ಪ್ರತಿಭಟನೆಗೆ ಸೀಮಿತವಾದ ಬಂದ್‌


Team Udayavani, Sep 29, 2020, 3:49 PM IST

ಪ್ರತಿಭಟನೆಗೆ ಸೀಮಿತವಾದ ಬಂದ್‌

ಸಾಂದರ್ಭಿಕ ಚಿತ್ರ

ಬೀದರ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆ ಜಾರಿ ವಿರೋಧಿ ಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ “ಕರ್ನಾಟಕ ಬಂದ್‌’ಗೆ ಗಡಿ ಜಿಲ್ಲೆ ಬೀದರನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.

ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬಂದ್‌ ಗೆ ಯಾವುದೇ ಸ್ಪಂದನೆ ಸಿಗಲಿಲ್ಲ. ನಗರದ ಗಾಂಧಿ  ಗಂಜ್‌ನ ಅಡತ್‌, ಕೃಷಿ ಯಂತ್ರೋಪಕರಣ ಮತ್ತು ಔಷಧ ಅಂಗಡಿಗಳ ಮಾರುಕಟ್ಟೆ ಮಾತ್ರ ಬಂದ್‌ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು. ಇವನ್ನು ಹೊರತುಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದ್ದವು. ಆಟೋ, ಬಸ್‌ ಸಂಚಾರ ಸಾಮಾನ್ಯವಾಗಿತ್ತು.

ನಗರದಲ್ಲಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಎಐಕೆಎಸ್‌, ಕೆಆರ್‌ಆರ್‌ಎಸ್‌, ಡಿಎಸ್‌ಎಸ್‌, ಕಲ್ಯಾಣ

ಕನಾಟಕ ರೈತ ಸಂಘದ, ಎಐಟಿಯುಸಿ, ಬಿಕೆಎಂಯು, ಎಐಟಿಐ ಹಾಗೂ ದಲಿತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ನಗರದ ಅಂಬೇಡ್ಕರ್‌ ವೃತ್ತದಿಂದ ಭಗತಸಿಂಗ್‌ ವೃತ್ತ, ತಹಶೀಲ್ದಾರ್‌ ಕಚೇರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಬಳಿಕ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಪ್ರತಿಭಟನಾಕಾರರು ಮಾತನಾಡಿ, ಭೂ ಸುಧಾರಣೆಗೆ ಕಾಯ್ದೆ ಜಾರಿ ಮೂಲಕ

ಸರ್ಕಾರ ರೈತ-ಕೃಷಿ ಕಾರ್ಮಿಕರ ಮತ್ತು ಭೂ ರಹಿತ ಬಡಜನರ ಪರವಾದ ಆಶಯಗಳನ್ನೇ ನಾಶ ಮಾಡಿ ಬಂಡವಾಳಶಾಹಿ ಮತ್ತು ಕಾರ್ಪೋರೇಟ್‌ ವಲಯಕ್ಕೆ ಅನುಕೂಲ ಮಾಡಿಕೊಡಲು ಹೊರಟಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸದಿದ್ದರೆ ಬಂಡವಾಳಶಾಹಿಗಳ ಕಪ್ಪು ಹಣದ ಆಮಿಷಕ್ಕೆ ಸಿಲುಕಿ ತಮ್ಮ ನೆಲದಲ್ಲಿ ತಾವೇ ತಬ್ಬಲಿಗಳಾಗಬೇಕಾದ ದುಸ್ಥಿತಿ ಭೂಮಿ ನಂಬಿದವರಿಗೆ ಬರುವುದು ನಿಶ್ಚಿತ ಎಂದು ಎಚ್ಚರಿಸಿದರು.

ಖಾಸಗಿ ಸಂಘ-ಸಂಸ್ಥೆಗಳಿಗೆ ದೀರ್ಘ‌ ಕಾಲದವರೆಗೆ ಗುತ್ತಿಗೆಗೆ ನೀಡಲಾಗಿದ್ದ ಜಮೀನನ್ನು ಸಹ ಗುತ್ತಿಗೆದಾರರಿಗೆ ಪರಭಾರೆ ಮಾಡಲು ಸರ್ಕಾರನಿರ್ಧರಿಸಿದೆ. ಈ ರೀತಿ ಪ್ರಜಾಸತ್ತಾತ್ಮಕವಲ್ಲದ ವಿಧಾನಗಳಲ್ಲಿ ನೈಸರ್ಗಿಕ ಸಂಪನ್ಮೂಲವನ್ನು ಕೆಲವು ಶ್ರೀಮಂತರು, ಬಂಡವಾಳಶಾಹಿಗಳ ಒಡೆತನಕ್ಕೆಒಪ್ಪಿಸುವುದು ಸಮಾನತೆ ತತ್ವಕ್ಕೆ ವಿರುದ್ಧವಾದುದು. ಆದ್ದರಿಂದ ಇಂತಹ ಅಮಾನುಷ ಆದೇಶಗಳಿಂದ ಜನರಿಗೆ ಉಳಿಗಾಲವಿಲ್ಲ ಎಂದರು.

ಬಿಜೆಪಿ ಸರ್ಕಾರದ ಈ ಅನೈತಿಕ ನಿರ್ಧಾರದಿಂದ ಭೂ-ಒಡೆತನದ ಕನಸು ಕಂಡ ಲಕ್ಷಾಂತರ ಭೂ ರಹಿತರ ಕೃಷಿ ಕಾರ್ಮಿಕರ ಆಸೆಗೆ ಬಿಜೆಪಿ ಸರ್ಕಾರ ಕೊಳ್ಳಿ ಇಟ್ಟುಶಾಶ್ವತವಾಗಿ ಅವರನ್ನು ಭೂಹೀನರನ್ನಾಗಿಸುತ್ತಿದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ, ಎಐಕೆಎಸ್‌ ಉಪಾಧ್ಯಕ್ಷ ಬಾಬುರಾವ್‌ ಹೊನ್ನಾ, ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಮುಖರಾದ ನಜೀರ್‌ ಅಹ್ಮದ್‌, ಖಾಸೀಮ್‌ ಅಲಿ, ಅರ್‌.ಪಿ. ರಾಜಾ, ರವಿರಾಜ್‌, ದಯಾನಂದ ಸ್ವಾಮಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.