ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌;ಸಂಸದ ಸಂಗಣ್ಣ ಕರಡಿ ಸಂತಸ

Team Udayavani, Sep 1, 2020, 5:42 PM IST

ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌;ಸಂಸದ ಸಂಗಣ್ಣ ಕರಡಿ ಸಂತಸ

ಕೊಪ್ಪಳ: ಚೀನಾ ವಿರುದ್ಧ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಕೊಪ್ಪಳದಲ್ಲಿ ವಿಶ್ವದರ್ಜೆಯ ಆಟಿಕೆ ಕ್ಲಸ್ಟರ್‌ ಆರಂಭಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ಗ್ರೀನ್‌ ಸಿಗ್ನಲ್‌ ನೀಡಿದ್ದು, 40 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರಕ್ಕೆ ಧನ್ಯವಾದ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ಕೊಪ್ಪಳದ ಕಿನ್ನಾಳ ಕಲೆ ವಿಶ್ವ ಪ್ರಸಿದ್ಧಿ ಪಡೆದಿದೆ. ಆಟಿಕೆಗೆ ಭಾರತ ಅತಿ ದೊಡ್ಡ ಮಾರುಕಟ್ಟೆ ಹೊಂದಿದೆ. ಆದರೆ, ಚೀನಾದ ಶೇ.80 ಆಟಿಕೆಗಳು ಮಾರುಕಟ್ಟೆ ಆವರಿಸಿಕೊಂಡಿವೆ. ಆಟಿಕೆ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಹಾಗೂ ದೇಸಿ ಕಲೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕುಕನೂರು ತಾಲೂಕಿನ ಭಾನಾಪುರ ಬಳಿ ಕ್ಲಸ್ಟರ್‌ ನಿರ್ಮಾಣವಾಗುತ್ತಿದೆ. ಈಗಾಗಲೇ 400 ಎಕರೆ ಭೂಮಿ ಖರೀದಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘಟಕ ಆರಂಭಕ್ಕೆ ಸಕಲ ಪ್ರೋತ್ಸಾಹ ನೀಡಿವೆ. ಪ್ರತಿ ಬಾರಿ ವಿಪಕ್ಷಗಳು ಪ್ರಧಾನಿ ಮೋದಿಯವರು ಎಲ್ಲಿ ಉದ್ಯೋಗ ಸೃಷ್ಟಿಸಿದ್ದಾರೆಂದು ಪ್ರಶ್ನಿಸುತ್ತಿದ್ದರು.

ಇಂದು ಹಿಂದುಳಿದ ಕೊಪ್ಪಳದಲ್ಲಿ ವಿಶ್ವದರ್ಜೆ ಆಟಿಕೆ ಕ್ಲಸ್ಟರ್‌ ಆರಂಭಿಸುವ ಮೂಲಕ 40 ಸಾವಿರ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಕ್ಷೇತ್ರದ ಅಭಿವೃದ್ಧಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಇದಕ್ಕೆ ಕಾರಣವಾದ ಪ್ರಧಾನಿ ಮೋದಿ, ಸಿಎಂ ಬಿಎಸ್‌ವೈ, ರಾಜ್ಯ ಮಂತ್ರಿಮಂಡಲ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಹಾಗೂ ಜಿಲ್ಲೆಯ ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮುಂದಿನ ವರ್ಷ ಜೂನ್‌ ವೇಳೆಗೆ ಮೊದಲ ಉತ್ಪಾದನಾ ಘಟಕ ತಲೆಯೆತ್ತಲಿದ್ದು, 2023ರ ವೇಳೆಗೆ ಸಂಪೂರ್ಣ ಕಾರ್ಯಾರಂಭ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೆ ದೇಸಿಯ ಸಂಸ್ಥೆಯಾದ ಏಕಸ್‌ ಕಂಪನಿ ಆಟಿಕೆ ಕ್ಲಸ್ಟರ್‌ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದೆ. ಇದಕ್ಕೆ ಪೂರಕವಾಗಿ ಕೊಪ್ಪಳ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿ ಉತ್ತಮ ಕಾರ್ಯ ಮಾಡುತ್ತಿವೆ. ಹಿಂದುಳಿದ ನಮ್ಮಂತಹ ಜಿಲ್ಲೆಗಳನ್ನು ಗುರುತಿಸಿ ಉದ್ಯೋಗ ಸೃಷ್ಟಿ, ಉದ್ಯಮ ಸ್ಥಾಪನೆಗೆ ಮುಂದಾಗಿರುವ ಕೇಂದ್ರ-ರಾಜ್ಯ ಸರ್ಕಾರಗಳಿಗೆ ಜಿಲ್ಲೆಯ ಸಮಸ್ತ ಜನತೆ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

ಆಟಿಕೆ ತಯಾರಿಸುವ ಉದ್ಯಮ ಕೊಪ್ಪಳ ಜಿಲ್ಲೆಯಲ್ಲಿ ಆರಂಭವಾಗುವ ಮೂಲಕ ಕೊಪ್ಪಳ ದೇಶವಲ್ಲದೆ ವಿದೇಶಗಳಲ್ಲೂ ಹೆಸರುವಾಸಿಯಾಗಲಿದೆ. ಚೀನಾಕ್ಕೆ ಸಡ್ಡು ಹೊಡೆಯುವ ನಿಟ್ಟಿನಲ್ಲಿ ಆಟಿಕೆ ತಯಾರಿಕಾ ಘಟಕ ನಮ್ಮ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವುದು ಸಂತಸದ ವಿಷಯ.-ಸಂಗಣ್ಣ ಕರಡಿ, ಕೊಪ್ಪಳ ಸಂಸದ

ಟಾಪ್ ನ್ಯೂಸ್

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.