2 ವರ್ಷ ಬಿಬಿಎಂಪಿ ಚುನಾವಣೆ ಡೌಟ್‌?

ಕಾಯ್ದೆ ನೆಪದಲ್ಲಿ ಎಲೆಕ್ಷನ್‌ ಮುಂದೂಡಿಕೆ ತಂತ್ರ, 225 ವಾರ್ಡ್‌ ಮರುವಿಂಗಡಣೆಗೆ ಚಿಂತನೆ

Team Udayavani, Sep 4, 2020, 11:18 AM IST

BNG-TDY-1

ಬೆಂಗಳೂರು: ರಾಜ್ಯ ಸರ್ಕಾರದ ಚಿಂತನೆ ಜಾರಿಯಾದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎರಡು ವರ್ಷಗಳ ಕಾಲ ನಡೆಯುವುದು “ಡೌಟ್‌’ ಪಕ್ಷಾತೀತವಾಗಿ ಬೆಂಗಳೂರಿನ ಎಲ್ಲ ಪಕ್ಷಗಳ ಶಾಸಕರಿಗೂ ಚುನಾವಣೆ ನಡೆಯುವುದು ಇಷ್ಟವಿಲ್ಲದ ಕಾರಣ “ಬಿಬಿಎಂಪಿ ಕಾಯ್ದೆ’ ನೆಪದಲ್ಲಿ ಚುನಾವಣೆ ಮುಂದೂಡುವ ಲಕ್ಷಣಗಳು ಕಂಡುಬರುತ್ತಿವೆ.

198 ವಾರ್ಡ್‌ಗಳ ಮರುವಿಂಗಡಣೆ ಅಧಿಸೂಚನೆಯೂ ಹೊರಬಿದ್ದು ಮತದಾರರ ಪಟ್ಟಿ ಸಿದ್ಧಗೊಳ್ಳುತ್ತಿರುವ ಬೆನ್ನಲ್ಲೇ ವಾರ್ಡ್‌ಗಳ ಸಂಖ್ಯೆ 225ಕ್ಕೆ ಹಾಗೂ ವಲಯಗಳ ಸಂಖ್ಯೆ 15ಕ್ಕೆ ಏರಿಸಿ ಪ್ರತಿ ವಲಯಕ್ಕೆ ಒಬ್ಬ ಆಯುಕ್ತರನ್ನು ನೇಮಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನವಾಗಿದೆ.

ಬಿಬಿಎಂಪಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ ಮಾಡಿ 225 ವಾರ್ಡ್‌ಗಳ ರಚನೆ ಮಾಡುವ ಪ್ರಸ್ತಾವನೆಯಿಂದಾಗಿ ಜನಸಂಖ್ಯೆ ಹಾಗೂ ವಿಸ್ತೀರ್ಣದ ಆಧಾರದ ಮೇಲೆ ಮತ್ತೆ ವಾರ್ಡ್‌ ವಿಂಗಡಣೆಯಾಗಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ. ಜತೆಗೆ, ಬಿಬಿಎಂಪಿ ಕಾಯ್ದೆ ರಚನೆ ಮಾಡಿ ವಿಧಾನಮಂಡಲದಲ್ಲಿ ಮಂಡಿಸಲು ಸಮಯ ಹಿಡಿಯಲಿದೆ.

ಶಾಸಕರಿಗೆ “ಪವರ್‌’: ಈ ಮಧ್ಯೆ, ಹಾಲಿ ಇರುವ ಕೆಎಂಸಿ ಕಾಯ್ದೆಯಲ್ಲಿ 74 ನೇ ತಿದ್ದುಪಡಿ ಪ್ರಕಾರ ಶಾಸಕರಿಗೆ ಮಹಾನಗರ ಪಾಲಿಕೆಗಳಲ್ಲಿ ಹೆಚ್ಚು ಅಧಿಕಾರ ಇಲ್ಲ. ಹೀಗಾಗಿ, ಬಿಬಿಎಂಪಿ ಕಾಯ್ದೆಯಲ್ಲಿ ಶಾಸಕರಿಗೆ ಹೆಚ್ಚು ಅಧಿಕಾರ ಇರುವಂತೆ ನಿಯಮ ಸೇರಿಸಲು ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಶಾಸಕರಿಗೆ ಮಹಾನಗರ ಪಾಲಿಕೆಯಲ್ಲಿ ಹೆಚ್ಚು ಅಧಿಕಾರ ಇರುವಂತೆ ನೋಡಿಕೊಂಡು ಪ್ರಭುತ್ವ ಸಾಧಿಸಲು ಬಿಬಿಎಂಪಿ ಕಾಯ್ದೆಯಲ್ಲಿ ಸೂಕ್ತ ನಿಯಮ ಸೇರಿಸುವುದು ಇದರ ಉದ್ದೇಶ ಎಂದು ಹೇಳಲಾಗಿದೆ.

ಮೀಸಲಾತಿ ನಿಗದಿ ಬಾಕಿ: ಸೆಪ್ಟೆಂಬರ್‌ 10 ಕ್ಕೆ ಬಿಬಿಎಂಪಿಯ ಪ್ರಸ್ತುತ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯಲಿದೆ. ಈಗಾಗಲೇ 198 ವಾರ್ಡ್‌ಗಳ ಮರುವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. 2011ರ ಜನಗಣತಿ ಪ್ರಕಾರವೇ ವಾರ್ಡ್‌ವಾರು ಜನಸಂಖ್ಯೆ ಆಧಾರದಲ್ಲಿ ಮರುವಿಂಗಡಣೆ ಮಾಡಲಾಗಿದೆ. ಸರ್ಕಾರ ಇದೀಗ ವಾರ್ಡ್‌ವಾರು ಮೀಸಲಾತಿ ಪ್ರಕಟಿಸಬೇಕು. ಚುನಾವಣೆ ಆಯೋಗ ಸಹ ನವೆಂಬರ್‌ 30 ರೊಳಗೆ ಅಂತಿಮ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಸೂಚನೆ ನೀಡಿದೆ. ಈ ಹಂತದಲ್ಲಿ ಬಿಬಿಎಂಪಿ ಕಾಯ್ದೆ ರಚನೆಗೆ ವೇಗ ದೊರೆತಿದ್ದು ಜಂಟಿ ಸಲಹಾ ಸಮಿತಿ ಕಾರ್ಯೋನ್ಮುಖವಾಗಿದೆ. ಈ ಎಲ್ಲ “ಪ್ರಹಸನ’ಗಳ ಹಿಂದಿನ ಉದ್ದೇಶ ಬಿಬಿಎಂಪಿ ಚುನಾವಣೆ ಮುಂದೂಡುವುದೇ ಆಗಿದೆ ಎಂದು ಹೇಳಲಾಗಿದೆ.

ಬಿಡಿಎ, ಬೆಸ್ಕಾಂ, ಜಲಮಂಡಳಿ ಸೇರ್ಪಡೆ ಮಾಡುವುದು. ಮೇಯರ್‌ ಅಧಿಕಾರವಧಿ ಎಷ್ಟು ಇರಬೇಕು ಎಂಬುದು, ವಾರ್ಡ್‌ಗಳ ಸಂಖ್ಯೆ ಹೆಚ್ಚಳ ಈ ಎಲ್ಲಾ ವಿಚಾರಗಳು ಚರ್ಚೆ ಮಾಡಿ ಸಲಹೆ-ಸೂಚನೆ ಪಡೆದು ಬಿಬಿಎಂಪಿ ಕಾಯ್ದೆ ಆದಷ್ಟು ಶೀಘ್ರ ರಚಿಸಿ ವಿಧಾನ ಮಂಡಲದಲ್ಲಿ ಮಂಡನೆ ಮಾಡಲಾಗುವುದು. ಎಸ್‌.ರಘು, ಬಿಬಿಎಂಪಿ ಕಾಯ್ದೆ ರಚನೆ ಜಂಟಿ ಸಲಹಾ ಸಮಿತಿ ಅಧ್ಯಕ್ಷ

ಬಿಬಿಎಂಪಿ ಚುನಾವಣೆ ಮುಂದೂಡಲು ಏನೆಲ್ಲಾ ಮಾಡಬೇಕೋ ಅದನ್ನು ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಾಡುತ್ತಿದೆ. ಚುನಾವಣೆ ಹೊಸ್ತಿಲಲ್ಲಿ ಬಿಬಿಎಂಪಿ ಕಾಯ್ದೆ ರಚನೆಯ ಅಗತ್ಯ ಹಾಗೂ ಅದರ ಹಿಂದಿನ ಪ್ರಕ್ರಿಯೆಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿವೆ. ಪಾಲಿಕೆಯಲ್ಲೂ ಚರ್ಚೆ ಆಗಿಲ್ಲ. ಪಿ.ಆರ್‌.ರಮೇಶ್‌, ವಿಧಾನಪರಿಷತ್‌ ಸದಸ್ಯ

ರಾಜ್ಯ ಸಂಪುಟ ಸಭೆಯಲ್ಲಿ ಚರ್ಚೆ : ಬೆಂಗಳೂರು: ಬಿಬಿಎಂಪಿ ವಾರ್ಡ್‌ ಗಳ ಸಂಖ್ಯೆ ಹೆಚ್ಚಳ ಕುರಿತು ರಾಜ್ಯ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 198 ವಾರ್ಡ್‌ ಗಳ ಸಂಖ್ಯೆ 225 ಕ್ಕೆ ಹೆಚ್ಚಿಸುವುದು, ವಲಯಗಳ ಸಂಖ್ಯೆ 15 ಕ್ಕೆ ಹೆಚ್ಚಳ ಸೇರಿ ಹಲವು ವಿಷಯಗಳ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.

ಬಿಬಿಎಂಪಿ ಕಾಯ್ದೆ ರಚನೆ ಕುರಿತ ಜಂಟಿ ಸಲಹಾ ಸಮಿತಿ ಸಭೆ ಶುಕ್ರವಾರ ನಡೆಯಲಿದ್ದು ಅಲ್ಲಿ ಎಲ್ಲದರ ಬಗ್ಗೆ ಚರ್ಚಿಸಿ ನಂತರ ತೀರ್ಮಾನಿಸಲಾಗುವುದು. ಒಂದೊಮ್ಮೆ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಬೇಕಾದರೆ ಚುನಾವಣೆ ಮುಂದೂಡಬೇಕಾಗುತ್ತದೆ. ನ್ಯಾಯಾಲಯದ ಮುಂದೆ ಹೋಗಿ ಸರ್ಕಾರವೇ ಕಾಲಾವಕಾಶ ಕೋರಲಿದೆ ಅದೆಲ್ಲವೂ ಸಮಿತಿಯ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.

ಬಿಬಿಎಂಪಿ ಕಾಯ್ದೆ ಸಮಗ್ರ ತಿದ್ದುಪಡಿಗೆ ಕೈ ಬೆಂಬಲ : ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆಯನ್ನು ಕಾಟಾಚಾರಕ್ಕೆ ತಿದ್ದುಪಡಿ ಮಾಡದೆ ಸಮಗ್ರ ತಿದ್ದುಪಡಿ ಮಾಡಲು ಎಲ್ಲ ರೀತಿಯ ಸಹಕರಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ನಗರದ ಪಕ್ಷದ ಶಾಸಕರೊಂದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಸಭೆ ನಡೆಸಿ, ಈ ಕುರಿತು ಸುದೀರ್ಘ‌ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌. ಪಾಟೀಲ್‌ ಸಮಿತಿ ವರದಿ ಹಾಗೂ ಅಬೈಡ್‌ ಸಲ್ಲಿಸಿದ್ದ ವರದಿಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಒಂದು ಕೋಟಿ ಜನ ಸಂಖ್ಯೆ ಇರುವ ಮಹಾನಗರಗಳಲ್ಲಿ ಎಷ್ಟು ಪಾಲಿಕೆಗಳು ಕಾರ್ಯನಿರ್ವಹಿಸುತ್ತಿವೆ, ಮೇಯರ್‌ ಆಯ್ಕೆ ಪ್ರಕ್ರಿಯೆ ಸೇರಿದಂತೆ ಎಲ್ಲ ವ್ಯವಸ್ಥೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಕಾಯ್ದೆಗೆ ತಿದ್ದುಪಡಿ ತರಬೇಕು. ಸರಕಾರದ ಈ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.