ಕರ್ನಾಟಕ ಬಂದ್‌ ಗೆ ಬೆಂಬಲ


Team Udayavani, Sep 27, 2020, 4:43 PM IST

ಕರ್ನಾಟಕ ಬಂದ್‌ ಗೆ ಬೆಂಬಲ

ಸಾಂದರ್ಭಿಕ ಚಿತ್ರ

ಯಾದಗಿರಿ: ರೈತ ವಿರೋಧಿ  ಹಾಗೂ ಬಂಡವಾಳಿಗರ ಪರವಾದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಹಾಗೂ ವಿದ್ಯುತ್‌ ಕಾಯ್ದೆ ತಿದ್ದುಪಡಿಗಳ ವಿರುದ್ಧ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಸೆ.28ರ ಕರ್ನಾಟಕ ಬಂದ್‌ಗೆ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿಯು ಕೃಷಿ ಉತ್ಪಾದನೆ, ಕೃಷಿ ಮಾರುಕಟ್ಟೆಗಳನ್ನು ಕಾರ್ಪೋರೇಟ್‌ ಕಂಪನಿಗಳಿಗೆ ನಿರ್ಬಂಧ ರಹಿತವಾಗಿ ತೆರೆದಿಡಲು ಹೊರಟಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಕೂಡ ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗೆ ಜಾರಿ ತರುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಕೈ ಹಾಕಿದೆ. ಇವೆಲ್ಲದರಿಂದಾಗಿ ಸಣ್ಣ ಮತ್ತು ಬಡ ರೈತರೇ ಬಹುಪಾಲು ಇರುವ ಈ ದೇಶದಲ್ಲಿ ಅವರೆಲ್ಲರೂ ವಿನಾಶದ ಅಂಚಿಗೆ ತಳ್ಳಲ್ಪಡುತ್ತಾರೆ. ಸರ್ಕಾರದ ನೀತಿ ಖಂಡಿಸಿ ಸೆ.28ರಂದು ಕರ್ನಾಟಕ ಬಂದ್‌ ಹಮ್ಮಿಕೊಂಡಿವೆ. ಎಲ್ಲ ಕಾರ್ಮಿಕರು, ದುಡಿಯುವ ಜನತೆ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.

ಹೋರಾಟಕ್ಕೆ ಕಾಂಗ್ರೆಸ್‌ ಕಿಸಾನ್‌ ಘಟಕ ಬೆಂಬಲ : ಯಾದಗಿರಿ: ಕೇಂದ್ರ ಸರ್ಕಾರದ ಕೃಷಿ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಸೆ.28ರ ಬಂದ್‌ಗೆ ಜಿಲ್ಲಾ ಕಾಂಗ್ರೆಸ್‌ ಕಿಸಾನ್‌ ಘಟಕ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಡಿಸಿಸಿ ಕಿಸಾನ್‌ ಸೆಲ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದಿ, ಸಣ್ಣ ಅತಿ ಸಣ್ಣ ರೈತರ ಪಾಲಿಗೆ ಮಾರಕವಾಗುವಂತಹ ಕಾನೂನು ತರ ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ. ಈ ಮಸೂದೆಗಳು ರೈತರ ಪಾಲಿಗೆ ಕರಾಳ ದಿನಗಳನ್ನು ತರುವ ಶಾಸನ ಎಂದಿದ್ದಾರೆ. ಹೋರಾಟಕ್ಕೆ ಕಾಂಗ್ರೆಸ್‌ ರೈತ ಘಟಕದಿಂದ ಬೆಂಬಲಿಸಿ ಪಾಲ್ಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.