ಹಾಸನದಲ್ಲಿ 10 ಸಾವಿರ ದಾಟಿದ ಸೋಂಕಿತರು

Team Udayavani, Sep 7, 2020, 2:25 PM IST

ಹಾಸನದಲ್ಲಿ  10 ಸಾವಿರ ದಾಟಿದ ಸೋಂಕಿತರು

ಹಾಸನ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10040ಕ್ಕೆ ಏರಿದ್ದು, ಸಾವಿನ ಸಂಖ್ಯೆ 219ಕ್ಕೆ ಏರಿಕೆಯಾಗಿದೆ. ನಾಲ್ಕು ತಿಂಗಳೊಳಗೇ ಸೋಂಕಿತರ ಸಂಖ್ಯೆ ದಶ ಸಾವಿರ ದಾಟಿದೆ.

ಮುಂಬೈನಿಂದ ಚನ್ನರಾಯಪಟ್ಟಣಕ್ಕೆ ಬಂದ ಐವರಿಗೆ ಮೇ.12 ರಂದು ಮೊದಲ ಬಾರಿಗೆ ಕೋವಿಡ್ ಸೋಂಕು ದೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪಾಸಿಟಿವ್‌ ವರದಿಗಳು ಪ್ರಕಟವಾಗಲು ಆರಂಭಿಸಿದವು. ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 325 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಅರಸೀಕೆರೆ ತಾಲೂಕಿನ 60 ವರ್ಷದ ವೃದ್ಧೆ ಹಾಗೂ ಮಂಡ್ಯ ಜಿಲ್ಲೆಗೆ ಸೇರಿದ 60 ವರ್ಷದ ವೃದ್ಧ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

325 ಮಂದಿಗೆ ಪಾಸಿಟಿವ್‌: ಭಾನುವಾರ ಹೊಸದಾಗಿ ಸೋಂಕು ದೃಢಪಟ್ಟ 325 ಮಂದಿಯ ಪೈಕಿ 131 ಹಾಸನ ಮಂದಿ ತಾಲೂಕಿಗೆ ಸೇರಿದ್ದು, 43 ಮಂದಿ ಅರಸೀಕೆರೆ ತಾಲೂಕಿಗೆ ಸೇರಿದ್ದಾರೆ. ಬೇಲೂರು ತಾಲೂಕಿಗೆ ಸೇರಿದ 36 ಮಂದಿ, ಆಲೂರು ತಾಲೂಕಿಗೆ ಸೇರಿದ 30 ಮಂದಿ, ಸಕಲೇಶಪುರ ತಾಲೂಕಿಗೆಸೇರಿದ 27 ಮಂದಿ, ಅರಕಲಗೂಡು ಮತ್ತು ಚನ್ನರಾಯಪಟ್ಟಣ ತಾಲೂಕಿಗೆ ಸೇರಿದ ತಲಾ 19 ಮಂದಿ, ಹೊಳೆನರಸೀಪುರ ತಾಲೂಕಿಗೆ ಸೇರಿದ 17 ಮಂದಿ ಹಾಗೂ ಹೊರ ಜಿಲ್ಲೆಯ ಮೂವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

3242 ಮಂದಿಗೆ ಚಿಕಿತ್ಸೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 316 ಮಂದಿ ಭಾನುವಾರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ ಒಟ್ಟು 6579 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವವರೂ ಸೇರಿದಂತೆ ಒಟ್ಟು 3242 ಮಂದಿಗೆ ಚಿಕಿತ್ಸೆಮುಂದುವರಿದಿದೆ ಎಂದು ಹೇಳಿದ್ದಾರೆ.

ಕಡ್ಡಾಯವಾಗಿ ಮಾಸ್ಕ್ ಧರಿಸಿ: ಸೆಪ್ಟೆಂಬರ್‌ ನಲ್ಲಿಯೂ ಸೋಂಕು ಅತಿ ಹೆಚ್ಚಾಗುವ ಸೂಚನೆಯಿದೆ. ಹಾಗಾಗಿ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರ ಬರಬಾರದು.ಅನಿವಾರ್ಯವಾಗಿ ಹೊರ ಬಂದರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡರೆ ಸೋಂಕಿನಿಂದ ದೂರಾಗಬಹುದು. ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳುವುದನ್ನು ಕಡಿಮೆ ಮಾಡಬೇಕು. ಪಾಲ್ಗೊಂಡರೂ ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.