ಬೆಳೆ ಸಮೀಕ್ಷೆ; ರೈತರು ವಂಚಿತರಾಗದಿರಲಿ


Team Udayavani, Sep 26, 2020, 9:02 PM IST

ಬೆಳೆ ಸಮೀಕ್ಷೆ; ರೈತರು ವಂಚಿತರಾಗದಿರಲಿ

ಗದಗ: ಬೆಳೆ ಸಮೀಕ್ಷೆ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗಬಾರದು. ನಿಗದಿತ ಅವಧಿಯೊಳಗೆ ಜಂಟಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಪಂ ವಿಡಿಯೋ ಕಾನ್ಫೆರೆನ್ಸ್‌ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫ ರೆನ್ಸ್‌ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆ-ಜಾನುವಾರುಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು. ಪ್ರತಿವರ್ಷ ಪ್ರವಾಹಕ್ಕೆ ಹೆಚ್ಚು ಹಾನಿಯಾಗುವ ಗ್ರಾಮಗಳಾದ ಲಕಮಾಪುರ ಹಾಗೂ ಕೊಣ್ಣೂರು ಗ್ರಾಮಗಳ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಸ್ಥಳ ಗುರುತಿಸಿ ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕರ ಒಪ್ಪಿಗೆ ಪಡೆದು ಗ್ರಾಮ ಸಭೆಯಲ್ಲಿ ಠರಾವು ಅನುಮೋದಿ ಸಿ ಸೂಕ್ತ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸೂಚನೆ ನೀಡಿದರು.

ಮನೆಯಲ್ಲಿಯೇ ಕ್ವಾರಂಟೈನ್‌ ಹಾಗೂ ಐಸೋಲೇಷನ್‌ ಇರುವವರ ಮೇಲೆ ನಿಗಾ ವಹಿಸಲು ತಾಲೂಕುಗಳಲ್ಲಿ ಪ್ರತ್ಯೇಕ ತಂಡ ಮಾಡಿಕೊಂಡು ನಿಗಾ ವಹಿಸಬೇಕು. ಮನೆ-ಮನೆಗೆ ಆರೋಗ್ಯ ಸಮೀಕ್ಷಾ ಕಾರ್ಯ ಕೈಗೊಂಡು ವೃದ್ಧರ ನಿಯಮಿತ ಆರೋಗ್ಯ ತಪಾಸಣೆ ಮಾಡಬೇಕು. ಅಗ್ಯವಿದ್ದಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಅಲ್ಲದೇ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ನಿಗಾವಹಿಸಬೇಕು ಎಂದರು.

ಕೋವಿಡ್‌ ತಪಾಸಣೆ ಪರೀಕ್ಷೆ, ಚಿಕಿತ್ಸೆ ಸೇವೆ ಸೌಲಭ್ಯ ಸರ್ಕಾರ ಉಚಿತವಾಗಿ ನೀಡುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಿಗೆ ತೆರಳಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ದೃಢಪಟಲ್ಲಿ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಉಚಿತ ವಸತಿ, ಊಟೋಪಚಾರ ಸೇರಿದಂತೆ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಕೋವಿಡ್‌ ಸೋಂಕಿನಿಂದ ಮೃತಪಟ್ಟಲ್ಲಿ ಅಂತ್ಯಕ್ರಿಯೆ ನೆರವೇರಿಸಲು ತಾಲೂಕು ಮಟ್ಟದಲ್ಲಿ ರಚಿಸಲಾದ ತಂಡಗಳು ಕೋವಿಡ್‌ ಮಾರ್ಗಸೂಚಿಗಳನ್ವಯ ಅಂತ್ಯಕ್ರಿಯೆ ಸರಿಯಾಗಿ ನಿರ್ವಹಿಸಬೇಕು ಎಂದರು.

ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಕಳೆದ ವರ್ಷ ಮಂಜೂರು ಆಗಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳ್ಳಬೇಕು. ಜಿಲ್ಲೆಯ ಪ್ರತಿ ಗ್ರಾಮಗಳಿಗೂ ಸ್ಮಶಾನ ಇರಬೇಕು, ಸ್ಮಶಾನ ಭೂಮಿ ಅಗತ್ಯವಿರುವ ಗ್ರಾಮಗಳಿಗೆ ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿದ್ದಲ್ಲಿ ಮಂಜೂರಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರೇತರ ಭೂಮಿ ಇದ್ದಲ್ಲಿ ಖರೀದಿಸಿ ಗ್ರಾಮಗಳಿಗೆ ಸ್ಮಶಾನ ಮಾಡಿಕೊಡಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಡಾ| ಆನಂದ.ಕೆ, ಎಸಿ ರಾಯಪ್ಪ ಹುಣಸಗಿ, ಎಸ್‌.ಎನ್‌. ರುದ್ರೇಶ್‌, ಡಾ| ಸತೀಶ ಬಸರಿಗಿಡದ, ರುದ್ರೇಶಪ್ಪ ಟಿ.ಎಸ್‌ ಇತರರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.