದ ಬೀದರಗೆ ಬರುವುದನ್ನು ಜಿಲ್ಲಾಡಳಿತ ಬ್ಯಾನ್‌ ಮಾಡಬೇಕು. ಇನ್ನುಳಿದ ಎಲ್ಲ ನಿಯಮಗಳ ಪಾಲನೆಗೆ ಕ್ರಮವಹಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಚಿಕ್ಕ ಚಿಕ್ಕ ಮಣ್ಣಿನ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ಮಾಡಿದರೆ ಮುಂದಿನ ವರ್ಷದಿಂದ ಜನರು ಇದೇ ನಿಯಮ ಪಾಲನೆ ಮಾಡುವುದರಿಂದ ಪರಿಸರಕ್ಕೆ ಅನುಕೂಲವಾಗಲಿದೆ ಎಂದು ಮಹಾಮಂಡಳದ ಎಲ್ಲ ಸದಸ್ಯರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು ಯಾರೂ ಕೂಡ ತಪ್ಪಾಗಿ ಭಾವಿಸದೇ, ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ ಮಾಡಿದ ಮಾರ್ಗಸೂಚಿ ಎಂದು ತಿಳಿದು ಸಾರ್ವಜನಿಕರು ಸಹಕರಿಸಬೇಕು. -ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.