ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸಲು ಚಿಂತನೆ


Team Udayavani, Oct 1, 2020, 1:04 PM IST

kadugolla

ತುಮಕೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿವಾಗಿ ಅತಿ ಹಿಂದುಳಿದ ಸಮುದಾಯವಾಗಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡಿರುವ ಸಿಎಂ ಬಿಎಸ್‌ವೈ ಈ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎನ್ನುವುದು ಎಲ್ಲರ ಒತ್ತಾಯವಾಗಿದೆ, ಅದು ಸರ್ಕಾರದ ಚಿಂತನೆಯಲ್ಲಿದೆ ಎಂದು ಬಿಜಿಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ ಗೌಡ ಹೇಳಿದರು.

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಬುಧವಾರ ರಾಜ್ಯ ಕಾಡು ಗೊಲ್ಲ ಯುವಸೇನೆ, ಗೊಲ್ಲ ಸಮುದಾಯದ ಮುಖಂಡರಿಂದ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡಲು ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಭಾವಚಿತ್ರಕ್ಕ ಹಾಲಿನ ಅಭಿಷೇಕ ಸಮಾರಂಭದಲ್ಲಿ ಮಾತನಾಡಿದರು.

ಸಮುದಾಯಕ್ಕೆ ವಿಶೇಷ ಸೌಲಭ್ಯ ನೀಡಿ: ಈ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಮಾಡಿರುವ ಮುಖ್ಯಮಂತ್ರಿಯವರಿಗೆ ಸಮಸ್ತ ಕರ್ನಾಟಕ ಕಾಡುಗೊಲ್ಲರ ಪರವಾಗಿಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಕಾಡುಗೊಲ್ಲರು ಸಮುದಾಯವನ್ನು ಎಸ್‌.ಟಿಗೆ ಸೇರಿಸಿ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡುವಂತೆ ಹಾಗೆ ಸಮುದಾಯಕ್ಕೆ ವಿಶೇಷ ಸೌಲಭ್ಯ ನೀಡುವಂತೆ ಬಹುದಿನದ ಒತ್ತಾಯ ಮಾಡಿಕೊಂಡು ಬಂದಿದ್ದರು, ಕಾಡುಗೊಲ್ಲರ ಧ್ವನಿಯನ್ನು ಮನಗಂಡ ಸಿಎಂ ಬಿ.ಎಸ್‌.ಯಡಿಯೂರಪ್ಪರವರು ನಿನ್ನೆ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಮಾಡಿ, ನಿಗಮಕ್ಕೆ 50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ: ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಮಾತನಾಡಿ, ಕಾಡುಗೊಲ್ಲ ಸಮುದಾಯದವರು ಹಾಗೂ ಸಂಘದವರು ಬಹಳ ದಿನಗಳಿಂದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡುವಂತೆ ಒತ್ತಾಯ ಮಾಡಲಾಗುತ್ತಿತ್ತು, ಕಾಡುಗೊಲ್ಲರ ಮನವಿಯನ್ನು ಮನಗಂಡು ಬಿ.ಎಸ್‌.ವೈ ಚಿತ್ರದುರ್ಗದ ಹೊಳಲ್ಕೆರೆ ಕ್ಷೇತ್ರದಲ್ಲಿ ಪರಿವರ್ತನ ಯಾತ್ರೆ ಮಾಡುವಾಗ ಕಾಡುಗೊಲ್ಲ ಜನಾಂಗಕ್ಕೆ ಅಭಿವೃದ್ಧಿ ನಿಗಮ ಮಾಡುವುದಾಗಿ ಭರವಸೆಕೊಟ್ಟಿದ್ದರು, ಅದರಂತೆ ಮಂಗಳವಾರ ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡುವ ಮೂಲಕ ಸಮುದಾಯಕ್ಕೆ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಹಿರಿಯರಲ್ಲಿ ಮನವಿ: ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಜಿಲ್ಲಾಧ್ಯಕ್ಷ ಬಿ. ಸುರೇಶ್‌ಗೌಡ ಹಾಗೂ ಹಿಂದುಳಿದ ಮೋರ್ಚಾದ ರವಿಕುಮಾರ್‌ಜೀ ಅವರ ಜೊತೆಗೆ ಶಿರಾ ತಾಲೂಕಿನ ಪ್ರತಿಯೊಂದು ಹಳ್ಳಿ, ಹಳ್ಳಿಗೂ ಹೋಗಿ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಕಾಡುಗೊಲ್ಲರಿಗೂ ಒಂದು ಅವಕಾಶ ಕೊಡಿ ಎಂದು ಪಕ್ಷದ ಹಿರಿಯರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಪಕ್ಷದ ರಾಜ್ಯ ಹಾಗೂ ರಾಷ್ಟ್ರ ನಾಯಕರ ತೀರ್ಮಾನದಂತೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸಮುದಾಯವನ್ನು ಎಸ್ಟಿಗೆ ಸೇರಿಸಿ: ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣಮುದ್ದಯ್ಯ ಮಾತನಾಡಿ, ಚಿತ್ರ ದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು ಸೇರಿದಂತೆ ಹಲವು ಕಡೆ ಕಾಡುಗೊಲ್ಲ ಸಮುದಾಯದವರು ಹೆಚ್ಚು ಸಂಖ್ಯೆಯಲ್ಲಿದ್ದು ಕುರಿ ಹಾಗೂ ಪಶುಗಳನ್ನು ಸಾಕಿಕೊಂಡು ಬದುಕು ನಡೆಸುತ್ತಿದ್ದೇವೆ, ನಮ್ಮ ಸಮುದಾಯದ ಸಂಕಷ್ಟ ಅರಿತಿರುವ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪರವರು ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡುವ ಮೂಲಕ ಸಮುದಾಯ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್‌.ಟಿಗೆ ಸೇರಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್‌ ಹಾಗೂ ಸಂಸದ ಜಿ.ಎಸ್‌ ಬಸವರಾಜುರವನ್ನು ಅಭಿನಂದಿಸಲಾಯಿತು.
ಸಮುದಾಯದ ಮುಖಂಡ ಡಾ.ಶಿವಕುಮಾರಸ್ವಾಮಿ, ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಚಂದ್ರಶೇಖರ್‌, ರಾಜ್ಯ ಕಾಡುಗೊಲ್ಲ ಯುವಸೇನೆಯ ರಾಜ್ಯಧ್ಯಕ್ಷ ರಮೇಶ್‌, ಜಿಲ್ಲಾಧ್ಯಕ್ಷ ಜಯಕೃಷ್ಣ, ಎಪಿಎಂಸಿಉಪಾಧ್ಯಕ್ಷ ಶಿವರಾಜು, ಶಿರಾಯೋಜನಾ ಪ್ರಾಧಿಕಾರದ ಅಧ್ಯಕ್ಷ ಈರಣ್ಣ, ಬಿಜೆಪಿ ಮುಖಂಡ ಎಸ್‌.ಆರ್‌ ಗೌಡ, ಜಿಪಂ ಸದಸ್ಯೆ ಯಶೋಧಮ್ಮ, ಜೆ.ಜಗದೀಶ್‌ ಡಾ.ಶಿವಕುಮಾರ ಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.