ಪುತ್ತೂರು: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸಾವು
Team Udayavani, Aug 31, 2020, 8:48 AM IST
ಪುತ್ತೂರು: ನರಿಮೊಗರು ಶಾಲಾ ಬಳಿ ಆ.30ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ್ದಾರೆ.
ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ ಐತ್ತಪ್ಪ ಎಂಬವರ ಮಗ ಮಿಥುನ್(18) ಹಾಗೂ ಐತ್ತಪ್ಪ ಅವರ ಸಹೋದರ, ಮೆಸ್ಕಾಂ ಪವರ್ಮ್ಯಾನ್ ಉಮೇಶ್ ಎಂಬವರ ಮಗ ಭವಿತ್ (19) ಮೃತಪಟ್ಟವರು.
ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತವಾಗಿದೆ.ತಲೆಗೆ ತೀವ್ರ ಗಾಯಗೊಂಡಿದ್ದ ಸವಾರರೀರ್ವರೂ ಸಾವಿಗೀಡಾಗಿದ್ದಾರೆ.
ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮವೊಂದಕ್ಕೆ ಮಿಥುನ್, ಭವಿತ್ ಸಹೋದರರು ಬೈಕ್ನಲ್ಲಿ ಹೋಗಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಮೃತ ಮಿಥುನ್ ಅವರು ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಅವರು ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು.
ಅಪಘಾತಕ್ಕೀಡಾಗಿ ರಸ್ತೆ ಮಧ್ಯೆ ಬಿದ್ದಿದ್ದ ಸವಾರರಿಬ್ಬರನ್ನು ಅದೇ ರಸ್ತೆಯಾಗಿ ಹೋಗುತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರು ತನ್ನ ಕಾರಿನಲ್ಲಿ ಕರೆತಂದು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ತಲೆಗೆ ಗಂಭೀರ ಗಾಯಗೊಂಡಿದ್ದ ಸವಾರರೀರ್ವರೂ ಸಾವಿಗೀಡಾಗಿದ್ದಾರೆ.ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್