ಕೋವಿಡ್‌-19: ನೆಗೆಟಿವ್‌ ಇದ್ದರೂ ಪಾಸಿಟಿವ್‌ ವರದಿ

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು: ಆರೋಪ

Team Udayavani, Sep 26, 2020, 1:18 PM IST

ಕೋವಿಡ್‌-19: ನೆಗೆಟಿವ್‌ ಇದ್ದರೂ ಪಾಸಿಟಿವ್‌ ವರದಿ

ರಾಮನಗರ: ಕೋವಿಡ್‌ ಸೋಂಕು ನೆಗೆಟಿವ್‌ ಇದ್ದರೂ, ಪಾಸಿಟಿವ್‌ ಎಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸ ಬೇಕು ಎಂದು ಒತ್ತಾಯಿಸಿ ಮೃತ ಮಹಿಳೆಯ ಸಂಬಂಧಿಕರು ಜಿಲ್ಲಾ ಕಚೇರಿಗಳ ಸಂಕಿರ್ಣದ ಮುಂಭಾಗ ಪ್ರತಿಭಟನೆ ನಡೆಸಿದರು.

ತಾಲೂಕಿನ ಕೈಲಾಂಚ ಹೋಬಳಿಯ ಅಂಜನಾಪುರ ಗ್ರಾಮದ ನಿವಾಸಿ ಹೊನ್ನಮ್ಮ ಎಂಬುವರು ಸೆ.24ರಂದು ರಾಜರಾಜೇಶ್ವರಿಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೋವಿಡ್‌ ಸೋಂಕು ಇಲ್ಲದಿದ್ದರೂ, ಸೋಂಕು ಇದೆ ಎಂದು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರಿಂದ ರೋಗಿ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿದ್ದಾರೆ.

ಶವ ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ಶವ ಗ್ರಾಮಕ್ಕೆ ಸಾಗಿಸಿದ ನಂತರ ಪ್ರತಿಭಟನೆಗೆ ಅವಕಾಶ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದ ಮೃತ ಮಹಿಳೆಯ ಪುತ್ರ ಎಚ್‌.ಸುರೇಶ್‌, ಸೆ.17ರಂದು ತಮ್ಮ ತಾಯಿಗೆ ಕಫ‌, ಕೆಮ್ಮು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಸೋಂಕು ಪರೀಕ್ಷೆ ಮಾಡಿಸಲಾಗಿತ್ತು. ಕೋವಿಡ್‌ ಸೋಂಕು ಇದೆ ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ತಿಳಿಸಿ, ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿದರು.

ಸೋಂಕಿನ ಕುರಿತು ಮೊಬೈಲ್‌ಗೆ ಸಂದೇಶ ಬರದಿದ್ದಾಗ ಜಿಲ್ಲಾಸ್ಪತ್ರೆಯಲ್ಲಿ ಒತ್ತಾಯ ಮಾಡಿ ವಿಚಾರಿಸಿದಾಗ ಕೋವಿಡ್‌ ನೆಗೆಟಿವ್‌ ಎಂಬ ಮಾಹಿತಿ ಸೆ.23ರಂದು ಗೊತ್ತಾಗಿದೆ. ಸೆ.24ಕ್ಕೆ ನಮ್ಮ ತಾಯಿ ತೀರಿಕೊಂಡಿದ್ದಾರೆ ಎಂದು ಖಾಸಗಿ ಆಸ್ಪತ್ರೆ ತಿಳಿಸಿದೆ. ಈ ವೇಳೆ ನಡೆಸಿದ ಪರೀಕ್ಷೆಯಲ್ಲೂ ಅವರಿಗೆ ನೆಗೆಟಿವ್‌ ಬಂದಿದೆ. ಆದರೂ ಅವರನ್ನು ಕೋವಿಡ್‌ ವಾರ್ಡಿನಲ್ಲೇ ಇರಿಸಲಾಗಿತ್ತು. ಕೋವಿಡ್‌ ಸೋಂಕಿತೆ ಎಂಬಂತೆ ಅವರ ಶವವನ್ನು ವಿಶೇಷವಾಗಿ ಸುತ್ತಿ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಕನ್ನಡ ಜನಮನ ವೇದಿಕೆ ಅಧ್ಯಕ್ಷ ರಾಜು ಮಾತನಾಡಿ, ಆಸ್ಪತ್ರೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಶಾಮೀಲಾಗಿ ಕೋವಿಡ್‌ಇಲ್ಲದವರಿಗೂಪಾಸಿಟಿವ್‌ ವರದಿ ಕೊಟ್ಟು ಅವರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸುವ ಕುತಂತ್ರ ನಡೆಸಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಣಧೀರ ಪಡೆ ಉಪಾಧ್ಯಕ್ಷ ಗೋವಿಂದರಾಜು, ಒಕ್ಕಲಿಗರ ವೇದಿಕೆ ಅಧ್ಯಕ್ಷ ಪ್ರಭಾಕರ್‌, ಕಲಾಸಂಗಮ ಟ್ರಸ್ಟ್‌ ಅಧ್ಯಕ್ಷ ಎಸ್‌.ಬಿ. ಲಿಂಗೇಗೌಡ, ರೈತ ಮುಖಂಡ ಶಿವಕುಮಾರ್‌, ನಾರಾಯಣ, ಹಾಗೂ ಸಂಬಂಧಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.