ಮೇಲ್ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿಸಿ

ಈಜೀಪುರ-ಕೇಂದ್ರೀಯ ಸದನ ಜಂಕ್ಷನ್‌ ವರೆಗಿನ ಎಲಿವೇಟೆಡ್‌ ಬ್ರಿಡ್ಜ್ ಕಾಮಗಾರಿ

Team Udayavani, Sep 19, 2020, 11:46 AM IST

bng-tdy-2

ಬೆಂಗಳೂರು: ಕೋರಮಂಗಲದ 100 ಅಡಿ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈಜೀಪುರ (ಈಜೀಪುರ ಎಲಿವೇಟೆಡ್‌ ಕಾರಿಡಾರ್‌)ಸಿಗ್ನಲ್‌ ನಿಂದ ಕೇಂದ್ರೀಯ ಸದನ ಜಂಕ್ಷನ್‌ ವರೆಗೆ ನಿರ್ಮಾಣ ಮಾಡುತ್ತಿರುವ ಎಲಿವೇಟೆಡ್‌ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಜುನಾಥ್‌ ಪ್ರಸಾದ್‌ ಅವರು ಅಧಿಕಾರಿಗಳೊಂದಿಗೆ ಶುಕ್ರವಾರಕೋರಮಂಗಲ ಸೋನಿ ವರ್ಲ್ಡ್ ಜಂಕ್ಷನ್‌ನ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿ, 2.5 ಕಿ.ಮಿ ಉದ್ದದ ಎಲಿವೇಟೆಡ್‌ಕಾಮಗಾರಿಯನ್ನು 203 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಈಗಾಗಲೇ ಶೇ. 45 ಕಾಮಗಾರಿ ಮುಗಿದಿದೆ. ಗುತ್ತಿಗೆದಾರರಿಗೆ ಶೇ.32 ಹಣ ಬಿಡುಗಡೆ ಮಾಡಲಾಗಿದೆ ಎಂದರು. ಉದ್ದೇಶಿತ ಮೇಲ್ಸೇತುವೆಗೆ ಒಟ್ಟು 81 ಕಂಬಗಳು ಬರಲಿದ್ದು, ಈಗಾಗಲೇ67ಕಂಬಗಳ ನಿರ್ಮಾಣ ಪೂರ್ಣಗೊಂಡಿದೆ. ಮೇಲ್ಸೇತುವೆ ಮಾರ್ಗದಲ್ಲಿ ಏಳು ಜಂಕ್ಷನ್‌ಗಳು ಹಾಗೂ ನಾಲ್ಕು ರ್‍ಯಾಂಪ್‌ಗ್ಳನ್ನು ನಿರ್ಮಾಣ ಮಾಡಲಾಗುವುದು. ಈ ಮಾರ್ಗದ ಎರಡು ರಸ್ತೆ ಬದಿಯಲ್ಲಿ ತಲಾ ಎರಡು ಪಥಗಳು ಬರಲಿವೆ. ಮೇಲ್ಸೇತುವೆ ಮಾರ್ಗದಲ್ಲಿ 25 ಮರಗಳನ್ನು ಸ್ಥಳಾಂತರಿಸಲಾಗುವುದು. ಮಾರ್ಗದಲ್ಲಿ ಬರುವ 83 ಮರಗಳ ರೆಂಬೆ-ಕೊಂಬೆಕಟಾವು ಮಾಡಲಾಗುವುದು ಎಂದರು.

ಇನ್ನು ಸೇಂಟ್‌ ಜಾನ್ಸ್‌ ಸಂಶೋಧನಾ ಸಂಸ್ಥೆ ಕಾಲೇಜಿನ ಸಮೀಪ ರ್‍ಯಾಂಪ್‌ಬರಲಿದ್ದು, ರ್‍ಯಾಂಪ್‌ ನಿರ್ಮಾಣ ಮಾಡುವುದಕ್ಕೆ ಅಗತ್ಯವಿರುವಷ್ಟು ಜಾಗವನ್ನು ಬಿಟ್ಟುಕೊಡುವಂತೆ ಕೋರಲಾಗಿತ್ತು. ಆದರೆ, ಇಲ್ಲಿಯವರೆಗೆ ಜಾಗ ಹಸ್ತಾಂತರಮಾಡಿಲ್ಲ.ಈಸಂಬಂಧ ಸೇಂಟ್‌ ಜಾನ್ಸ್‌ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ರಸ್ತೆ ಹಾಳಾಗಿದ್ದು, ದುರಸ್ತಿ ಮಾಡಬೇಕು. ಜತೆಗೆಪಾದಚಾರಿಮಾರ್ಗ, ರಸ್ತೆ ಇಕ್ಕೆಲಗಳಲ್ಲಿರುವ ಒಳಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಅದನ್ನು ಸ್ವತ್ಛಪಡಿಸಬೇಕು ಹಾಗೂ ಹಾಳಾಗಿರುವ ಬೀದಿದೀಪಗಳನ್ನು ಸರಿಪಡಿಸುವಂತೆಅಧಿಕಾರಿಗಳಿಗೆ ನಿರ್ದೇಶಿಸಿದರು.ಈ ವೇಳೆ ಪಾಲಿಕೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್‌ ಎನ್‌.ರಮೇಶ್‌, ಅಧೀಕ್ಷಕ ಎಂಜಿನಿಯರ್‌ ಎಂ.ಲೋಕೇಶ್‌ ಇತರರಿದ್ದರು.

ಸಂಚಾರ ದಟ್ಟಣೆಗೆ ಕಡಿವಾಣ :  ಮೇಲ್ಸೇತುವೆಕೇಂದ್ರಿಯ ಸದನ ಜಂಕ್ಷನ್‌ ಮತ್ತು ಸೋನಿ ವರ್ಲ್ಡ್ ಜಂಕ್ಷನ್‌ಗಳ ಮೂಲಕ ಹಾದು ಹೋಗಲಿದೆ.ಕೇಂದ್ರೀಯ ಸದನ ಜಂಕ್ಷನ್‌ ಮೂಲಕ ತಾವರೆಕರೆ, ಎಂ.ಜಿ.ರಸ್ತೆ, ಹೊಸೂರು ರಸ್ತೆ, ಅಗರ, ಬಿಟಿಎಂ ಲೇಔಟ್‌,ಕೋರಮಂಗಲ, ಬಿಡಿಎ ಕಾಂಪ್ಲೆಕ್ಸ್‌, ಸರ್ಜಾಪುರ ಮುಖ್ಯರಸ್ತೆ ಹಾಗೂ ವಿವೇಕನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾದು ಹೋಗಲಿವೆ. ಉದ್ದೇಶಿತ ಮೇಲ್ಸೇತುವೆ ನಿರ್ಮಾಣವಾದ ಮೇಲೆ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಗೆಕಡಿವಾಣ ಬೀಳಲಿದೆ. ಈ ಭಾಗದಲ್ಲಿ ಶೇ.39.69 ವಾಹನ ದಟ್ಟಣೆಕಡಿಮೆಯಾಗಲಿದ್ದು, ವಾಹನ ಸವಾರರಿಗೆಕನಿಷ್ಠ30 ನಿಮಿಷಗಳಷ್ಟು ಸಮಯ ಉಳಿಯಲಿದೆ ಎಂದು ಅಂದಾಜಿಸಲಾಗಿದೆ.

ಕಾರಿಡಾರ್‌ನಲ್ಲಿ ಬರುವ 7 ಜಂಕ್ಷನ್‌ :

  1. ಈಜೀಪುರ ಮುಖ್ಯರಸ್ತೆ- ಒಳವರ್ತುಲ ರಿಂಗ್‌ ರಸ್ತೆ ಜಂಕ್ಷನ್‌
  2. ಸೋನಿ ವರ್ಲ್ಡ್ ಜಂಕ್ಷನ್‌
  3. ಕೇಂದ್ರೀಯ ಸದನ ಜಂಕ್ಷನ್‌
  4. ಕೋರಮಂಗಲ 8ನೇ ರಸ್ತೆ ಜಂಕ್ಷನ್‌
  5. ಕೋರಮಂಗಲ 60 ಅಡಿ ರಸ್ತೆ ಜಂಕ್ಷನ್‌
  6. ಕೋರಮಂಗಲ ಐದನೇ ಬ್ಲಾಕ್‌ 1ಎ ಕ್ರಾಸ್‌ ರಸ್ತೆ ಜಂಕ್ಷನ್‌
  7. ಕೋರಮಂಗಲ ಬಿಡಿಎ ಜಂಕ್ಷನ್‌

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.