ಈರುಳಿ ರಫ್ತು ನಿಷೇಧ ಹಿಂಪಡೆಯಿರಿ: ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪತ್ರ

ಈರುಳ್ಳಿ ತುಂಬಿದ 500 ಲಾರಿಗಳು ನೇಪಾಳ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಸಿಲುಕಿಕೊಂಡಿವೆ

Team Udayavani, Sep 18, 2020, 11:32 AM IST

ಈರುಳಿ ರಫ್ತು ನಿಷೇಧ ಹಿಂಪಡೆಯಿರಿ: ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪತ್ರ

ಮುಂಬಯಿ: ಈರುಳ್ಳಿ ರಫ್ತಿಗೆ ವಿಧಿಸಿರುವ ನಿಷೇಧವನ್ನು ತೆಗೆದು ಹಾಕುವಂತೆ ಕೋರಿ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಿದೆ ಎಂದು ಮುಖ್ಯ
ಮಂತ್ರಿ ಉದ್ಧವ್‌ ಠಾಕ್ರೆ ಬುಧವಾರ ಹೇಳಿದ್ದಾರೆ.

ಈರುಳ್ಳಿ ರಫ್ತು ನಿಷೇ ಧಿಸುವ ನಿರ್ಧಾರದ ಬಗ್ಗೆ ರಾಜ್ಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಅನಂತರ ಠಾಕ್ರೆ ಅವರು ಕ್ಯಾಬಿನೆಟ್‌ ಸಭೆಯಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ಕೇಂದ್ರ ಸರಕಾರದ ಈ ಕ್ರಮದ ವಿರುದ್ಧ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಬುಧವಾರ ಪ್ರತಿಭಟನೆಗಳು ಕೂಡ ನಡೆದಿವೆ. ಮಹಾರಾಷ್ಟ್ರದ ಹೆಚ್ಚಿನ ಸಂಖ್ಯೆಯ ಈರುಳ್ಳಿ ಬೆಳೆಗಾರರ ಮೇಲೆ ಪರಿಣಾಮ ಬೀರುವ ಈ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಕೋರಿ ತಮ್ಮ ಸರಕಾರ ಕೇಂದ್ರಕ್ಕೆ ಪತ್ರ ಬರೆಯಲಿದೆ
ಎಂದು ಸಿಎಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2018-19ರಲ್ಲಿ 21.83 ಲಕ್ಷ ಮೆಟ್ರಿಕ್‌ ಟನ್‌ ಈರುಳ್ಳಿಯನ್ನು ಮಹಾರಾಷ್ಟ್ರದಿಂದ ರಫ್ತು ಮಾಡಲಾಗಿದ್ದು, 2019-20ರಲ್ಲಿ ಹೊರಹೋಗುವ ಸಾಗಣೆ 18.50 ಲಕ್ಷ ಮೆಟ್ರಿಕ್‌ ಟನ್‌ನಷ್ಟಿದೆ ಎಂದು ಪ್ರಧಾನ ಕಾರ್ಯದರ್ಶಿ ಅನುಪ್‌ ಕುಮಾರ್‌ ಅವರು ಸಂಪುಟಕ್ಕೆ ತಿಳಿಸಿದರು. ಮುಂಬಯಿಯ ಜೆಎನ್‌ಪಿಟಿ ಬಳಿ ನಾಲ್ಕು ಲಕ್ಷ ಮೆಟ್ರಿಕ್‌ ಟನ್‌ ಈರುಳ್ಳಿ ಇದೆ. ಅಲ್ಲದೆ ರಾಜ್ಯದಿಂದ ಹೊರಟ ಈರುಳ್ಳಿ ತುಂಬಿದ 500 ಲಾರಿಗಳು ನೇಪಾಳ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಸಿಲುಕಿಕೊಂಡಿವೆ ಎಂದು ಸಚಿವ ಏಕನಾಥ್‌ ಶಿಂಧೆ ಅವರು ಮಾಹಿತಿ ನೀಡಿದ್ದಾರೆ.

ದೇಶೀಯ ಮಾರುಕಟ್ಟೆಯಲ್ಲಿ ಸರಕುಗಳ ಲಭ್ಯತೆ ಹೆಚ್ಚಿಸಲು ಮತ್ತು ಸರಕುಗಳ ಬೆಲೆಯನ್ನು ನಿಗ್ರಹಿಸಲು ಕೇಂದ್ರ ಸರಕಾರವು ಸೋಮವಾರ ತತ್‌ಕ್ಷಣವೇ ಜಾರಿಗೆ ಬರುವಂತೆ ಎಲ್ಲ ರೀತಿಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ನಿಷೇಧಿಸಿದೆ. ಏತನ್ಮಧ್ಯೆ ಮಹಾರಾಷ್ಟ್ರದಲ್ಲಿ ಎಂವಿಎ ಸರಕಾರದ ಘಟಕವಾದ ಕಾಂಗ್ರೆಸ್‌ ಬುಧವಾರ ಕೇಂದ್ರದ ನಿರ್ಧಾರದ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದೆ.

ರಾಜ್ಯದ ರೈತರು ಕೋವಿಡ್‌ ನಷ್ಟದಿಂದ ಚೇತರಿಸಿಕೊಳ್ಳಲು ಪ್ರಾರಂಭಿಸಿದ್ದರೂ ಮೋದಿ ಸರಕಾರವು ಅವರ ಭರವಸೆಯನ್ನು ಮತ್ತೂಮ್ಮೆ ಹುದುಗಿಸಿದೆ. ಈರುಳ್ಳಿ ಬೆಳೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಪಡೆಯುತ್ತಿರುವ ಸಮಯದಲ್ಲಿ ಮೋದಿ ಸರಕಾರ ಇದ್ದಕ್ಕಿದ್ದಂತೆ ಅದರ ರಫ್ತು ನಿಷೇಧಿಸಲು ನಿರ್ಧರಿಸಿದೆ. ಇದರಿಂದ ರೈತರಿಗೆ ಭಾರೀ ನಷ್ಟವಾಗಿದೆ ಎಂದು ರಾಜ್ಯ ಕಂದಾಯ ಸಚಿವ ಬಾಳಾಸಾಹೇಬ್‌ ಥೋರಟ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ

ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ

ಕೇರಳದಲ್ಲಿ ಬಿಸಿಗಾಳಿ: ಶಾಲಾ, ಕಾಲೇಜುಗಳಿಗೆ 4 ದಿನ ರಜೆ!

ಕೇರಳದಲ್ಲಿ ಬಿಸಿಗಾಳಿ: ಶಾಲಾ, ಕಾಲೇಜುಗಳಿಗೆ 4 ದಿನ ರಜೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.