ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ದಾರುಣ ಘಟನೆ: ಹಲವರಿಗೆ ಇರಿತ, ಕಾರಣ ನಿಗೂಢ !
Team Udayavani, Sep 6, 2020, 1:23 PM IST
ಲಂಡನ್: ಇಂದು ಮುಂಜಾನೆ ಇಂಗ್ಲೆಂಡ್ ನ ಎರಡನೇ ಪ್ರಮುಖ ನಗರ ಬರ್ಮಿಂಗ್ ಹ್ಯಾಮ್ ನ ಹಲವೆಡೆ ಜನರು ಸಾಮೂಹಿಕ ಇರಿತಕ್ಕೊಳಗಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅದಾಗ್ಯೂ ಬ್ರಿಟೀಷ್ ಪೊಲೀಸರು ಇದೊಂದು ದಾರುಣ ಘಟನೆ ಎಂದು ಬಣ್ಣಿಸಿದ್ದಾರೆ.
ಸ್ಥಳೀಯ ಕಾಲಾಮಾನ 12:30 AMಗೆ ಬರ್ಮಿಂಗ್ ಹ್ಯಾಮ್ ಸಿಟಿ ಸೆಂಟರ್ ಬಳಿ ಹಲವರನ್ನು ಸಾಮೂಹಿಕವಾಗಿ ಇರಿಯಲಾಗಿದೆ ಎಂದು ವರದಿ ಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ತೆರಳಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಹಲವರು ಇರಿತಕ್ಕೊಳಗಾಗಿದ್ದು ಅದಾಗ್ಯೂ ಎಷ್ಟು ಮಂದಿ ಗಂಭಿರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ತುರ್ತು ಸೇವಾ ಆಧಿಕಾರಿಗಳು ದೌಡಾಯಿಸಿದ್ದು, ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಸಿಟಿ ಸೆಂಟರ್ ನ ಪ್ರಮುಖ ಸ್ಥಳಗಳನ್ನು ಪೊಲೀಸರು ಸುತ್ತುವರೆದಿದ್ದು, ಘಟನೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ ಎಂದು ವರದಿಯಾಗಿದೆ.
ಬಿರ್ಮಿಂಗ್ ಹ್ಯಾಮ್ ಹಲವೆಡೆ ತುರ್ತು ಘೋಷಣೆಗಳನ್ನು ಹೊರಡಿಸಲಾಗಿದ್ದು, ಘಟನೆ ನಡೆದ ಸ್ಥಳದಿಂದ ದೂರವಿರುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ