ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮತ್ತಷ್ಟು ಹೊರೆಯಾದ ಉನ್ನತ ಶಿಕ್ಷಣ

Team Udayavani, Sep 17, 2020, 11:33 AM IST

ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮತ್ತಷ್ಟು ಹೊರೆಯಾದ ಉನ್ನತ ಶಿಕ್ಷಣ

ಮೈಸೂರು: ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.50ರಷ್ಟು ಹೆಚ್ಚಿಸಿರುವ ಮೈಸೂರು ವಿಶ್ವವಿದ್ಯಾಲಯ , ಲಾಕ್‌ ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಮಧ್ಯಮ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದ ಪ್ರಥಮ ವಿಶ್ವವಿದ್ಯಾಲಯವಾಗಿ ಸ್ಥಾಪನೆಗೊಂಡ ಮೈಸೂರು ವಿವಿ2020-21 ಸಾಲಿನ ಸ್ನಾತಕೋತ್ತರ ತರ ಗತಿಗಳ ಪ್ರಥಮ ಹಾಗೂ ದ್ವಿತೀಯ ವರ್ಷಗಳಿಗೆ ಪ್ರವೇಶಕ್ಕೆ ಶುಲ್ಕ ಪಟ್ಟಿ ಬಿಡುಗಡೆ ಮಾಡಿದೆ.

ಈಗಾಗಲೇ ತೃತೀಯ ಸೆಮಿಸ್ಟರ್‌ಗ ‌ಳಿಗೆ ದಾಖಲಾತಿ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡುವ ಮೂಲಕಗ್ರಾಮಾಂತರ ಪ್ರದೇಶ ಮಕ್ಕಳು ಹಾಗೂ ಬಡ ವಿದ್ಯಾರ್ಥಿಗಳನ್ನು ಶೋಣೆಗೆ ಒಳಪಡಿಸಿದೆ.

ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡುವವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು ಗ್ರಾಮಾಂತರ ಪ್ರದೇಶದವರಾಗಿದ್ದು, ವಿವಿಧ ವಿಭಾಗಗ‌ಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಕಳೆದ ಆರೇಳು ತಿಂಗಳಿ ನಿಂದ ಕೊರೊನಾ ಕಾರಣದಿಂದ ಆದ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳ ಪೋಷಕರಿಗೆ ಉದ್ಯೋಗವಿಲ್ಲದೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗಲೇ ವಿಶ್ವವಿದ್ಯಾಲಯ ಪ್ರವೇಶ ಶುಲ್ಕ ಹೆಚ್ಚಿಸಿರುವುದರಿಂದ ಪೋಷಕರು, ವಿದ್ಯಾರ್ಥಿಗಳು ಹಣ ಹೊಂದಿಸಲು ಹೆಣಗಾಡುವಂತಾಗಿದೆ.

ಬಡವಿದ್ಯಾರ್ಥಿಗಳಿಗೆಹೊರೆ: ಮೈಸೂರು ವಿವಿಯಲ್ಲಿ ಉನ್ನತ ಶಿಕ್ಷಣ ಪಡೆಯಬೇಕು ಎಂಬ ಮಹಾದಾಸೆ ಪ್ರತಿ ವಿದ್ಯಾರ್ಥಿಯಲ್ಲೂ ಇರುತ್ತದೆ. ಆದರೆ, ವರ್ಷದಿಂದ ವರ್ಷಕ್ಕೆ ಸ್ನಾತಕೋತ್ತರ ಪದವಿಗೆ ವಿವಿ ಆಡಳಿತ ಮಂಡಳಿ ಶುಲ್ಕ ಹೆಚ್ಚಿಸುವ ಮೂಲಕ ಉನ್ನತ ಶಿಕ್ಷಣ ಪಡೆಯಬೇಕೆಂಬ ಬಡ ವಿದ್ಯಾರ್ಥಿಗಳ ಕನಸಿಗೆ ತಣ್ಣೀರೆರಚುತ್ತಿದೆ.

ಶೇ.50 ಶುಲ್ಕ ಹೆಚ್ಚಳ: ಕಳೆದ ಬಾರಿ ವಿಜ್ಞಾನ ಆಧಾರಿತ ಪದವಿ ವಿಭಾಗಗಳ ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ‌ ವಿದ್ಯಾರ್ಥಿಗ‌ಳಿಗೆ 20 ಸಾವಿರ ರೂ. ನೊಳಗಿದ್ದ ಶುಲ್ಕ ಈ ವರ್ಷ 40 ಸಾವಿರ ರೂ. ದಾಟಿದೆ. ಅಲ್ಲದೇ ಇತರೆ ಪದವಿ ಶಿಕ್ಷಣಕ್ಕೆ ನಾಲ್ಕೈದು ಸಾವಿರ ಇದ್ದ ಶುಲ್ಕಈವರ್ಷ 11 ಸಾವಿರ ರೂ. ದಾಟಿದೆ. ಜೊತೆಗೆ ಪ್ರಥಮ ವರ್ಷದಿಂದ ದ್ವಿತೀಯ ವರ್ಷಕ್ಕೆ ದಾಖಲಾಗುವ ವಿದ್ಯಾರ್ಥಿಗಳ ಶುಲ್ಕವ‌ನ್ನು ಹೆಚ್ಚಿಸಿರುವ ನಿರ್ಧಾರದಿಂಧ ಬಡ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ವಿಮುಖವಾಗುವಂತೆ ಮಾಡಿದೆ.

ಸಾಲದ ಮೊರೆಹೋದ ವಿದ್ಯಾರ್ಥಿಗಳು: ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶೇ.60ರಷ್ಟು ವಿದ್ಯಾರ್ಥಿಗಳು ಬಡ ಹಾಗೂ ಮಧ್ಯಮ ಕುಟುಂಬದವರಾಗಿದ್ದು, ಹೆಚ್ಚಿನವರು ಗ್ರಾಮೀಣ ಪ್ರದೇಶದಿಂದ ಬರುತ್ತಾರೆ. ಆದರೆ, ಈ ಬಾರಿ ಲಾಕ್‌ಡೌನ್‌ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಬಹುಪಾಲು ಕುಟುಂಬಗಳು ಕೈಯಲ್ಲಿ ಹಣವಿಲ್ಲದೇ ಪರದಾಡುತ್ತಿವೆ. ವಿವಿಧ ಕಾರಣಗಳನ್ನೊಡ್ಡಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ದುಪ್ಪಟ್ಟು ಶುಲ್ಕ ಪಡೆಯುತ್ತಿರುವ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೀಡು ಮಾಡಿದೆ. ವಿಶ್ವವಿದ್ಯಾಲಯ ಕೇಳಿದಷ್ಟು ಹಣವನ್ನು ನೀಡಲು ವಿದ್ಯಾರ್ಥಿಗಳ ಪೋಷಕರು ಸಾಲದ ಮೊರೆ ಹೋಗಿದ್ದಾರೆ.

– ಸತೀಶ್‌ ದೇಪುರ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.