ನಶಾ ಮುಕ್ತ ಉಡುಪಿ ಅಭಿಯಾನ; ಎಸ್‌ಪಿ ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ

Team Udayavani, Sep 16, 2020, 7:58 AM IST

 ನಶಾ ಮುಕ್ತ ಉಡುಪಿ ಅಭಿಯಾನ; ಎಸ್‌ಪಿ ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ

ಎಸ್‌.ಪಿ. ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಯಿತು.

ಉಡುಪಿ: ನಶಾ ಮುಕ್ತ ಉಡುಪಿ ಜಿಲ್ಲೆಯ ಅಭಿಯಾನ ವ್ಯಾಪಕವಾಗಿ ನಡೆಯುತ್ತಿದ್ದು ಗಡಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ಅವರ ನೇತೃತ್ವದಲ್ಲಿ ಕಲ್ಸಂಕ ವೃತ್ತದ ಬಳಿ ಸಂಜೆ 5ರ ಬಳಿಕ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು.

ವಾಹನಗಳಲ್ಲಿ ಹೆಚ್ಚುವರಿ ಲೈಟ್‌, ಹಾರ್ನ್ಗಳ ಅಳವಡಿಕೆ, ಸೂಕ್ತ ದಾಖಲೆ ಇಲ್ಲದವರು ಸಹಿತ ಒಟ್ಟು 115 ಪ್ರಕರಣ ದಾಖಲಿಸಿ 65 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ಸಂಚಾರ ಪೊಲೀಸ್‌ ಠಾಣೆಯಲ್ಲಿ 80 ಪ್ರಕರಣ ದಾಖಲಾಗಿ 40 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ನಗರ ಪೊಲೀಸ್‌ ಠಾಣೆಯಲ್ಲಿ 35 ಪ್ರಕರಣ ದಾಖಲಾಗಿ 25 ಸಾವಿರ ರೂ.ದಂಡ ಸಂಗ್ರಹವಾಯಿತು.

50ಕ್ಕೂ ಅಧಿಕ ಪೊಲೀಸರು
ಈ ಅಭಿಯಾನಕ್ಕಾಗಿ ಜಿಲ್ಲೆಯಾ ದ್ಯಂತ 50ಕ್ಕೂ ಅಧಿಕ ಮಂದಿ ಹಿರಿಯ ಪೊಲೀಸರು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ಶಾಲಾ- ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಶಾಲೆ ಅಥವಾ ಕಾಲೇಜಿನ ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣ ಕಂಡುಬಂದರೆ ಆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್‌ಪಿ ಟಿ.ಆರ್‌. ಜೈಶಂಕರ್‌, ಸಂಚಾರ ಪೊಲೀಸ್‌ ಠಾಣೆಯ ನಿರೀಕ್ಷಕ ಅಬ್ದುಲ್‌ ಖಾದರ್‌, ನಗರ ಠಾಣೆಯ ಪೊಲೀಸ್‌ ನಿರೀಕ್ಷಕ ಶಕ್ತಿವೇಲು ಉಪಸ್ಥಿತರಿದ್ದರು.

ನಿಯಮ ಉಲ್ಲಂಘಿಸಿದರೆ ಕ್ರಮ
ಮಾದಕ ವಸ್ತುಗಳ ಸಾಗಾಟ ನಿಯಂತ್ರಣ ಹಾಗೂ ಸುವ್ಯವಸ್ಥಿತ ಸಂಚಾರ ನಿಯಮ ಪಾಲನೆಯ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮುಂದಿನ ದಿನಗಳಲ್ಲಿಯೂ ಜಿಲ್ಲೆಯ ವಿವಿಧೆಡೆ ಇದೇ ರೀತಿ ದಿಢೀರ್‌ ಕಾರ್ಯಾಚರಣೆ ನಡೆಸಲಾಗುವುದು. ವಾಹನಗಳ ಮಾಡಿಫೈ ಸಹಿತ ಸಂಚಾರ ನಿಯಮ ಉಲ್ಲಂ ಸುವವರ ಮೇಲೆ ಕ್ರಮ ಜರಗಿಸಲಾಗುವುದು.
-ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.