ಪ್ರಧಾನಿ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ; ರಾಹುಲ್, ಕೇಜ್ರಿವಾಲ್ ಶುಭಾಶಯ
ನಾನು ನಿಮ್ಮ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ
Team Udayavani, Sep 17, 2020, 11:07 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ (ಸೆ.17, 2020) 70ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ.
“ವಿಶ್ ಯೂ ವೆರಿ ಹ್ಯಾಪಿ ಬರ್ತ್ ಡೇ ಸರ್, ನಾನು ನಿಮ್ಮ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬಕ್ಕೆ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವಾರು ಗಣ್ಯರು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ:10 ಸಾವಿರ ವರ್ಷಗಳ ಹಿಂದಿನ ಕೆರೆಗೆ ಕಾಯಕಲ್ಪ
ಆ ಪ್ರಯುಕ್ತ ಕೊಯಮತ್ತೂರಿನ ಬಿಜೆಪಿ ಕಾರ್ಯಕರ್ತರು ಬುಧವಾರ ಶಿವನ್ ಕಾಮಾಚಿ ಅಮ್ಮನ್ ದೇಗುಲದಲ್ಲಿ 70 ಕೆ.ಜಿ. ಲಡ್ಡುವನ್ನು ದೇವರಿಗೆ ನೈವೇದ್ಯದ ರೂಪದಲ್ಲಿ ಸಮರ್ಪಿಸಿದ್ದಾರೆ. ಆನಂತರ, ಅದನ್ನು ಭಕ್ತಾದಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗಿದೆ.
ಲಡ್ಡು ವಿತರಣೆಗೂ ಮೊದಲು ದೇಗುಲದ ಬಳಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಆನಂತರ ದೇಗುಲ ಪವೇಶಿಸಿ ಪ್ರಧಾನಿಯವರ ಶ್ರೇಯಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಾಮಾಜಿಕ ಸೇವೆಯಲ್ಲಿ ಬಿಜೆಪಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದರು.
ಬಡವರಿಗೆ ದಿನಸಿ ಹಂಚುವುದು, ರಕ್ತದಾನ ಶಿಬಿರ ,ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವಾರು ಜನೋಪಯೋಗಿ ಸೇವೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ