ಅಧಿಕಾರಿಗಳ ಬೆವರಿಳಿಸಿದ ಗುಪ್ತಾ

ಮೊದಲ ದಿನವೇ ಮಳೆ ಹಾನಿ ಪ್ರದೇಶಗಳಿಗೆ ಭೇಟಿ

Team Udayavani, Sep 13, 2020, 11:34 AM IST

ಅಧಿಕಾರಿಗಳ ಬೆವರಿಳಿಸಿದ ಗುಪ್ತಾ

ಬೆಂಗಳೂರು: “ಸಮಸ್ಯೆ ಹೇಳಬೇಡಿ, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳುತ್ತಿರಿ ಎಂದು ಹೇಳಿ’ ಎಂದು ಪಾಲಿಕೆ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಮೊದಲ ದಿನವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಬೆಳಗ್ಗೆ 6.30 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೆಬ್ಟಾಳ  ಜಂಕ್ಷನ್‌ ಮಾನ್ಯತಾ ಟೆಕ್‌ಪಾರ್ಕ್‌ನ ವ್ಯಾಲಿ ಹಾಗೂ ಹೆಣ್ಣೂರು ರೈಲ್ವೆ ಬ್ರಿಡ್ಜ್ ಸಮೀಪದ ರಾಜಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ಕೆರೆ, ರಾಜಕಾಲುವೆ ವಿಭಾಗದ ಅಧಿಕಾರಿಗಳಿಗೆ “ಮಳೆ ಹಾನಿ ಹೇಗೆ ಆಯಿತು ಎಂದು ನಾನು ಕೇಳುತ್ತಿಲ್ಲ. ಇದಕ್ಕೆ ಪರಿಹಾರ ಹೇಗೆ ಕಂಡುಕೊಳ್ಳುತ್ತೀರಿ ಎಂದು ಹೇಳಿ. ಇದಕ್ಕೆ ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳಿ’ ಎಂದು ನಿರ್ದೇಶಿಸಿದರು. “ಮೂರು ಇಲಾಖೆಗಳು ಒಂದೆಡೆ ಕುಳಿತು ಸಮಸ್ಯೆಗಳಿಗೆ ಏಕರೂಪ ಪರಿಹಾರ ತೆಗೆದುಕೊಳ್ಳಿ. ಪರಸ್ಪರ ದೂರುವ ಪ್ರವೃತ್ತಿ ಕೈಬಿಡಿ ಅಂತಿಮವಾಗಿ ನಮಗೆ ಸಮಸ್ಯೆಗೆ ಪರಿಹಾರವಾಗಬೇಕು. ಈ ನಿಟ್ಟಿನಲ್ಲಿ ಪಾಲಿಕೆಯ ಕೆರೆ ವಿಭಾಗ, ರಾಜಕಾಲುವೆ ಹಾಗೂ ಜಲಮಂಡಳಿಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಎಂದು ಸೂಚಿಸಿದರು.

ಹೆಬ್ಟಾಳ ವ್ಯಾಲಿ(ನಾಲೆ) ತಪಾಸಣೆ: ನಗರದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಮಾನ್ಯತಾ ಟೆಕ್‌ಪಾರ್ಕ್‌ ಸುತ್ತಮುತ್ತಲಿನ ಪ್ರದೇಶ ಜಲಾವೃತ್ತವಾದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪರಿಶೀಲನೆ ನಡೆಸಿದರು. ಇಲ್ಲಿನ ಸಮಸ್ಯೆಯ ಬಗ್ಗೆ ವಿವರಿಸಿದ ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್‌ ಪ್ರಹ್ಲಾದ್‌ ಅವರು, ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹೆಬ್ಟಾಳ ಕೆರೆ ಹಾಗೂ ರಾಚೇನಹಳ್ಳಿ ಕೆರೆಯ ನೀರು ಹೆಬ್ಟಾಳ ವ್ಯಾಲಿ ಮೂಲಕ ಹರಿದು ಹೋಗುತ್ತದೆ. ಮಳೆ ಹೆಚ್ಚು ಸುರಿದಾಗ ಸುತ್ತಲ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಆಗುತ್ತದೆ. ಅಲ್ಲದೆ ನಾಲೆಯ ಮೇಲೆ ಚಾವಣಿ ಅಳವಡಿಸಿದ್ದು, ಹೂಳು ತೆಗೆಯಲು ಸಮಸ್ಯೆ ಆಗುತ್ತಿದೆ ಎಂದು ವಿವರಿಸಿದರು.

ಮಾನ್ಯತಾ ಟೆಕ್‌ ಪಾರ್ಕ್‌ ಬಳಿ ನಾಲೆ ಮೇಲೆ ಎಂಬೆಸ್ಸಿ ಗ್ರೂಫ್ನಿಂದ ಅಳವಡಿಸಿರುವ ಮೇಲ್ಚಾವಣಿಯನ್ನು ಎಂಬೆಸ್ಸಿ ಗ್ರೂಫ್ನವರೇ ಸೂಕ್ತವಾಗಿ ಮತ್ತು ತಾಂತ್ರಿಕವಾಗಿ ತೆರವುಗೊಳಿಸಲು ಮರುವಿನ್ಯಾಸಗೊಳಿ ಸಬೇಕು. ಈ ನಿಟ್ಟಿನಲ್ಲಿ ಎಂಬೆಸ್ಸಿಯವರು ಒಂದು ವಾರದಲ್ಲಿ ಕ್ರಿಯಾಯೋಜನೆ ರೂಪಿಸ ುವಂತೆ ಆಡಳಿತಾಧಿಕಾರಿ ನಿರ್ದೇಶನ ನೀಡಿದರು. ಎಂಬೆಸ್ಸಿಯಿಂದ ಮರುವಿನ್ಯಾಸ ವಿಳಂಬವಾದರೆ, ಪಾಲಿಕೆಯಿಂದಲೇ ಚಾವಣಿ ಮರುವಿನ್ಯಾಸಗೊಳಿಸಿ ಇದರ ದುಪ್ಪಟ್ಟು ದಂಡ ವಿಧಿಸಲು ಸೂಚನೆ ನೀಡಿದರು.

ಜವಾಹರಲಾಲ್‌ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರ ಬಳಿ ಮಳೆಯಾದರೆ ಈ ಭಾಗದಲ್ಲಿ ಮಳೆ ನೀರು ಎರಡು ಮೂರು ಗಂಟೆ ನೀರು ನಿಲ್ಲುತ್ತದೆ ಎಂದು ಇಲ್ಲಿನ ಸ್ಥಳೀಯರು ದೂರಿದರು. ಇದಕ್ಕೆ ವಿವರಣೆ ನೀಡಿದ ಕೆರೆ ವಿಭಾಗದ ಮುಖ್ಯ ಎಂಜಿನಿಯರ್‌ ಮೋಹನ್‌ ಕೃಷ್ಣಾ , ಮಳೆಯಾದರೆ ಅಮೃತಹಳ್ಳಿ ಕೆರೆಯಿಂದ ರಾಚೇಚನಹಳ್ಳಿ ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಕೊಳಚೆ ನೀರು ರಾಜಕಾಲುವೆ ಮಾರ್ಗವಾಗಿ ಬರುವುದರಿಂದ ನೇರವಾಗಿ ಕೆರೆಗೆ ಬಿಡಲು ಸಾಧ್ಯವಿಲ್ಲ. ಇದು ರಸ್ತೆಗೆ ಹರಿಯುವುದರಿಂದ ರಸ್ತೆ ಭಾಗ ಜಲಾವೃತವಾಗುತ್ತದೆ. ಇದಕ್ಕೆ ಪ್ರತ್ಯೇಕ (ಡೈವರ್ಷನ್‌)ಲೈನ್‌ ಮಾಡಿದರೆ ಸಮಸ್ಯೆ ಬಗೆಹರಿಯಲಿದೆ. ರಾಚೇನಹಳ್ಳಿ ಕೆರೆಗೆ ಮಳೆ ನೀರು ಸೇರುವ ರಾಜಕಾಲುವೆ ಮಾರ್ಗವೂ ಕಿರಿದಾಗಿದ್ದು, ಸಮಸ್ಯೆ ಆಗುತ್ತಿದೆ. ಅಲ್ಲದೆ, ಸುಮಾರು 650 ಮೀ. ಡೈವರ್ಷನ್‌ ಲೈನ್‌ ಮಾಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ರಾಷ್ಟ್ರೋತ್ಥಾನ ಜಂಕ್ಷನ್‌ ಗ್ರೇಡ್‌ ಸೆಪರೇಟರ್‌ ತಪಾಸಣೆ: ಹೆಗ್ಡೆ ನಗರ ರಾಷ್ಟ್ರೋತ್ಥಾನ ಜಂಕ್ಷನ್‌ ನಲ್ಲಿ ಗ್ರೇಡ್‌ ಸೆಪರೇಟರ್‌ ಕಾಮಗಾರಿ ತಪಾಸಣೆ ನಡೆಸಿದ ಗೌರವ್‌ ಗುಪ್ತಾ ಅವರು, ಸುತ್ತಮುತ್ತಲಿನ ತ್ಯಾಜ್ಯವನ್ನು ಕೂಡಲೆ ತೆರವುಗೊಳಿಸಿ, ನವೆಂಬರ್‌ ಅಂತ್ಯಕ್ಕೆ ವ್ಯವಸ್ಥೆ ಸರಿಪಡಿಸಲು ಸೂಚನೆ ನೀಡಿದರು. ವಿಶೇಷ ಆಯುಕ್ತರಾದ ಮನೋಜ್‌ ಜೈನ್‌, ಮಂಜುನಾಥ್‌, ರವೀಂದ್ರ, ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಎಂ.ಆರ್‌.ವೆಂಕಟೇಶ್‌, ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್‌, ವಲಯ ಜಂಟಿ ಆಯುಕ್ತರಾದ ಅಶೋಕ್‌, ವೆಂಕಟಾ ಚಲಪತಿ, ರಾಜಕಾಲುವೆ ಮುಖ್ಯ ಎಂಜಿನಿಯರ್‌ ಪ್ರಹ್ಲಾದ್‌, ಯೋಜನೆ ಮುಖ್ಯ ಎಂಜಿನಿಯರ್‌ ರಮೇಶ್‌, ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್‌ ಮೋಹನ್‌ ಕೃಷ್ಣಾ ಇತರ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.