ಮಾರುಕಟ್ಟೆಯಲ್ಲಿ ವ್ಯಾಪಾರ ಅರಂಭಿಸಿದ ವರ್ತಕರು

ಸೋಂಕು ಭೀತಿಯಿಂದ ಮಾರ್ಕೆಟ್‌ಗೆ ಬಾರದ ಜನರು ,ಅವಕಾಶ ನೀಡದಿದ್ದಕ್ಕೆ ಬೀದಿ ಬದಿ ವ್ಯಾಪಾರಿಗಳಿಗೆ ನಿರಾಸೆ

Team Udayavani, Sep 2, 2020, 11:35 AM IST

ಮಾರುಕಟ್ಟೆಯಲ್ಲಿ ವ್ಯಾಪಾರ ಅರಂಭಿಸಿದ ವರ್ತಕರು

ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿ ಮಳಿಗೆಗಳನ್ನು ತೆರೆದಿರುವುದು.

ಬೆಂಗಳೂರು: ಸೋಂಕು ಭೀತಿ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಕೃಷ್ಣರಾಜೇಂದ್ರ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಮಂಗಳವಾರದಿಂದ ಪ್ರಾರಂಭವಾಗಿದೆ.

ಕೆ.ಆರ್‌.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದನ್ನೇ ಮುಖ್ಯ ವೃತ್ತಿಯಾಗಿ ಮಾಡಿಕೊಂಡಿರುವ ನೂರಾರು ಜನ ವ್ಯಾಪಾರಿಗಳು ಕಳೆದ ಐದು ತಿಂಗಳಿನಿಂದ ಯಾವುದೇ ವ್ಯಾಪಾರವಿಲ್ಲದೆ ನಷ್ಟದಲ್ಲೇ ಕಾಲಕಳೆದಿದ್ದರು. ಹೋರಾಟದ ನಂತರ ಪಾಲಿಕೆ ಈ ಎರಡು ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆಯಾದರೂ, ಶೇ.30ರಷ್ಟು ಸಾರ್ವಜನಿಕರೂ ಮಾರುಕಟ್ಟೆಗಳತ್ತ ಮುಖ ಮಾಡದೆ ಇರುವುದು ಇಲ್ಲಿನ ವ್ಯಾಪಾರಿಗಳಲ್ಲಿ ನಿರಾಸೆ ಮತ್ತು ಆತಂಕ ಮೂಡಿಸಿದೆ.

ವ್ಯಾಪಾರಿಗಳು ಇಲ್ಲ, ಗ್ರಾಹಕರೂ ಇಲ್ಲ: ಎರಡು ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಪಾಲಿಕೆ ಅಧಿಕೃತವಾಗಿ ಅವಕಾಶ ಕಲ್ಪಿಸಿದೆಯಾದರೂ ವ್ಯಾಪಾರ ಮಾಡಲು ಮಳಿಗೆಯ ಮಾಲೀಕರು ಹಾಗೂ ಖರೀದಿಸಲು ಗ್ರಾಹಕರು ಹಿಂದೇಟು ಹಾಕಿದ್ದು ಕಂಡು ಬಂತು. ಸೋಮವಾರ ಬೆಳಗ್ಗೆಯಿಂದಲೇ ಇಲ್ಲಿನ ಮಳಿಗೆಗಳ ಸ್ವತ್ಛತಾ ಕಾರ್ಯ ಪ್ರಾರಂಭಿಸಿ ಮಂಗಳವಾರದಿಂದ ವ್ಯಾಪಾರ ಮಾಡಲು ಪಾಲಿಕೆ ಅವಕಾಶ ಮಾಡಿ ಕೊಟ್ಟಿದೆಯಾದರೂ ಗ್ರಾಹಕರ ಕೊರತೆ ಎದ್ದು ಕಾಣಿಸುತ್ತಿತ್ತು.

ಮಾರುಕಟ್ಟೆಯಿಂದ ಹೊರಕ್ಕೆ ಬಂದು ವ್ಯಾಪಾರ: ಕೆ.ಆರ್‌. ಮಾರುಕಟ್ಟೆಯ ಒಳಭಾಗದಲ್ಲಿ ಸಾರ್ವಜನಿಕರು ಬಂದು ವ್ಯಾಪಾರ ಮಾಡದ ಹಿನ್ನೆಲೆಯಲ್ಲಿ ವ್ಯಾಪಾರಿಗಳೇ ಹೂವಿನ ಹಾರವನ್ನು ಹೊರಕ್ಕೆ ತಂದು ಮಾರಾಟ ಮಾಡಲು ಮುಂದಾಗಿದ್ದು, ಕಂಡುಬಂತು. ಮಾರುಕಟ್ಟೆಯ ಮುಖ್ಯ ರಸ್ತೆಯಲ್ಲಿ ಹೂವಿನ ಹಾರ ಹಿಡಿದು ವ್ಯಾಪಾರಿಗಳು ಮಾರಾಟ ಮಾಡಲು ಮುಂದಾದರಾದರೂ ಇಲ್ಲಿಯೂ ಗ್ರಾಹಕರು ಹೂ ಖರೀದಿಸಲು ಬರಲಿಲ್ಲ.

ಬುಧವಾರದಿಂದ ದಂಡ: ಕೆ.ಆರ್‌. ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಳಿಗೆಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಎನ್ನುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಈ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಪಾಲಿಕೆ ಅವಕಾಶ ಕಲ್ಪಿಸಿದೆ. ಅಲ್ಲದೆ, ಈ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿದೆಯೋ ಇಲ್ಲವೋ ಎಂದು ನಿಗಾ ವಹಿಸಲು 15 ಜನ ಮಾರ್ಷಲ್‌ಗ‌ಳನ್ನೂ ಪಾಲಿಕೆ ನೇಮಕ ಮಾಡಿದೆ. ಆದರೆ, ಮಂಗಳವಾರ ಹಲವು ವ್ಯಾಪಾರಿಗಳು ಈ ನಿಯಮ ಉಲ್ಲಂಘನೆ ಮಾಡಿದ್ದು, ಇವರಿಗೆ ಮಂಗಳವಾರ ಎಚ್ಚರಿಕೆ ನೀಡಿ ಬಿಡಲಾಗಿದೆ. ಬುಧವಾರದಿಂದ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲು ಮಾರ್ಷಲ್‌ಗ‌ಳು ನಿರ್ಧರಿಸಿದ್ದಾರೆ.

ಕೊಳಚೆ ನಡುವೆಯೇ ವ್ಯಾಪಾರ ಮಾಡಿದ ವ್ಯಾಪಾರಿಗಳು: ಕಳೆದ ಎರಡು ದಿನಗಳಲ್ಲಿಂದ ನಗರದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮಾರುಕಟ್ಟೆ ಅಕ್ಷರಶಃ ಕೆಸರುಗೆದ್ದಯಂತೆ ಬದಲಾಗಿದ್ದು, ಕೆಸರು ಹಾಗೂ ಕೊಳಚೆ ಪ್ರದೇಶದಲ್ಲೇ ವ್ಯಾಪಾರಿಗಳು ವ್ಯಾಪಾರ ಮಾಡಿದ್ದು, ಕಂಡುಬಂತು.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.