ಕೆಳಪರ್ಕಳ : ಬೈಕ್ ಸವಾರನ ಮೇಲೆ ಬಿದ್ದ ವಿದ್ಯುತ್ ಕಂಬ, ಸವಾರ ಗಂಭೀರ
Team Udayavani, Sep 7, 2020, 5:03 PM IST
ಪರ್ಕಳ : ಹಳೆಯದಾದ ಕಬ್ಬಿಣದ ವಿದ್ಯುತ್ ಕಂಬವೊಂದು ತುಂಡಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ಸೋಮವಾರ ಸಂಭವಿಸಿದೆ.
ಕೆಳಪರ್ಕದ ಶ್ರೀ ಕೃಷ್ಣ ಕಲ್ಯಾಣ ಮಂಟಪದ ಪಕ್ಕದಲ್ಲಿ ಈ ದುರ್ಘಟನೆ ನಡೆದಿದ್ದು ಘಟನೆ ನಡೆದ ಸಂದರ್ಭ ಕಂಬದಲ್ಲಿ ವಿದ್ಯುತ್ ಸಂಚಾರ ಇದ್ದರೂ ಯಾವುದೇ ಅಪಾಯ ಸಂಭವಿಸಲಿಲ್ಲ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ವ್ಯಕ್ತಿ ಯಾರು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಮಣಿಪಾಲ ಠಾಣಾ ಪೊಲೀಸರು ದೌಡಾಯಿಸಿದ್ದು, ಪರ್ಕಳ ಮೆಸ್ಕಾಂ ಸಿಬ್ಬಂದಿಗಳು ರಸ್ತೆಗೆ ಅಡ್ಡವಾಗಿ ಬಿದ್ದ ಕಂಬವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ