ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯಸರ್ಕಾರ ಸಂಪೂರ್ಣ ವಿಫಲ: ಈಶ್ವರ್ ಖಂಡ್ರೆ ಆಕ್ರೋಶ
Team Udayavani, Aug 28, 2020, 1:08 PM IST
ಬೆಂಗಳೂರು: ಶಿವಾಜಿ, ರಾಯಣ್ಣ ಇಬ್ಬರೂ ಮಹಾಪುರುಷರೇ. ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೇಹುಗಾರಿಕೆ ಪಡೆ ಕೂಡ ಸಂಪೂರ್ಣ ವೈಫಲ್ಯ ಅನುಭವಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಜೆ ಹಳ್ಳಿ, ಕೆ.ಜಿ ಹಳ್ಳಿ, ಬೆಳಗಾವಿ ಘಟನೆ ಸೇರಿದಂತೆ, ಎಲ್ಲದರಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿ, ಸರ್ಕಾರ ಈ ಕೂಡಲೇ ಶಾಂತಿಮೂಡಿಸುವ ಕೆಲಸ ಮಾಡಬೇಕು. ಮೊದಲೇ ಎರಡು ಸಮುದಾಯವನ್ನು ಕರೆಸಿ ಮಾತನಾಡಬಹುದಿತ್ತು ಇದೀಗ ಎರಡೂ ಸಂಘಟನೆಗಳು ಕೂಡ ಶಾಂತಿಯಿಂದಿರಬೇಕು. ಗೋಲಿಬಾರ್ ಆಗ್ತಿದೆ ಅಂದರೆ ಇಂಟೆಲಿಜೆನ್ಸ್ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ವಿಜಯಪುರ ದಲಿತ ಯುವಕನ ಹತ್ಯೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, 21ನೇ ಶತಮಾನ ಬಂದ್ರೂ ಇಂತ ಅಮಾನವೀಯ ಘಟನೆಗಳು ನಡೆಯುತ್ತಿದೆ. ಅದನ್ನ ನಿಯಂತ್ರಿಸುವ ಕೆಲಸ ಆಗಬೇಕು. ಮೊದಲು ತಪ್ಪಿತಸ್ಥರನ್ನ ಬಂಧಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಖಂಡ್ರೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ