ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ

ಉಸ್ತುವಾರಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನಿಯೋಜನೆ

Team Udayavani, Sep 9, 2020, 3:30 PM IST

ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ತಾಲೂಕು ಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಕಠಿಣ ಕ್ರಮ ಕೈಗೊಂಡಿದ್ದರೂ ರಾಣೆಬೆನ್ನೂರ, ಬ್ಯಾಡಗಿ, ಹಿರೇಕೆರೂರು, ಹಾವೇರಿ ನದಿ ಪಾತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಅಕ್ರಮಗಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವ ನಿಟ್ಟಿನಲ್ಲಿ ದಿನದ 24 ಗಂಟೆಮರಳುಗಾರಿಕೆ ಮೇಲೆ ಕಣ್ಗಾವಲು ಇರಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗೆ ಪಾಳೆಯದ ಪ್ರಕಾರ ನಿಯೋಜಿಸಲಾಗಿದೆ.

ನಿಯೋಜಿತ ಅಧಿಕಾರಿಗಳು ತಾಲೂಕು ಟಾಸ್ಕ್ ಫೋರ್ಸ್‌ ಸಮಿತಿಯ ಸಮನ್ವಯತೆಯೊಂದಿಗೆ ನದಿ ಪಾತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆಮಾಡಬೇಕು. ಮರಳು ತಪಾಸಣಾ ಕೇಂದ್ರ, ಮರಳು ತನಿಖಾ ಠಾಣೆ, ಮರಳು ಬ್ಲಾಕ್‌ಗಳು, ಮರಳು ಸ್ಟಾಕ್‌ ಯಾರ್ಡ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನದಿ ಪಾತ್ರದಲ್ಲಿ ಸಂಶಯಾಸ್ಪದವಾಗಿ ಓಡಾಡುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಪ್ರತಿದಿನ ನಿರ್ವಹಿಸಿದ ಕಾರ್ಯಚಟುವಟಿಕೆಗಳ ಕುರಿತಂತೆ ಕಾಲಕಾಲಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು.

ಜಿಲ್ಲಾ ಮಟ್ಟದ ಅಧಿಕಾರಿಗಳ ನಿಯೋಜನೆ: ಸೆ.9 ರಿಂದ ಅಕ್ಟೋಬರ್‌ 22ರ ವರೆಗೆ ಪ್ರತಿ ದಿನ ಓರ್ವರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸೆ. 9 ರಂದು ಅಬಕಾರಿ ಉಪ ಆಯುಕ್ತರು, ಸೆ.10 ರಂದು ಪಂಚಾಯತ್‌ ರಾಜ್‌ ಕಾರ್ಯನಿರ್ವಾಹಕ ಅಭಿಯಂತರರು, ಸೆ.11 ರಂದು ಪಂಚಾಯತ್‌ ರಾಜ್‌ ಯೋಜನಾ ಅನುಷ್ಠಾನದ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ. 12 ರಂದು ಪಶುಪಾಲನಾ ಇಲಾಖೆ ಉಪನಿರ್ದೇಶಕರು, ಸೆ.13 ರಂದು ಡಿಡಿಪಿಐ, ಸೆ.14 ರಂದು ಜಂಟಿ ಕೃಷಿ ನಿರ್ದೇಶಕರು, ಸೆ.15 ರಂದು ಕನಾಟಕ ಗ್ರಾಮೀಣಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದಕಾರ್ಯನಿರ್ವಾಹಕ ಇಂಜಿನಿಯರ, ಸೆ.16 ರಂದುತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಸೆ.17 ರಂದು ಜಿಲ್ಲಾ ನೋಂದಣಿ ಅಧಿಕಾರಿ, ಸೆ. 18 ರಂದು ಸಮಾಜ ಕಲ್ಯಾಣ ಇಲಾಖೆಉಪನಿರ್ದೇಶಕರು, ಸೆ. 19 ರಂದು ಹಿಂದುಳಿದವರ್ಗಗಳ ಕಲ್ಯಾಣಾಧಿ ಕಾರಿಗಳು, ಸೆ.20 ರಂದುಅಲ್ಪಸಂಖ್ಯಾತರ ಕಲ್ಯಾಣಾಧಿ ಕಾರಿಗಳು, ಸೆ.21 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಸೆ.22 ರಂದು ಡಾ| ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಸೆ.23 ರಂದು ಕೈಗಾರಿಕೆ ಜಂಟಿ ನಿರ್ದೇಶಕರು, ಸೆ.24 ರಂದುಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ), ಸೆ. 25 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಸಾಮಾಜಿಕ), ಸೆ.26 ರಂದು ಸಹಕಾರ ಸಂಘಗಳ ಉಪನಿಬಂಧಕರು, ಸೆ.27 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ.28 ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ.29 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಸೆ.30 ರಂದು ಜಿಲ್ಲಾ ವಯಸ್ಕರ ಶಿಕ್ಷಣಾ ಧಿಕಾರಿಗಳನ್ನು ನಿಯೋಜಿಸಲಾಗಿದೆ.

ಅ.1 ರಂದು ರೇಷ್ಮೆ ಇಲಾಖೆ ಉಪನಿರ್ದೇಶಕರು, ಅ.2 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಅ.3 ರಂದು ಗೃಹ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಅ.4 ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅ.5 ರಂದು ಅಲ್ಪಸಂಖ್ಯಾತರ ಅಭಿವೃದ್ಧಿನಿಗಮದ ಜಿಲ್ಲಾ ವ್ಯವಸ್ಥಾಪಕರು, ಸೆ.6 ರಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಅ.7 ರಂದು ಜಿಲ್ಲಾ ಪಂಚಾಯತ್‌ ಡಿಆರ್‌ಡಿಎ ಯೋಜನಾ ನಿರ್ದೇಶಕರು, ಅ.8 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಅ.9 ರಂದು ಹಾವೇರಿ ಉಪ ಕೃಷಿ ನಿರ್ದೇಶಕರು, ಅ.10 ರಂದು ರಾಣೆಬೆನ್ನೂರು ಉಪ ಕೃಷಿ ನಿರ್ದೇಶಕರು, ಅ.11 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಅ.12 ರಂದು ಲೋಕೋಪಯೋಗಿ ಬಂದರು ಹಾಗೂ ಒಳನಾಡುಜಲ ಸಾರಿಗೆ ವಿಭಾಗದ ಕಾರ್ಯನಿರ್ವಾಹಕಅಭಿಯಂತರರು, ಅ.13 ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿಗಳು, ಅ.14 ರಂದು ಪರಿಸರ ಅಧಿಕಾರಿಗಳು, ಅ.15 ರಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಅ.16 ರಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿಗಳು, ಅ.17 ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಅ.18 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಅ.19 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾ ಧಿಕಾರಿಗಳು, ಅ.20 ರಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಅ.21 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಅ.22 ರಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.